LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಪರ್ಸಂಟೇಜ್ ವಾರ್: 60% ಕಮೀಷನ್‌ಗೆ ದಾಖಲೆ ಕೇಳಿದ್ದ ಸಿದ್ದರಾಮಯ್ಯಗೆ ಕುಮಾರಸ್ವಾಮಿ ತಿರುಗೇಟು

ಬೆಂಗಳೂರು: ಆಧಾರವಿಲ್ಲದೆ ಆರೋಪದ ಮಾತೆಲ್ಲಿ ಬಂತು ಮಾನ್ಯ ಮುಖ್ಯಮಂತ್ರಿಗಳೇ? ನಿಮ್ಮ ಪಕ್ಷದ ಪರವೇ ಇರುವ ಗುತ್ತಿಗೆದಾರರು, ತುಮಕೂರಿನ ನಿಮ್ಮ ಕಾಂಗ್ರೆಸ್​ ಪಕ್ಷದ ಮುಖಂಡರೇ ಮಾಡಿದ ಆರೋಪ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ಮಾಡಿದ್ದಾರೆ. ಆ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಮತ್ತೆ ಕಿಡಿಕಾರಿರುವ ಅವರು, 60% ಕಮಿಷನ್​​ ವಿಚಾರವಾಗಿ ದಾಖಲೆ ಕೊಡಿ ಎಂದಿದ್ದ ಸಿಎಂ ಸಿದ್ದರಾಮಯ್ಯಗೆ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಹೆಚ್.ಡಿ.ಕುಮಾರಸ್ವಾಮಿ, ನಮ್ಮ ಪಕ್ಷದ ಸರಕಾರಕ್ಕಿಂತ ಹಿಂದಿನ ರಾಜ್ಯ ಬಿಜೆಪಿ ಸರಕಾರವೇ ವಾಸಿ ಇತ್ತು ಎಂದು ಅಲವತ್ತುಕೊಂಡಿದ್ದರು ನಿಮ್ಮ ಪಕ್ಷದ ಗುತ್ತಿಗೆದಾರರು! ಕಾಂಗ್ರೆಸ್ ಸರಕಾರದಲ್ಲೂ 40% ಕಮೀಶನ್ ಸುಲಿಗೆ ಮಾಡಲಾಗುತ್ತಿದೆ ಎಂಬುದು ಅವರ ನೇರವಾಗಿ ಆರೋಪಿಸಿದ್ದರು. ಕಮೀಶನ್ ವ್ಯವಹಾರ ಇಲ್ಲ ಎಂದಾದರೆ, ‘ಯಾಕಪ್ಪಾ ಹಾಗೆ ಹೇಳಿದಿರಿ?’ ಎಂದು ಅವರನ್ನೇ ಕರೆದು ಕೇಳಬೇಕಿತ್ತು. ಕೇಳಲಿಲ್ಲ ಯಾಕೆ ಎಂದು ಪ್ರಶ್ನಿಸಿದ್ದಾರೆ.

ಪ್ರತಿ ಆರೋಪಕ್ಕೂ ಈಗ ದಾಖಲೆ ಕೇಳುವ ನೀವು, ಬಿಜೆಪಿ ಸರಕಾರದ ಮೇಲೆ 40% ಕಮೀಶನ್ ಆರೋಪ ಮಾಡಿ, ಪುಟಗಟ್ಟಲೇ ಜಾಹೀರಾತು ಕೊಟ್ಟರಲ್ಲಾ.. ಆಗ ಎಷ್ಟು ದಾಖಲೆ ನೀಡಿದ್ದೀರಿ? ನಿಮ್ಮ ರಾಜಕೀಯ ಜೀವನದಲ್ಲಿ ಎಂದಾದರೂ ದಾಖಲೆ ಇಟ್ಟು ಆರೋಪ ಮಾಡಿದ್ದೀರಾ?

ದಾವಣಗೆರೆ ಗುತ್ತಿಗೆದಾರನೊಬ್ಬ ದಯಾಮರಣ ಕರುಣಿಸಿ ಎಂದು ನಿಮ್ಮ ಘನ ಸನ್ನಿಧಾನಕ್ಕೆ ಹಾಗೂ ಮಾನ್ಯ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಅವರಿಗೆ ಬಾಕಿ ಹಣ ಕೊಡಿಸುತ್ತೀರೋ ಅಥವಾ ದಯಾಮರಣ ಕರುಣಿಸುತ್ತೀರೋ..? ಕಮೀಶನ್ ದುರಾಸೆ ಬಿಟ್ಟು ಮೊದಲು ಆ ಗುತ್ತಿಗೆದಾರನನ್ನು ರಕ್ಷಿಸಿ. 60% ಕಮೀಶನ್! ಮುಖ್ಯಮಂತ್ರಿ ಹಿಟ್ ಅಂಡ್ ರನ್!! ಎಂದು ವಾಗ್ದಾಳಿ ಮಾಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು