LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

`ಪಿಎಲ್‍ಡಿ ಬ್ಯಾಂಕ್ ರೈತ ಭಾಂದವರಿಗೆ ಆರ್ಥಿಕ ನೆರವು ನೀಡಿದೆ’

ದೇವನಹಳ್ಳಿ: ತಾಲ್ಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ದಿ ಬ್ಯಾಂಕ್ ಕಳೆದ 88 ವರ್ಷಗಳಿಂದ ಸುದೀರ್ಘ ಇತಿಹಾಸವುಳ್ಳ ಸಹಕಾರಿ ಸಂಸ್ಥೆ ಯಾಗಿದ್ದು ತಾಲೂಕಿನ ರೈತ ಬಾಂದವರಿಗೆ ತನ್ನದೆ ಆದ ಆರ್ಥಿಕ ನೆರವನ್ನು ನೀಡುವ ಮೂಲಕ ಹಸಿರು ಕ್ರಾಂತಿಗೆ ಅಮೋಘವಾದ ಕೊಡುಗೆಯನ್ನು ನೀಡಿದೆ ಎಂದು ಕ್ಷೇತ್ರದ ಶಾಸಕ ನಿಸರ್ಗ ನಾರಾಯಣಸ್ವಾಮಿ ತಿಳಿಸಿದರು.

ಪಟ್ಟಣದ ಶ್ರೀ ನಗರೇಶ್ವರಸ್ವಾಮಿ ಕಲ್ಯಾಣ ಮಂಟಪದಲ್ಲಿ ಆಯೋಜಿಸ ಲಾಗಿದ್ದ 2023-2024 ನೇ ಸಾಲಿನ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಮಾತನಾಡಿ. ರೈತರು ಕೃಷಿ ಬ್ಯಾಂಕುಗಳಿಂದ ದೊರೆಯುವ ಸವಲತ್ತುಗಳನ್ನು ಬಳಕೆ ಮಾಡಿಕೊಂಡು ಮುಂದೆ ಬರಬೇಕು, ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ರೈತರ ಸಾಲ ಮನ್ನಾ ಮಾಡಿ ಬಡವರ ಬಾಳಿಗೆ ಆಶಾಕಿರಣವಾಗಿದ್ದಾರೆ, ಬ್ಯಾಂಕುಗಳಲ್ಲಿ ಸುಗಮವಾಗಿ ವ್ಯವಹಾರ ನಡೆಸಲು ಸಾಲ ವಿತರಣೆ ಎಷ್ಟು ಮುಖ್ಯವೊ ಸಾಲ ವಸೂಲಾತಿಯೂ ಅಷ್ಟೆ ಮುಖ್ಯವಾಗಿರುತ್ತದೆ, ಪಡೆದ ಸಾಲವನ್ನು ಸದಸ್ಯರು ಸಕಾಲಕ್ಕೆ ಮರುಪಾವತಿ ಮಾಡಿ ಮರು ಸಾಲಪಡೆಯುವುದರ ಜೊತೆಗೆ ಉತ್ತಮ ಬ್ಯಾಂಕ್‍ನೊಂದಿಗೆ ಬಾಂದವ್ಯವನ್ನು ಇಟ್ಟುಕೊಳ್ಳುವಂತವರಾಗಬೇಕು ಎಂದರು.

ಬ್ಯಾಂಕಿನ ಮಹಾಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಅಧ್ಯಕ್ಷ ಜಿ.ಕೆ.ಹನುಮಪ್ಪ ಮಾತನಾಡಿ ಸಂಘವು ಉತ್ತಮವಾಗಿ ನಡೆದುಕೊಂಡು ಬರುತ್ತಿದ್ದು ಎಲ್ಲಾ ಸದಸ್ಯರ ಹಾಗೂ ಬ್ಯಾಂಕಿನ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಅಭಿನಂದಿಸುತ್ತೇನೆ. ರೈತರಿಗೆ ಅನುಕೂಲವಾಗುವಂತೆ ರೈತ ಸಮುದಾಯದ ಏಳಿಗೆಗೆ ಸಂಘದಿಂದ ಬ್ಯಾಂಕಿಂಗ್ ಸೌಲಭ್ಯ ಕಲ್ಪಿಸಿ, ನೀಡುತ್ತಿರುವ ಸಾಲ ಸೌಲಭ್ಯ ರೈತರು ಸದುಪಯೋಗ ಪಡೆದುಕೊಳ್ಳಬೇಕು, ಆರ್ಥಿಕವಾಗಿ ಮುಂದೆ ಬರಬೇಕು ಎಂದು ಹೇಳಿದರು.

ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಎ.ಸಿ. ನಾಗರಾಜ್ ಮಾತನಾಡಿ ವಾಣಿಜ್ಯ ಕಟ್ಟಡಗಳನ್ನು ನಿರ್ಮಿಸಿರುವುದರಿಂದ ಸಂಘಕ್ಕೆ ಹೆಚ್ಚಿನ ಆದಾಯ ಬರುತ್ತಿದೆ, ಇದನ್ನು ರೈತರಿಗೆ ಕಡಿಮೆ ಬಟ್ಟಿದರದಲ್ಲಿ ಸಾಲ ನೀಡಿದರೆ ಅವರ ಜೀವನಕ್ಕೆ ಸಹಕಾರಿಯಾಗಲಿದೆ ಹಾಗೂ ಸಂಘಕ್ಕೂ ಸಹಕಾರಿಯಾಗಲಿದೆ ಎಂದರು.
ಇದೇ ಸಂದರ್ಭದಲ್ಲಿ ಹೆಚ್ಚು ಅಂಕಗಳಿಸಿದ ಸಂಘದ ಸದಸ್ಯರ ಮಕ್ಕಳಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಈ ವೇಳೆ ಜಿಲ್ಲಾ ಜೆಡಿಎಸ್. ಅಧ್ಯಕ್ಷ ಬಿ.ಮುನೇಗೌಡ, ತಾಲೂಕು ಅಧ್ಯಕ್ಷ ಆರ್.ಮುನೇಗೌಡ, ಪುರಸಭಾ ಸದಸ್ಯ ಜಿ.ಎ.ರವೀಂದ್ರ, ದೇವನಹಳ್ಳಿ ತಾಲ್ಲೂಕು ಸೊಸೈಟಿ ಅಧ್ಯಕ್ಷ ಎ.ದೇವರಾಜ್, ಮಂಡಿಬೆಲೆ ರಾಜಣ್ಣ, ಕಾಂಏನಹಳ್ಳಿ ರಮೇಶ್, ಬಿ.ಎನ್.ಕೃಷ್ಣಪ್ಪ, ಗೋಪಾಲಗೌಡ, ಸಂಘದ ಉಪಾಧ್ಯಕ್ಷೆ ಶ್ರೀಮತಿ ಆಶಾ ಜಿ.ಎ.ರವೀಂದ್ರ, ನಿರ್ದೇಶಕರಾದ ಪಿ. ಪಟಾಲಪ್ಪ, ಜೊನ್ನಹಳ್ಳಿ ಮುನಿರಾಜು, ಸಿ. ಮುನಿರಾಜು, ಸಂಪಂಗಪ್ಪ, ಮುನಿನಾರಾಯಣಪ್ಪ, ಎಂ. ಬಸವರಾಜು, ಅನ್ನಪೂರ್ಣ, ಸಿ.ಎನ್. ಜಯರಾಮೇಗೌಡ, ನಂಜೇಗೌಡ, ಜಿ.ಎಸ್. ಬೀಮರಾಜು, ಪಿ. ವೆಂಕಟೇಶ್, ಆರ್. ಭರತ್, ನಾಮಿನಿ ಗೋಪಾಲಗೌಡ, ಈರಪ್ಪ, ಬ್ಯಾಂಕಿನ ವ್ಯವಸ್ಥಾಪಕ ಕೆ.ವಿ.ರಾಜೇಂದ್ರ ಪ್ರಸಾದ್, ಸಿಬ್ಬಂದಿ ಬಿ.ಕೆ. ರಾಧ, ಸಿ.ಮುರಳಿ, ಸಿ.ಎಂ. ನಟರಾಜ್, ಪ್ರಿಯದರ್ಶಿನಿ, ಪ್ರದೀಪ್‍ಕುಮಾರ್, ವೇಣುಗೋಪಾಲ್, ಸೇರಿದಂತೆ ಅನೇಕ ಸದಸ್ಯರು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು