LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಪತ್ರಿಕೋದ್ಯಮದ ಆದ್ಯತೆ ಸತ್ಯ ನಿಷ್ಠೆಯಿಂದ ಪಕ್ಷ ನಿಷ್ಠೆಗೆ ಜಾರಿ ಈಗ ವ್ಯಕ್ತಿ ನಿಷ್ಠತೆ ಕಡೆಗೆ ಜಾರುತ್ತಿದೆ: ಕೆ.ವಿ.ಪಿ

ಮೈಸೂರು: ಪತ್ರಿಕೋದ್ಯಮದ ಆದ್ಯತೆ ಸತ್ಯ ನಿಷ್ಠೆಯಿಂದ ಪಕ್ಷ ನಿಷ್ಠೆಗೆ ಜಾರಿ ಈಗ ವ್ಯಕ್ತಿ ನಿಷ್ಠತೆ ಕಡೆಗೆ ಜಾರುತ್ತಿದೆ. ಹೀಗಾಗಿ ವೃತ್ತಿ ನೈತಿಕತೆ ಮತ್ತು ತಂತ್ರಜ್ಞಾನದ ಸವಾಲುಗಳನ್ನು ಜೀರ್ಣಿಸಿಕೊಂಡು ವೃತ್ತಿಪರತೆ ರೂಪಿಸಲು ಮಾಧ್ಯಮ ಅಕಾಡೆಮಿಯಿಂದ ಕಾರ್ಯಾಗಾರ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ನುಡಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಮಾಧ್ಯಮ ಅಕಾಡೆಮಿ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಮೈಸೂರು ವಿಶ್ವವಿದ್ಯಾಲಯದ ಸಹಭಾಗಿತ್ವದ "ಏನ್ ಸಮಾಚಾರ ಮೀಡಿಯಾ ಹಬ್ಬ" ಎರಡು ದಿನಗಳ ಕಾರ್ಯಾಗಾರದ ಸಮಾರೋಪ ಭಾಷಣದಲ್ಲಿ ನುಡಿದರು.ಪತ್ರಿಕೋದ್ಯಮಕ್ಕೆ ಭವಿಷ್ಯ ಇಲ್ಲಪ್ಪಾ, ಬೇರೆ ಏನಾದ್ರೂ ಮಾಡೋಣ ಅಂತಿದೀನಿ ಅಂತ ನನ್ನ ಸ್ನೇಹಿತರು ಹೇಳ್ತಾನೇ ಇರ್ತಾರೆ.

ನಿಜ, ಇವತ್ತು ನಾವು-ನೀವು ಅನುಭವಿಸುತ್ತಿರುವ ದಾವಂತದ, ಊಹಾ ಪತ್ರಿಕೋದ್ಯಮಕ್ಕೆ ಭವಿಷ್ಯ ಇಲ್ಲ.ಆದರೆ, ವೃತ್ತಿಪರ ಸತ್ಯ ನಿಷ್ಠ ಪತ್ರಿಕೋದ್ಯಮಕ್ಕೆ ಭವಿಷ್ಯ ಉಜ್ವಲವಾಗಿದೆ. ಸತ್ಯನಿಷ್ಠೆಯ ಪತ್ರಿಕೋದ್ಯಮಕ್ಕೆ ಸಂದರ್ಭ ಹದವಾಗಿದೆ ಎಂದರು.ವಿದ್ಯಾರ್ಥಿಗಳು ಪತ್ರಿಕೋದ್ಯಮದ ಕೌಶಲ್ಯ, ತಂತ್ರಜ್ಞಾನ ಎಲ್ಲವನ್ನು ಕಲಿಯುವ ಜೊತೆಗೆ ಹೊಣೆಗಾರಿಕೆಯನ್ನೂ ಅರಿತುಕೊಳ್ಳುವುದು ಅತ್ಯಂತ ಅಗತ್ಯವಾಗಿದೆ.ಪತ್ರಿಕೋದ್ಯಮ ಹಿಂದೆ ಸೇವೆಯಾಗಿತ್ತು. ಇಂದು ಉದ್ಯಮವಾಗಿದೆ. ಹಿಂದೆ ವಸ್ತುನಿಷ್ಠತೆ ಪತ್ರಿಕೋದ್ಯಮದ ಜೀವ ಸೆಲೆ ಆಗಿತ್ತು. ಆದರೆ ಇಂದು ವ್ಯಕ್ತಿ ನಿಷ್ಠತೆ ಪಿಡುಗು ಆತಂಕಕಾರಿಯಾಗಿ ಬೆಳೆಯುತ್ತಿದೆ ಎಂದರು.

ಕಳೆದ ವಾರ ಕಲಬುರಗಿಯಲ್ಲಿ ಇದೇ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಲ್ಲಿಗಿಂತ ಮೈಸೂರಿನ ಮಾಧ್ಯಮ ಹಬ್ಬ ಹೆಚ್ಚು ಯಶಸ್ವಿಯಾಗಿದೆ. ಇದಕ್ಕೆ ವಿದ್ಯಾರ್ಥಿಗಳ ಪರಿಣಾಮಕಾರಿ ಪಾಲ್ಗೊಳ್ಳುವಿಕೆ ಪ್ರಮುಖ ಕಾರಣ ಎಂದರು.ಆದ್ದರಿಂದ ಜನರಿಗೆ ಸರಿಯಾದ ಮಾಹಿತಿನೀಡುವ ನಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳುವಂತಿಲ್ಲ. ಇದನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು. ಮಾಧ್ಯಮ ರಂಗದಲ್ಲಿ ನಾವು ಅಪೇಕ್ಷಿಸುವ ಬದಲಾವಣೆ ನಿಮ್ಮಿಂದಲೇ ಪ್ರಾರಂಭವಾಗಲಿ. ಸತ್ಯದ ಅನ್ವೇಷಣೆ ಹಾಗೂ ವಾಸ್ತವವನ್ನೇ ಜನರಮುಂದಿಡುವ ಸಂಕಲ್ಪವನ್ನು ನೀವು, ವಿದ್ಯಾರ್ಥಿಗಳು ಮಾಡಬೇಕು ಎಂದು ಕರೆ ನೀಡಿದರು.ಎರಡು ದಿನಗಳ ಕಾರ್ಯಾಗಾರದಲ್ಲಿ ನಡೆದವಿವಿಧ ವಿಭಾಗಗಳ ಸ್ಫರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಕೆ.ವಿ.ಪ್ರಭಾಕರ್ ಅವರು ಪ್ರಶಸ್ತಿ ಮತ್ತು ಪ್ರಶಸ್ತಿಪತ್ರಗಳನ್ನು ವಿತರಿಸಿ ಶುಭ ಹಾರೈಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು