LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಪರಿಶಿಷ್ಟ ಜಾತಿ ಒಳ ಮೀಸಲಾತಿ: ನಾಗಮೋಹನದಾಸ್ ನೇತೃತ್ವದಲ್ಲಿ ಏಕಸದಸ್ಯ ಆಯೋಗ ರಚನೆ

ಬೆಂಗಳೂರು: ಪರಿಶಿಷ್ಟ ಜಾತಿಗಳಿಗೆ (ಎಸ್‌ಸಿ) ಒಳಮೀಸಲಾತಿ ಜಾರಿಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನ್ಯಾಯಮೂರ್ತಿ ಎಚ್‌ಎನ್ ನಾಗಮೋಹನ್ ದಾಸ್ ನೇತೃತ್ವದಲ್ಲಿ ಏಕಸದಸ್ಯ ಆಯೋಗ ರಚಿಸಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಶಿಕ್ಷಣ ಮತ್ತು ಸರಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ ವಿವಿಧ ಉಪಜಾತಿಗಳಿಗೆ ಸೇರಿದವರ ಪ್ರಾತಿನಿಧ್ಯತೆ ಕುರಿತು ಪ್ರಾಯೋಗಿಕ ಅಂಕಿಅಂಶ ಪಡೆದು ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಬಗ್ಗೆ ಸೂಕ್ತ ಶಿಫಾರಸಿನೊಂದಿಗೆ ಆಯೋಗವು 2 ತಿಂಗಳ ಒಳಗಾಗಿ ವರದಿ ಸಲ್ಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ರಾಜ್ಯದಲ್ಲಿ ಒಳಮೀಸಲಾತಿ ಜಾರಿ ಸಂಬಂಧ ಅ.28ರಂದು ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು. ಈ ವೇಳೆ ಯಾವ ದತ್ತಾಂಶದ ಆಧಾರದ ಮೇಲೆ ಒಳಮೀಸಲಾತಿ ನಿಗದಿ ಮಾಡಬೇಕೆಂಬ ಕುರಿತು ಪ್ರತ್ಯೇಕ ಆಯೋಗ ರಚಿಸಿ ವರದಿ ಪಡೆಯಲಾಗುವುದು. ಅಲ್ಲಿಯವರೆಗೂ ಯಾವುದೇ ನೂತನ ನೇಮಕಾತಿ ಅಧಿಸೂಚನೆ ಮಾಡುವುದಿಲ್ಲ ಎಂದು ತಿಳಿಸಲಾಗಿತ್ತು.

ಅದರಂತೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅಧ್ಯಕ್ಷತೆಯಲ್ಲಿ ಆಯೋಗ ರಚಿಸಲಾಗಿದೆ. ಈ ಮೂಲಕ ನಾಲ್ಕು ದಶಕಗಳ ಪರಿಶಿಷ್ಟ ಜಾತಿಯ ಬೇಡಿಕೆಗೆ ಸರ್ಕಾರ ಸ್ಪಂದಿಸಿದಂತಾಗಿದೆ. ಇದರಿಂದ ಒಳಮೀಸಲು ಜಾರಿ ನಿರ್ಣಾಯಕ ಘಟ್ಟ ತಲುಪಿದಂತಾಗಿದೆ.

ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಯೊಳಗೆ 101 ಉಪಗುಂಪುಗಳಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಹಿಂದೆ ಹೇಳಿಕೆ ನೀಡಿದ್ದು, ಈ ಎಲ್ಲ ವರ್ಗಗಳನ್ನು ಸೇರಿಸಿ ಪರಿಗಣಿಸಲು ವೈಜ್ಞಾನಿಕ ವಿಧಾನದೊಂದಿಗೆ ಒಳ ಮೀಸಲಾತಿಯನ್ನು ಜಾರಿಗೆ ತರಲು ಸರ್ಕಾರ ಶ್ರಮಿಸುತ್ತಿದೆ ಎಂದು ತಿಳಿಸಿದ್ದರು. ಆದರೆ, ಪ್ರತಿಪಕ್ಷಗಳು ಆಯೋಗ ರಚನೆಯ ಕ್ರಮ ಒಳಮೀಸಲಾತಿ ಜಾರಿ ವಿಳಂಬಗೊಳಿಸುವ ಪ್ರಯತ್ನವಾಗಿದೆ ಎಂದು ಬಣ್ಣಿಸಿವೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು