LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿಶೇಷ ಯೋಜನೆ(ಎಸ್.ಸಿ.ಎಸ್.ಪಿ, ಟಿ.ಎಸ್.ಪಿ) ಫೆಬ್ರವರಿ ಅಂತ್ಯದೊಳಗೆ ಶೇ.100 ರಷ್ಟು ಪ್ರಗತಿ ಸಾಧಿಸಲು ಅಧಿಕಾರಿಗಳಿಗೆ ಡಿ.ಸಿ ಸೂಚನೆ

ಬೆಂ ಗ್ರಾ.ಜಿಲ್ಲೆ: 2024-25 ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ, ಟಿ.ಎಸ್.ಪಿ ಯೋಜನೆಯಡಿ ಇಲಾಖೆಗಳಿಗೆ ಬಿಡುಗಡೆ ಆಗಿರುವ ಅನುದಾನವನ್ನು ಫೆಬ್ರವರಿ ಮಾಹೆಯ ಅಂತ್ಯದೊಳಗೆ ವ್ಯಯಿಸುವ ಮೂಲಕ ಶೇಕಡ 100ರಷ್ಟು ಪ್ರಗತಿ ಸಾಧಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂ ಗಣದಲ್ಲಿ ನಡೆದ ಎಸ್.ಸಿ.ಪಿ-ಟಿ.ಎಸ್.ಪಿ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಸರ್ಕಾರದಿಂದ ಎಸ್.ಸಿ.ಎಸ್.ಪಿ, ಟಿ.ಎಸ್.ಪಿ ಯೋಜನೆಯಡಿ ಇಲಾಖೆಗಳಿಗೆ ಬಿಡುಗಡೆಯಾಗಿರುವ ಅನುದಾನವು ಸರಿಯಾಗಿ, ಸಮರ್ಪಕವಾಗಿ ಬಳಕೆಯಾಗಬೇಕು. ಕೆಲವು ಇಲಾಖೆಗಳು ಈಗಾಗಲೇ ಶೇಕಡ 100 ರಷ್ಟು ಪ್ರಗತಿ ಸಾಧಿಸಿದ್ದು, ಉಳಿದ ಇಲಾಖೆಗಳು ಫೆಬ್ರವರಿ ಅಂತ್ಯದೊಳಗೆ ಸಂಪೂರ್ಣ ಅನುದಾನ ಖರ್ಚು ಮಾಡಿ ಪ್ರಗತಿ ವರದಿ ನೀಡಬೇಕು ಎಂದರು.

ಫಲಾನುಭವಿಗಳ ಆಯ್ಕೆ ಪಾರದರ್ಶಕವಾಗಿರಬೇಕು, ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವಶ್ಯಕತೆ ಇರುವವರಿಗೆ ಸೌಲಭ್ಯ ಕಲ್ಪಿಸಿ. ಪ.ಜಾತಿ, ಪ.ಪಂಗಡಗಳು ವಾಸಿಸುವ ಗ್ರಾಮಗಳಲ್ಲಿ ಹದಗೆಟ್ಟ ರಸ್ತೆಗಳನ್ನು ಗುರುತಿಸಿ ರಸ್ತೆಗಳನ್ನು ನಿರ್ಮಿಸಿ. ಕಳೆದ ಸಾಲಿನಲ್ಲಿ ಸೌಲಭ್ಯ ಪಡೆದಿರುವ ಫಲಾನುಭವಿಗಳ ಈಗಿನ ಆರ್ಥಿಕ ಸ್ಥಿತಿಗತಿ, ಅನುದಾನ ಸದ್ಬಳಕೆ ಆಗಿದೆಯೇ? ಇಲ್ಲವೇ? ಎಂಬುದನ್ನು ಪರಿಶೀಲಿಸಿ ವರದಿ ನೀಡಿ ಎಂದರು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಟಿ.ಎಲ್.ಎಸ್ ಪ್ರೇಮ, ಜಿ.ಪಂ ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಕಲಾವತಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುನೀಲ್ ಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕರಾದ ಅಶೋಕ್ ಕುಮಾರ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ್ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು