LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಪತ್ರಕರ್ತ ವೆಂಕಟೇಶ ಸಂಪ ಅವರಿಗೆ ‘ಬೇಂದ್ರೆ ನುಡಿ ಸಿರಿ’ ಪ್ರಶಸ್ತಿ ಪ್ರದಾನ

ಕನಕ ಅಧ್ಯಯನ ಪೀಠ,ಕರ್ನಾಟಕ ವಿಶ್ವ ವಿದ್ಯಾನಿಲಯ, ಧಾರವಾಡ, ಚೇತನಾ ಫೌಂಡೇಶನ್ ನೀಡುವ ರಾಜ್ಯ ಮಟ್ಟದ "ಬೇಂದ್ರೆ ನುಡಿ ಸಿರಿ ಪ್ರಶಸ್ತಿ"ಯನ್ನು ಕರ್ನಾಟಕ ವಿಶ್ವ ವಿದ್ಯಾನಿಲಯದ ಕನಕ ಭವನದಲ್ಲಿ ಖ್ಯಾತ ಪತ್ರಕರ್ತ ವೆಂಕಟೇಶ ಎಸ್ ಸಂಪ ಅವರಿಗೆ ಪ್ರದಾನ ಮಾಡಲಾಯಿತು.

ಮೂರು ದಿನಗಳ ದಾರವಾಡ ನುಡಿ ಸಡಗರ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಪತ್ರಿಕೋದ್ಯಮದ ಸಾಧನೆಗೆ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು. ೧೭ ವರ್ಷಗಳಿಂದ ನಿರಂತರವಾಗಿ, ಧನಾತ್ಮಕ ಪತ್ರಿಕೆ, ಸಂಪದ ಸಾಲು ಪತ್ರಿಕೆ ನಡೆಸುತ್ತಿರುವ, ವೆಂಕಟೇಶ ಎಸ್ ಸಂಪ ಅವರ ಸಾವಿರಾರು ಲೇಖನ, ಕತೆ, ಕವನಗಳು ರಾಜ್ಯದ ಬಹುತೇಕ ಪತ್ರಿಕೆಗಳಲ್ಲಿ ಪ್ರಕಟವಾಗಿದೆ.

ಹಾಗು ಹಲವಾರು ಟಿ ವಿ ಮತ್ತು ರೇಡಿಯೋ ಕಾರ್ಯಕ್ರಮ ನೆಡೆಸಿಕೊಟ್ಟಿದ್ದು, ಹಲವು ಸಿನಿಮಾ, ಧಾರಾವಾಹಿಗಳಲ್ಲಿ ಅಭಿನಯಿಸಿದ್ದಾರೆ. ಸಾವಯವ ಕೃಷಿ, ರಕ್ತದಾನ, ಪ್ರಕೃತಿ ರಕ್ಷಣೆಯ ಜಾಗೃತಿ ಕಾರ್ಯಕ್ರಮ ಸೇರಿದಂತೆ ಬಹುಮುಖ ಪ್ರತಿಭೆಯ ವೆಂಕಟೇಶ ಸಂಪ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದ್ದೇವೆ ಎಂದು ಸಂಚಾಲಕ ಚಂದ್ರಶೇಖರ್ ಮಾಡಲಗೇರಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಹಿರಿಯ ಸಾಹಿತಿಗಳಾದ ಶಶಿಧರ ನರೇಂದ್ರ, ಯೋಗೇಶ್ ಮಾಸ್ಟರ್, ಕರ್ನಾಟಕ ವಿಶ್ವ ವಿದ್ಯಾನಿಲಯದ ಸಂಯೋಜಕರಾದ ಡಾ.ಹನುಮೇಗೌಡ ಸಿ, ಚೇತನಾ ಫೌಂಡೇಶನ್ ನ ಚಂದ್ರಶೇಖರ್,ಇತರರು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು