LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಪಾದಯಾತ್ರೆಗೆ ಬೆಂಬಲವಿಲ್ಲ ದೆಹಲಿಯಲ್ಲಿ ಕೇಂದ್ರ ಮಂತ್ರಿ ಜೆಡಿಎಸ್‌ನ ಎಚ್‌ಡಿಕೆ ಹೇಳಿಕೆ

ನವದೆಹಲಿ: ಈ ತಿಂಗಳ ೩ರಿಂದ ಮೈಸೂರಿನ ಮುಡಾ ಹಗರಣ ವಿರೋಧಿಸಿ ಬಿಜೆಪಿ ವತಿಯಿಂದ ಹಮ್ಮಿಕೊಳ್ಳಲಾಗಿರುವ ಬೆಂಗಳೂರಿನಿಂದ ಮೈಸೂರುವರೆಗಿನ ಪಾದಯಾತ್ರೆಗೆ ತಮ್ಮ ಪಕ್ಷದ ಬೆಂಬಲವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಜೆಡಿಎಸ್‌ನ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ದೆಹಲಿಯಲ್ಲಿಂದು ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಆದರೆ, ಇದಕ್ಕೆ ಜೆಡಿಎಸ್ ಬೆಂಬಲ ಇಲ್ಲ ಎಂದು ತಿಳಿಸಿರುವ ಅವರು, ಪಾದಯಾತ್ರೆ ವಿಚಾರದಲ್ಲಿ ನಮ್ಮನ್ನು (ಜೆಡಿಎಸ್) ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಹೀಗಾಗಿ ಅದಕ್ಕೆ ನಮ್ಮ ಬೆಂಬಲವಿಲ್ಲ.

ಪಾದಯಾತ್ರೆಗೆ ಬೆಂಬಲ ನೀಡದೇ ಇರುವ ಬಗ್ಗೆ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರು ಮಂಗಳವಾರದ ಸಭೆಯಲ್ಲಿ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಅವರು ತಿಳಿಸಿದರು.ಕೇರಳದಲ್ಲಿ ಮಳೆಯಿಂದ ನೂರಾರು ಜನರ ಜೀವಕ್ಕೆ ಹಾನಿಯಾಗಿದೆ. ರಾಜ್ಯದಿಂದ ಹೋದವರು ವಾಪಸ್ ಬರಲು ಸಮಸ್ಯೆ ಎದುರಿಸುತ್ತಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಯೆಲ್ಲೋ, ರೆಡ್ ಅಲರ್ಟ್ ಘೋಷಣೆ ಆಗಿದೆ. ಮತ್ತೊಂದೆಡೆ, ಈಗ ಎಲ್ಲರೂ ಕೃಷಿ ಚಟುವಟಿಕೆಯಲ್ಲಿ ಭಾಗವಹಿಸುವ ಸಮಯ. ಹೀಗಾಗಿ ಪಾದಯಾತ್ರೆಯಲ್ಲಿ ಜೆಡಿಎಸ್ ಭಾಗವಹಿಸುವುದಿಲ್ಲ ಎಂದು ಅವರು ತಿಳಿಸಿದರು.

ಬಿಜೆಪಿಯ ಪಾದಯಾತ್ರೆ ಬಗ್ಗೆ ಅವರೇ ತೀರ್ಮಾನ ತೆಗೆದುಕೊಂಡು ಮಾಡುತ್ತಿದ್ದಾರೆ. ಈ ಸಮಯದಲ್ಲಿ ಪಾದಯಾತ್ರೆ ಸೂಕ್ತವಲ್ಲ ಎಂಬುದು ನಮ್ಮ ನಿಲುವು. ಹೀಗಾಗಿ ಅದರಿಂದ ಹಿಂದೆ ಸರಿದಿದ್ದೇವೆ. ಆ ಭಾಗದ ಜನರ ಭಾವನೆ ಮುಖ್ಯ. ಹಾಗಾಗಿ ಪಾದಯಾತ್ರೆಯಲ್ಲಿ ಭಾಗಿಯಾಗಲ್ಲ ಎಂದು ಕುಮಾರಸ್ವಾಮಿ ಹೇಳಿದರು.

ಈ ಹಿಂದೆ ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆ ಸಂದರ್ಭದಲ್ಲಿಯು ಬಿಜೆಪಿ ಬಗ್ಗೆ ಕುಮಾರಸ್ವಾಮಿ ತುಸು ಅಸಮಾಧಾನ ವ್ಯಕ್ತಪಡಿಸಿದ್ದರು. ಕೇವಲ ೨ ಸೀಟಿಗಾಗಿ ಇಷ್ಟೆಲ್ಲ ಒದ್ದಾಡಬೇಕಾ ಎಂದಿದ್ದು ಬಹಳಷ್ಟುಚರ್ಚೆಗೆ ಗ್ರಾಸವಾಗಿತ್ತು. ಇದೀಗ ಅವರು ಕೇಂದ್ರ ಸಚಿವರಾಗಿದ್ದು ಕೊಂಡು ಮೈತ್ರಿ ಪಕ್ಷದ ಬಗ್ಗೆ ಅಸಮಾಧಾನದ ಹೇಳಿಕೆ ನೀಡಿರುವುದು ರಾಜಕೀಯ ವಲಯದಲ್ಲಿ ಭಾರಿ ಮಹತ್ವ ಪಡೆದುಕೊಂಡಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು