LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಪಾಕ್ ವಿರುದ್ಧದ ಗೆಲುವಿನಲ್ಲಿ ವಿರಾಟ್ ನಿರ್ಣಾಯಕ ಪಾತ್ರ: ರೋಹಿತ್ ಬಣ್ಣನೆ

ಕಿಂಗ್ ವಿರಾಟ್ ಕೊಹ್ಲಿ ಅವರ ಅತ್ಯಮೋಘ ಶತಕದ ಜತೆಗೆ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಸಂಘಟನಾತ್ಮಕ ಹೋರಾಟ ಪ್ರದರ್ಶಿಸಿದ ಭಾರತ ತಂಡ ಪ್ರಸಕ್ತ ಚಾಂಪಿಯನ್ಸ್ ಟ್ರೋಫಿಯ ಹೈವೋಲ್ಟೇಜ್ ಹಣಾಹಣಿಯಲ್ಲಿ 6 ವಿಕೆಟ್‍ಗಳಿಂದ ಪಾಕಿಸ್ತಾನ ತಂಡವನ್ನು ಬಗ್ಗು ಬಡಿಯಿತು. ಇದರೊಂದಿಗೆ ಸತತ ಎರಡು ಪಂದ್ಯಗಳಲ್ಲಿ ಜಯ ದಾಖಲಿಸಿದ ರೋಹಿತ್ ಶರ್ಮ ಸಾರಥ್ಯದ ಟೀಮ್ ಇಂಡಿಯಾ ಎ ಗುಂಪಿನಿಂದ ಸೆಮಿಫೈನಲ್ ಪ್ರವೇಶವನ್ನು ಖಚಿತಪಡಿಸಿಕೊಳ್ಳುವಲ್ಲಿ ಯಶಸ್ವಿಯಾಯಿತು.

ಭಾರತ-ಪಾಕ್ ನಡುವಿನ ಕದನದಲ್ಲಿ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್‍ನಲ್ಲಿ 14 ಸಾವಿರ ರನ್ ಪೂರೈಸಿದರು. ಈ ಮೂಲಕ 14 ಸಾವಿರ ರನ್ ಪೂರೈಸಿದ ಜಗತ್ತಿನ 3ನೇ ಹಾಗೂ ಭಾರತದ 2ನೇ ಆಟಗಾರ ಎನಿಸಿಕೊಂಡರು. ಸಚಿನ್ ತೆಂಡೂಲ್ಕರ್ ಮತ್ತು ಶ್ರೀಲಂಕಾದ ಕುಮಾರ ಸಂಗಕ್ಕಾರ ಇತರರು.ವಿರಾಟ್ ಕೊಹ್ಲಿ ಪಾಕ್ ವಿರುದ್ಧದ ಪಂದ್ಯದಲ್ಲಿ ತಮ್ಮ 51ನೇ ಏಕದಿನ ಶತಕ ಬಾರಿಸುವ ಮೂಲಕ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

ತಂಡದ ಗೆಲುವಿಗೆ ಎರಡು ರನ್ ಅವಶ್ಯಕತೆ ಇದ್ದಾಗ, ಕೊಹ್ಲಿಗೆ ಶತಕ ಪೂರೈಸಲು ನಾಲ್ಕು ರನ್‍ಗಳ ಅಗತ್ಯವಿತ್ತು. ಆಗ ಆಫ್‍ಸೈಡ್‍ನಲ್ಲಿ ಬೌಂಡರಿ ಬಾರಿಸುವ ಮೂಲಕ ಕೊಹ್ಲಿ ಶತಕ ಪೂರ್ಣಗೊಳಿಸಿದರು. ಕೊಹ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನಕ್ಕೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೆಚ್ಚುಗೆ ವ್ಯಕ್ತಪಡಿಸಿದರು. ಪಂದ್ಯದ ಬಳಿಕ ನಾಯಕ ರೋಹಿತ್ ಶರ್ಮಾ ಮಾತನಾಡುತ್ತಾ, ವಿರಾಟ್ ಕೊಹ್ಲಿ ದೇಶವನ್ನು ಪ್ರತಿನಿಧಿಸುವುದನ್ನು ಇಷ್ಟಪಡುತ್ತಾನೆ. ಅವನು ಮಾಡುವುದನ್ನು ಉತ್ತಮವಾಗಿಯೇ ಮಾಡುತ್ತಾನೆ.

ಅದನ್ನೇ ಇಂದು ಕೂಡ ಮಾಡಿದ. ಡ್ರೆಸ್ಸಿಂಗ್ ರೂಮ್‍ನಲ್ಲಿ ಕುಳಿತಿರುವ ನಾವೆಲ್ಲ ಅವನು ಮಾಡಿದ್ದನ್ನು ನೋಡಿ ಆಶ್ಚರ್ಯಪಟ್ಟಿಲ್ಲ ಎಂದು ಹೇಳಿದರು. ಕೊಹ್ಲಿ ಶತಕದ ಹೊಸ್ತಿಲಿನಲ್ಲಿದ್ದಾಗ ಮತ್ತು ಭಾರತ ಗೆಲುವಿನತ್ತ ಸಾಗುತ್ತಿದ್ದಾಗ, ರೋಹಿತ್ ಡ್ರೆಸ್ಸಿಂಗ್ ರೂಂನಿಂದ ಕೆಲವು ದೊಡ್ಡ ಹೊಡೆತಗಳನ್ನು ಬಾರಿಸಿ ಶತಕ ಪೂರ್ಣಗೊಳಿಸಲು ಕೊಹ್ಲಿಯನ್ನು ಪ್ರೋತ್ಸಾಹಿಸುತ್ತಿರುವುದು ಕಂಡುಬಂದಿತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು