LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಯುಗಾರಂಭ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಸೇರಿದಂತೆ ಐವರು ಪ್ರಮಾಣ ಸ್ವೀಕಾರ

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಕೊಲ್ಕತ್ತಾ ಇಂದು ಕೇಸರಿಮಯವಾಗಿದೆ. ರಾಜ್ಯದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಅವರು ಇಂದು ಅದ್ಧೂರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.ಕೋಲ್ಕತ್ತಾದ ಐತಿಹಾಸಿಕ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದ ಈ ಭವ್ಯ ಸಮಾರಂಭದಲ್ಲಿ, ರಾಜ್ಯಪಾಲ ಆರ್.ಎನ್. ರವಿ ಅವರು ಸುವೇಂದು ಅಧಿಕಾರಿಯವರಿಗೆ ಪದವಿ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು. ಈ ಮೂಲಕ ಅವರು ಬಂಗಾಳದ 9ನೇ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೇರಿದ್ದಾರೆ.ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಕೇಂದ್ರದ ಪ್ರಮುಖ ಸಚಿವರು ಆಗಮಿಸಿದ್ದರು. ಅಲ್ಲದೆ, ವಿವಿಧ ರಾಜ್ಯಗಳ ಎನ್‌ಡಿಎ ಮುಖ್ಯಮಂತ್ರಿಗಳು ಮತ್ತು ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ಅಧಿಕಾರಿ ಅಧಿಕಾರ ವಹಿಸಿಕೊಂಡರು.
ಶುಕ್ರವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಸುವೇಂದು ಅವರನ್ನು ಶಾಸಕರು ಸರ್ವಾನುಮತದಿಂದ ನಾಯಕರನ್ನಾಗಿ ಆಯ್ಕೆ ಮಾಡಿದ್ದರು. 2020ರಲ್ಲಿ ತೃಣಮೂಲ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಸುವೇಂದು ಅಧಿಕಾರಿ, ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇವರ ಸಂಘಟನಾ ಶಕ್ತಿ ಮತ್ತು ಹೋರಾಟವನ್ನು ಅಮಿತ್ ಶಾ ಅವರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.ಸುವೇಂದು ಅಧಿಕಾರಿ ಅವರೊಂದಿಗೆ ಇತರ ಶಾಸಕರಾದ ದಿಲೀಪ್ ಘೋಷ್, ಅಗ್ನಿಮಿತ್ರಾ ಪೌಲ್, ಅಶೋಕ್ ಕಿರ್ತನ್ಯ, ಕ್ಷುದಿರಂ ತಡು, ನಿಶಿತ್ ಪ್ರಾಮಾಣಿಕ್ ಸಚಿವರಾಗಿ ಪ್ರಮಾಣ ಸ್ವೀಕಾರ ಮಾಡಿದರು. ರಾಜ್ಯಪಾಲ ಆರ್.ಎನ್ ರವಿ ಪ್ರಮಾಣ ವಚನ ಬೋಧಿಸಿದರು.
ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್, ರಾಜನಾಥ್ ಸಿಂಗ್, ಜೆಪಿ ನಡ್ಡಾ, ನಿತೀನ್ ಗಡ್ಕರಿ, ಧರ್ಮೇಂದ್ರ ಪ್ರಧಾನ್, ಶಿವರಾಜ್ ಸಿಂಗ್, ಸುರೇಶ್ ಗೋಪಿ, ಸಿಎಂಗಳಾದ ಯೋಗಿ ಆದಿತ್ಯನಾಥ, ಚಂದ್ರಬಾಬು ನಾಯ್ಡು ಸೇರಿ ಹಲವು ಗಣ್ಯರು ಭಾಗಿಯಾಗಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು