LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಪಾಕ್ ಪ್ರಜೆಗಳ ಬಂಧನ ಪ್ರಕರಣ ಕೋರ್ಟ್‍ಗೆ ದೋಷಾರೋಪ ಪಟ್ಟಿ

ಬೆಂಗಳೂರು: ಅಕ್ರಮವಾಗಿ ನೆಲೆಸಿದ್ದ ಪಾಕ್ ಪ್ರಜೆಗಳ ಬಂಧನ ಪ್ರಕರಣದ ತನಿಖೆ ಪೂರ್ಣಗೊಳಿಸಿದ ಜಿಗಣಿ ಪೊಲೀಸರು ಕೋರ್ಟ್‍ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.ಸುಮಾರು 1,350ಕ್ಕೂ ಹೆಚ್ಚು ಪುಟಗಳ ಚಾರ್ಜ್‍ಶೀಟ್ ಸಲ್ಲಿಕೆ ಮಾಡಲಾಗಿದ್ದು, 18 ಆರೋಪಿಗಳ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಸಿದ್ದಾರೆ.
ಇನ್ನು ಪೊಲೀಸರ ತನಿಖೆ ವೇಳೆ ಹಲವು ಮಹತ್ವದ ವಿಚಾರಗಳು ಬೆಳಕಿಗೆ ಬಂದಿದೆ.

ಹಣ ವರ್ಗಾವಣೆ, ಅಕ್ರಮವಾಗಿ ಭಾರತಕ್ಕೆ ಎಂಟ್ರಿ, ಉದ್ಯೋಗ, ಧರ್ಮ ಬೋಧನೆ ವಿಚಾರಗಳನ್ನು ಪೊಲೀಸರು ಬಯಲಿಗೆಳೆದಿದ್ದಾರೆ.ಬಂಧಿತ 18 ಮಂದಿಯೂ ಪಾಕ್ ಮೂಲದ ಪ್ರಜೆಗಳಾಗಿದ್ದು, ದೇಶದಿಂದ ಬಹಿಷ್ಕರಿಸಲ್ಪಟ್ಟಿದ್ದರು. ಹಾಗಾಗಿಯೇ ಕಳೆದ ಮೂರ್ನಾಲ್ಕು ವರ್ಷಗಳ ಹಿಂದೆಯೇ ಭಾರತಕ್ಕೆ ಬಂದು ಬೇರೆ ಬೇರೆ ರಾಜ್ಯಗಳಲ್ಲಿ ವಾಸ ಮಾಡುತ್ತಿದ್ದರು.

ಹೆಚ್ಚಾಗಿ ದೆಹಲಿ, ಕರ್ನಾಟಕದ ಬೆಂಗಳೂರು (ಆನೇಕಲ್ ಸಮೀಪದ ಜಿಗಣಿ ಹಾಗೂ ಪೀಣ್ಯದಲ್ಲಿ) ಮತ್ತು ದಾವಣಗೆರೆಯಲ್ಲಿ ನೆಲೆಸಿದ್ದರು.ಅಕ್ರಮವಾಗಿ ಭಾರತಕ್ಕೆ ಬಂದಿದ್ದ ಇವರು, ತಮ್ಮದೇ ಯೂಟ್ಯೂಬ್ ಚಾನೆಲ್ ತೆರೆದು ಧರ್ಮ ಬೋಧನೆ ಮಾಡುತ್ತಿದ್ದರು.ಈ ಎಲ್ಲಾ ಅಂಶಗಳನ್ನು ಆಧರಿಸಿ ತನಿಖೆ ನಡೆಸಿದ್ದ ಪೊಲೀಸರು ಹಲವು ಮಹತ್ವದ ಸಾಕ್ಷ್ಯಗಳನ್ನು ಕಲೆಹಾಕಿದ್ದರು.

ಈ ವೇಳೆ ಪಾಕ್ ಪ್ರಜೆಗಳು ಸೇರಿದಂತೆ ಹಲವು ಮಂದಿಯ ಹೇಳಿಕೆ ದಾಖಲು ಮಾಡಲಾಗಿದೆ. ತಾಂತ್ರಿಕ ಸಾಕ್ಷ್ಯಗಳು, ಸಿಡಿಆರ್ ರಿಪೋರ್ಟ್, ಟವರ್ ಡಂಪ್, ಯೂಟ್ಯೂಬ್ ಚಾನೆಲ್ ವಿವರಗಳನ್ನ ಕಲೆಹಾಕಿದ್ದು, ಚಾರ್ಜ್‍ಶೀಟ್‍ನಲ್ಲಿ ಉಲ್ಲೇಖಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು