ನವದೆಹಲಿ: ಚುನಾವಣಾ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಹೋರಾಟ ನಡೆಸಲು ಸಿಜೆಪಿಗೆ ಜಂತರ್ ಮಂತರ್‌ನಲ್ಲಿ ಅವಕಾಶ ನೀಡಲು ಪೊಲೀಸರು ನಿರಾಕರಿಸಿದ್ದಾರೆ. ಈ ಹಿಂದೆ ನಡೆದ ಘಟನಾವಳಿಗಳ ಹಿನ್ನೆಲೆಯಲ್ಲಿ ಸಿಜೆಪಿ ಪ್ರತಿಭಟನೆಗೆ ಕೋರಲಾಗಿದ್ದ ಅವಕಾಶಕ್ಕೆ ಅನುಮತಿ ನೀಡಲಾಗುವುದಿಲ್ಲ ಎಂದು ದೆಹಲಿ ಜಂಟಿ ಪೊಲೀಸ್ ಆಯುಕ್ತ ನೂಪುರ್ ಪ್ರಸಾದ್ ತಿಳಿಸಿದ್ದಾರೆ.ಪ್ರತಿಭಟನೆಗೆ ಅವಕಾಶ ನೀಡಲು 10 ದಿನಗಳ ಮುಂಚೆಯೇ ಅವಕಾಶ ಕೇಳಬೇಕಾಗಿತ್ತು. ಆದರೆ ತಡವಾಗಿ ಅನುಮತಿ ಕೇಳಲಾಗಿದೆ. ಈ ಹಿನ್ನೆಲೆಯಲ್ಲಿ ಅವಕಾಶ ನೀಡಲಾಗುವುದಿಲ್ಲ ಎಂದು ಹೇಳಲಾಗಿದೆ.ಇಂದು ಪ್ರತಿಭಟನೆಗೆ ಸಜ್ಜಾಗಿ ಬರುತ್ತಿದ್ದ ಪ್ರತಿಭಟನಾಕಾರರನ್ನು ವಿವಿಧೆಡೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸುಮಾರು 1000ಕ್ಕೂ ಹೆಚ್ಚು ಜನರನ್ನು ಈಗಾಗಲೇ ವಶಕ್ಕೆ ಪಡೆಯಲಾಗಿದೆ.ಜಂತರ್ ಮಂತರ್ ಸುತ್ತಲಿನ 40 ಸ್ಥಳಗಳಲ್ಲಿ ಬಂದು ಹೋಗುವವರನ್ನು ಪರಿಶೀಲಿಸಲಾಗುತ್ತಿದೆ. ಈಗಾಗಲೇ ಮುಂಜಾಗೃತ ಕ್ರಮವಾಗಿ ದೆಹಲಿಯ 45 ಮೆಟ್ರೋ ಸ್ಟೇಷನ್‌ಗಳಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದೆ.ಕೇರಳ ಭವನದ ಬಳಿ ಪ್ರತಿಭಟನೆ ನಡೆಸುತ್ತಿದ್ದ ಮಾಜಿ ಸಿಎಂ ಪಿಣರಾಯಿ ವಿಜಯನ್ ಸೇರಿದಂತೆ ಸಿಪಿಐಎಂ ನಾಯಕರು ಹಾಗೂ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ.