LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಪತ್ರಕರ್ತರ ಸಹಕಾರ ಸಂಘದ ಕ್ಯಾಲೆಂಡರ್ ಬಿಡುಗಡೆ ಮಾಡಿದ ಸಿಎಂ

ಬೆಂಗಳೂರು: ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ವಿಶಿಷ್ಟವಾಗಿ ಹೊರತಂದಿರುವ 2025ರ ಕ್ಯಾಲೆಂಡರ್ ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಕ್ರಾಂತಿ ಹಬ್ಬದ ದಿನದಂದು ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದರು.ಮುಖ್ಯಮಂತ್ರಿ ಗೃಹ ಕಚೇರಿ ಕಾವೇರಿಯಲ್ಲಿ ಕ್ಯಾಲೆಂಡರ್ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಘಕ್ಕೆ 75 ವರ್ಷ ಪೂರೈಸಿದ್ದೀರಿ ಎಂಬುದೇ ಹೆಗ್ಗಳಿಕೆ. ಪತ್ರಕರ್ತರ ಸಹಕಾರ ಸಂಘಕ್ಕೆ ಒಳ್ಳೆಯದಾಗಲಿ, ಎಲ್ಲ ನಿರ್ದೇಶಕರಿಗೆ ಸಕ್ರಾಂತಿ ಶುಭಾಶಯಗಳು ಎಂದು ಹಾರೈಸಿದರು.

ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ 75ನೇ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ನಾನು ತುಂಬಾ ಸಂತೋಷದಿಂದ ಬರುತ್ತೇನೆ. ಆದರೆ ನನಗೆ ತುಸು ಸಮಯ ಕೊಡಿ ಎಂದು ಹೇಳಿದರು. ಬಜೆಟ್ ಹಿನ್ನಲೆಯಲ್ಲಿ ಸ್ವಲ್ಪ ಬ್ಯೂಸಿಯಾಗಿದ್ದೇನೆ ಎಂದರು.ಇದೇವೇಳೆ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಬೃಹತ್ ಕೈಗಾರಿಕೆ ಸಚಿವರಾದ ಎಂ.ಬಿ.ಪಾಟೀಲ್, ಶಾಸಕರಾದ ರಘುಮೂರ್ತಿ, ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕೂಡ ಪತ್ರಕರ್ತರ ಸಹಕಾರ ಸಂಘಕ್ಕೆ ಶುಭ ಹಾರೈಸಿದರು.

ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷ ಎಂ.ರಮೇಶ್ ಪಾಳ್ಯ, ಉಪಾಧ್ಯಕ್ಷ ದೊಡ್ಡ ಬೊಮ್ಮಯ್ಯ, ಖಜಾಂಚಿ ಬಿ.ಮೋಹನ್ ಕುಮಾರ್, ಕೆ.ಎಸ್.ಸೋಮಶೇಖರ್, ವಿನೋದ್ ಕುಮಾರ್ ಬಿ. ನಾಯ್ಕ್, ರಮೇಶ್ ಹಿರೇಜಂಬೂರು, ಕೆ.ವಿ.ಪರಮೇಶ್, ಆನಂದ್ ಬೈದನಮನೆ, ಪಿ.ಎಸ್.ಕೃಷ್ಣಕುಮಾರ್, ನಯನಾ ಸೇರಿದಂತೆ ಸಂಘದ ಎಲ್ಲ ನಿರ್ದೇಶಕರು, ಕಾರ್ಯದರ್ಶಿ ಕೆಂಪರಾಜು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು