LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Belagavi

ಪರಸ್ಪರ ಶುಭಾಶಯ ಕೋರಿದ ಶಾಸಕರು..

ವಿಧಾನಸಭೆ(ಬೆಳಗಾವಿ): ಇಂದು ಬೆಳಿಗ್ಗೆ ಸದನ ಆರಂಭಕ್ಕೆ ಮುನ್ನಾ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರು ಪರಸ್ಪರ ಉಭಯಕುಶಲೋಪರಿ ನಡೆಸಿದರು.
ಪಕ್ಷ ಭೇಧವಿಲ್ಲದೆ ಶಾಸಕರು, ಪರಸ್ಪರ ಯೋಗಕ್ಷೇಮವನ್ನು ವಿಚಾರಿಸಿದರು.ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು, ತಮ್ಮ ವಿರೋಧಿ ಬಣದಲ್ಲಿ ಗುರುತಿಸಿಕೊಂಡಿರುವ ಎಸ್.ಟಿ. ಸೋಮಶೇಖರ್ ಅವರನ್ನು ಭೇಟಿ ಮಾಡಿ ಉಭಯಕುಶಲೋಪಹರಿ ನಡೆಸಿದರು.

ಸಂಡೂರಿನಿಂದ ಇತ್ತೀಚೆಗೆ ಆಯ್ಕೆಯಾದ ಅನ್ನಪೂರ್ಣ ಅವರ ಪತಿ ಹಾಗೂ ಸಂಸದ ಇ. ತುಕಾರಾಂ ಅವರು ಸದನ ಆರಂಭಕ್ಕೂ ಮುನ್ನ ಆಗಮಿಸಿ ಪತ್ರಕರ್ತರ ಗ್ಯಾಲರಿಯಲ್ಲಿ ಕುಳಿತಿದ್ದರು.ವಿರೋಧಪಕ್ಷಕದ ನಾಯಕ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್‍ಬಾಬು ಅವರ ಸಹ ಆಡಳಿತ ಪಕ್ಷದ ಹಲವು ಸದಸ್ಯರಿಗೆ ಶುಭಾಶಯಕೋರಿದರು.

     

ಸಚಿವ ಸಂತೋಷ್ ಲಾಡ್ ಅವರು ಸದನಕ್ಕೆ ಆಗಮಿಸಿ ನೂತನವಾಗಿ ಆಯ್ಕೆಯಾದ ಸದಸ್ಯರನ್ನು ಪರಿಚಯಿಸಿದರು.
ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿಯವರು ಬಿಜೆಪಿ ಶಾಸಕರಿದ್ದ ಸಾಲುಗಳತ್ತ ಆಗಮಿಸಿ ತಮ್ಮ ಗೆಳೆಯರಿಗೆ ಶುಭಾಶಯಕೋರಿದರು. ಇತ್ತೀಚೇಗೆ ನಡೆದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಜಯಗಳಿಸಿರುವ ಸಂಡೂರಿನ ಅನ್ನಪೂರ್ಣ, ಶಿಗ್ಗಾಂವಿ ಯಾಸೀರ್ ಪಠಾಣ್, ಚನ್ನಪಟ್ಟಣದ ಸಿ.ಪಿ.ಯೋಗೇಶ್ವರ್ ಅವರಿಗೆ ಪ್ರಮಾಣ ವಚನ ಬೋಧಿಸಲು ಸಭಾಧ್ಯಕ್ಷ ಯು.ಟಿ.ಖಾದರ್ ಕಾರ್ಯದರ್ಶಿ ಸೂಚಿಸಿದರು. ಮೂವರು ಶಾಸಕರೂ ಭಗವಂತನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು