LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chamarajanagara

ಪೂರಕ ಪೌಷ್ಠಿಕ ಆಹಾರ ವಿತರಣೆ ಕಾರ್ಯಕ್ರಮಕ್ಕೆ ಶಾಸಕ ಸಿ. ಪುಟ್ಟರಂಗಶೆಟ್ಟಿ ಚಾಲನೆ

ಚಾಮರಾಜನಗರ: ಶಾಲಾಮಕ್ಕಳಿಗೆ ವಾರದಲ್ಲಿ ಉಳಿದ ನಾಲ್ಕು ದಿನಗಳಲ್ಲಿಯೂ ಮೊಟ್ಟೆ, ಬಾಳೆಹಣ್ಣು ನೀಡುವ ಪೂರಕ ಪೌಷ್ಠಿಕ ಆಹಾರ ವಿತರಣೆ ಕಾರ್ಯಕ್ರಮಕ್ಕೆ ನಗರದಲ್ಲಿಂದು ಎಂ.ಎಸ್.ಐ.ಎಲ್. ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಚಾಲನೆ ನೀಡಿದರು.

ನಗರದ ಉಪ್ಪಾರ ಬೀದಿಯಲ್ಲಿರುವ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಬೆಂಗಳೂರಿನ ಅಜೀಮ್ ಪ್ರೇಮ್ ಜಿ ಫೌಂಡೇಶನ್ ಸಹಯೋಗದಲ್ಲಿ ಶಾಲಾಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಪೂರಕ ಆಹಾರ ಯೋಜನೆಯಡಿ ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಪಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾರದಲ್ಲಿ ಉಳಿದ ನಾಲ್ಕು ದಿನಗಳಲ್ಲಿ ಉಚಿತವಾಗಿ ಪೂರಕ ಪೌಷ್ಠಿಕ ಆಹಾರ ವಿತರಣೆ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಮೊಟ್ಟೆ ಹಾಗೂ ಬಾಳೆಹಣ್ಣನ್ನು ಶಾಸಕರು ಸಾಂಕೇತಿಕವಾಗಿ ವಿತರಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಎಂ.ಎಸ್.ಐ.ಎಲ್. ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ರಾಜ್ಯಸರ್ಕಾರದ ವತಿಯಿಂದ ಈಗಾಗಲೇ ವಾರದಲ್ಲಿ 2 ದಿನ ಮೊಟ್ಟೆ, ಬಾಳೆಹಣ್ಣು ಹಾಗೂ ಶೆಂಗಾಚಿಕ್ಕಿಯನ್ನು ವಿತರಿಸಲಾಗುತ್ತಿತ್ತು. ಆದರೂ ಮಕ್ಕಳ ಭೌದ್ಧಿಕ ಶಕ್ತಿ ಹೆಚ್ಚಿಸಿ ಕಲಿಕೆಯಲ್ಲಿ ಪ್ರಗತಿ ಸಾಧಿಸಲು ಅಜೀಂ ಪ್ರೇಮ್ ಜಿ ಫೌಂಡೇಶನ್ ನೆರವಿನೊಂದಿಗೆ ಹೆಚ್ಚುವರಿಯಾಗಿ ವಾರದಲ್ಲಿ ಉಳಿದ ನಾಲ್ಕು ದಿನಗಳಲ್ಲಿಯೂ ಪೂರಕ ಪೌಷ್ಠಿಕ ಆಹಾರ ವಿತರಣೆ ಮಾಡಲಾಗುತ್ತಿದೆ. ಆ ಮೂಲಕ ಜಿಲ್ಲೆಯ ಶೈಕ್ಷಣಿಕ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡಿದೆ ಎಂದರು.

ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಮಾತನಾಡಿ ಮಕ್ಕಳ ಬುದ್ದಿಶಕ್ತಿ ವೃದ್ಧಿಸಿ ಗುಣಮಟ್ಟದ ಶಿಕ್ಷಣದ ಕಲಿಕೆಗೆ ಅನುಕೂಲವಾಗುವ ನಿಟ್ಟಿನಲ್ಲಿ ವಾರದಲ್ಲಿ ಆರು ದಿನವು ಪೂರಕ ಪೌಷ್ಠಿಕ ಆಹಾರನೀಡುತ್ತಿರುವುದು ಉತ್ತಮ ಬೆಳವಣಿಗೆ. ಒಟ್ಟಿನಲ್ಲಿ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಹಾರೈಸಿದರು.

ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ರಾಮಚಂದ್ರರಾಜೇ ಅರಸ್ ಅವರು ಮಾತನಾಡಿ ಮಕ್ಕಳ ಬುದ್ದಿಮತ್ತೆ ಹೆಚ್ಚಿಸಲು ನೀಡಲಾಗುತ್ತಿರುವ ಪೂರಕ ಪೌಷ್ಠಿಕ ಆಹಾರವಿತರಣೆ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆದೊರೆತು ಸರ್ಕಾರಿ, ಅನುದಾನಿತ ಶಾಲೆಗಳ ಬೇಡಿಕೆ ಈಡೇರಿದಂತಾಗಿದೆ. ಇದರಿಂದ ಜಿಲ್ಲೆಯ 894 ಶಾಲೆಗಳ 8293 ಮಕ್ಕಳು ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ.

ಸಾಮಾಜಿಕ ಹಾಗೂ ಶೈಕ್ಷಣಿಕ ಕಾಳಜಿ ಹೊಂದಿರುವ ಅಜೀಮ್ ಪ್ರೇಮ್ ಜಿ ಫೌಂಡೇಶನ್ ಸಂಸ್ಥೆ ಇಲಾಖೆಯ ಖಾತೆಗೆ ಈಗಾಗಲೇ ಒಂದೂವರೆ ಸಾವಿರ ಕೋಟಿ ರೂ. ಜಮೆ ಮಾಡಿದೆ. ವಾರದಲ್ಲಿ 2 ದಿನ ಪೌಷ್ಠಿಕ ಆಹಾರ ಸರ್ಕಾರ ನೀಡಲಿದೆ. ಉಳಿದ 4 ದಿನ ಅಜೀಮ್ ಪ್ರೇಮ್ ಜಿ ಫೌಂಡೇಶನ್ ಸಂಸ್ಥೆ ಒದಗಿಸಲಿದೆ. ಇದೇ ಸೆಪ್ಟೆಂಬರ್ 25ರಿಂದ 2025ರ ಏಪ್ರಿಲ್ 10ರವರೆಗೆ 146 ಶಾಲಾ ದಿನಗಳಲ್ಲಿ ಇದಕ್ಕಾಗಿ 4 ಕೋಟಿ 62 ಲಕ್ಷ ರೂ. ವೆಚ್ಚವಾಗಲಿದೆ ಎಂದರು.

ಪ್ರಾಸ್ತಾವಿಕ ನುಡಿಗಳನ್ನಾಡಿದ ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ರೇವಣ್ಣ ಅವರು ಮಕ್ಕಳ ಅಪೌಷ್ಠಿಕತೆ ನಿವಾರಿಸುವ ರಾಜ್ಯ ಸರ್ಕಾರದ ಕಾರ್ಯಕ್ರಮವನ್ನು ಮತ್ತಷ್ಟು ಬಲ ಪಡಿಸಲು ಪ್ರಸ್ತುತ ಸಾಲಿನಿಂದ ವಾರಕ್ಕೆ ಉಳಿದ 4 ದಿನಗಳಿಗೆ ಪೂರಕ ಪೌಷ್ಠಿಕ ಆಹಾರ ವಿತರಿಸಲು ಅಜಿಂ ಪ್ರೇಮ್ ಜೀ ಫೌಂಡೇಷನ್ ಸಂಸ್ಥೆ ನೆರವು ನೀಡಿದೆ ಎಂದು ತಿಳಿಸಿದರು.

ನಗರಸಭೆ ಸದಸ್ಯರಾದ ಬಸವಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಶೆಟ್ಟಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ಟಿ.ಜಿ. ಶ್ರೀನಿವಾಸ್,ಕೊಳ್ಳೇಗಾಲ ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ರಂಗಸ್ವಾಮಿ, ಶಾಲೆಯ ಮುಖ್ಯ ಶಿಕ್ಷಕರಾದ ವೆಂಕಟೇಶ್, ದೈಹಿಕ ಶಿಕ್ಷಕರಾದ ಚಿಕ್ಕ ಬಸವಯ್ಯ, ಅಜೀಮ್ ಪ್ರೇಮ್ ಜಿ ಫೌಂಡೇಶನ್ ಸಂಸ್ಥೆಯ ನಂದೀಶ್, ಮಂಜುನಾಥ್, ಮುಖಂಡರಾದ ಶಿವಣ್ಣ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಆರಂಭದಲ್ಲಿ ಶಾಲಾಮಕ್ಕಳು ಸಂವಿಧಾನ ಪೀಠಿಕೆಯನ್ನು ವಾಚನ ಮಾಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು