LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಪಾಕ್ ಗೆಲುವಿಗೆ ಭಾರತ ಕಾತರ: ಸೆಮಿಫೈನಲ್ ಹಾದಿ ಮುಚ್ಚಿಲ್ಲ

ಹೊಸದಿಲ್ಲಿ: ಮಹಿಳೆಯರ ಟಿ20 ವಿಶ್ವಕಪ್ ಪಂದ್ಯಾವಳಿಯ ಭಾನುವಾರದ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ 9 ರನ್ ಗಳ ಸೋಲು ಕಂಡಿರುವ ಭಾರತ ತಂಡಕ್ಕೆ ಇನ್ನೂ ಸೆಮಿಫೈನಲ್ ಹಾದಿ ಮುಚ್ಚಿಲ್ಲ. ಆದರೆ ಸೆಮಿಫೈನಲ್ ಹಾದಿಗಾಗಿ ನ್ಯೂಝಿಲೆಂಡ್ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಫಲಿತಾಂಶಕ್ಕೆ ಕಾಯಬೇಕಿದೆ.

ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 20ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 151 ರನ್ ಗಳಿಸಿತ್ತು. ಸಾಧಾರಣ ಗುರಿಯನ್ನು ಆರಂಭದಲ್ಲಿ ಉತ್ತಮವಾಗಿ ಬೆನ್ನಟ್ಟಿದ ಭಾರತದ ವನಿತೆಯರು ಕೊನೆಗೆ 9 ವಿಕೆಟ್ ನಷ್ಟಕ್ಕೆ 142 ರನ್ ಗಳಿಸಲಷ್ಟೇ ಸಾಧ್ಯವಾಯಿತು. ಈ ಗೆಲುವಿನೊಂದಿಗೆ ಆಸ್ಟ್ರೇಲಿಯಾ ತಂಡ ಎ ಬಣದ ಅಗ್ರಸ್ಥಾನಿಯಾಗಿ ಸೆಮಿಫೈನಲ್ ತಲುಪಿದೆ.

ಉಳಿದ ಇನ್ನೊಂದು ಸ್ಥಾನಕ್ಕೆ ಭಾರತ, ನ್ಯೂಜಿಲೆಂಡ್ ಮತ್ತು ಪಾಕಿಸ್ತಾನ ತಂಡಗಳ ನಡುವೆ ಪ್ರಬಲಪೈಪೋಟಿ ಇದೆ. ಭಾರತದ ಸೆಮಿಫೈನಲ್ ಹಾದಿ ಕಠಿಣ
ವಾದರೂ ಭಾರತದ ಅವಕಾಶದ ಬಾಗಿಲು ಮುಚ್ಚಿಲ್ಲ.ಪಾಕಿಸ್ತಾನ ಮತ್ತು ಶ್ರೀಲಂಕಾ ವಿರುದ್ಧದ ಗೆಲುವಿನೊಂದಿಗೆ ಸದ್ಯಕ್ಕೆ ಭಾರತ ಎರಡನೇ ಸ್ಥಾನದಲ್ಲಿದೆ. ಮೂರನೇ ಸ್ಥಾನದಲ್ಲಿರುವ ನ್ಯೂಜಿಲೆಂಡ್ ತಂಡ ಭಾರತದ ಭವಿಷ್ಯವನ್ನು ನಿರ್ಧರಿಸಲಿದೆ.

ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಗೆಲುವು ಸಾಧಿಸಿದಲ್ಲಿ ನ್ಯೂಜಿಲೆಂಡ್ ನೇರವಾಗಿ ಸೆಮೀಸ್ ಗೆ ಅರ್ಹತೆ ಪಡೆಯುತ್ತದೆ. ಆದರೆ ಅಚ್ಚರಿಯ ಫಲಿತಾಂಶದಲ್ಲಿ ಪಾಕಿಸ್ತಾನ ಗೆದ್ದರೆ, ಭಾರತದ ಸೆಮಿಫೈನಲ್ ಹಾದಿ ತೆರೆಯುತ್ತದೆ. ನಿವ್ವಳ ರನ್ ರೇಟ್ ಆಧಾರದಲ್ಲಿ ನ್ಯೂಝಿಲೆಂಡ್ ಗಿಂತ ಮುಂದಿರುವ ಭಾರತ ಸೆಮಿಫೈನಲ್ ಗೆ ಮುನ್ನಡೆಯುತ್ತದೆ.ಆದ್ದರಿಂದ ಭಾರತದ ಭವಿಷ್ಯ ಈಗ ಪಾಕಿಸ್ತಾನ ಮತ್ತು ನ್ಯೂಝಿಲೆಂಡ್ ನಡುವಿನ ಫಲಿತಾಂಶವನ್ನು ಆಧರಿಸಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು