LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಪೊಲೀಸರದ್ದು ತಪ್ಪಿಲ್ಲ! ಮೈಸೂರಿನ ಉದಯಗಿರಿ ಗಲಭೆ ಬಗ್ಗೆ ಡಿಸಿಎಂ ಡಿಕೆಶಿ ಸ್ಪಷ್ಟನೆ

ಮೈಸೂರು: ಮೈಸೂರಿನ ಉದಯಗಿರಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರದ್ದು ಯಾವುದೇ ರೀತಿಯ ತಪ್ಪಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರು ಏನು ಹೇಳಿದರು ಎಂಬುದು ಮುಖ್ಯವಲ್ಲ. ನಾನು ಉಪಮುಖ್ಯಮಂತ್ರಿಯಾಗಿ ಹೇಳುತ್ತಿದ್ದೇನೆ, ಉದಯಗಿರಿ ಗಲಭೆಗೆ ಪೊಲೀಸರದ್ದು ಯಾವುದೇ ತಪ್ಪಿಲ್ಲ. ಪೊಲೀಸರು ಸರಿಯಾಗಿ ಕೆಲಸ ಮಾಡಿ ಪರಿಸ್ಥಿತಿ ನಿಭಾಯಿಸಿದ್ದಾರೆ. ಪೊಲೀಸರು ಗಾಯ ಗೊಂಡರೂ ಸಮಯ ಪ್ರಜ್ಞೆಯಿಂದ ಕೆಲಸ ಮಾಡಿದ್ದಾರೆ. ನಾನು ನಮ್ಮ ಪೊಲೀಸರ ಪರವಾಗಿಯೇ ಇದ್ದೇನೆ ಎಂದರು.

ಉದಯಗಿರಿ ಗಲಭೆಗೆ ಪೊಲೀಸರ ಕರ್ತ ವ್ಯಲೋಪ ಕಾರಣ ಎಂಬ ಸಚಿವ ಕೆ.ಎನ್. ರಾಜಣ್ಣ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಾಜಣ್ಣ ಅವರ ಮಾತಿಗೆ ಮುಖ್ಯಮಂತ್ರಿಗಳು ಉತ್ತರ ಕೊಡುತ್ತಾರೆ. 8-10 ದಿನದಲ್ಲಿ ಮುಖ್ಯಮಂತ್ರಿಗಳೇ ಪ್ರತಿಕ್ರಿಯೆ ಕೊಡು ತ್ತಾರೆ. ಮೈಸೂರಿನ ನೆಲದಲ್ಲಿ ನಿಂತು ಹೇಳ್ತಿದ್ದೇನೆ, ಪೊಲೀಸರದ್ದು ತಪ್ಪಿಲ್ಲ. ಎಲ್ಲಾ ಮಾಹಿತಿ ಪಡೆದಿದ್ದೇನೆ, ಪೊಲೀಸರು ಅನಾಹುತ ತಪ್ಪಿಸಿದ್ದಾರೆ ಎಂದರು.

ಕಲ್ಲು ಎಸೆದಿರುವವರೆಲ್ಲರೂ 14, 15 ವರ್ಷದ ಹುಡುಗರು. ಮುಖಂಡರ ಮಾತನ್ನೂ ಅವರು ಕೇಳಿಲ್ಲ. ಹಿರಿಯರು ಮತ್ತು ಮುಖಂಡರೂ ಸೇರಿ ಗಲಭೆ ಕಂಟ್ರೋಲ್ ಮಾಡಿದ್ದಾರೆ. ಪೊಲೀಸರಿಗಾದರೆ  ಪ್ರೊಟೆಕ್ಷನ್ ಇತ್ತು, ಅಲ್ಲಿದ್ದ ಜನರಿಗೆ ಇರಲಿಲ್ಲ.ಪೊಲೀಸರು ಗಲಭೆ ಮಾಡಿದವರ ಪತ್ತೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಪೊಲೀಸರು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಂಡು ಅರೆಸ್ಟ್ ಮಾಡುತ್ತಾರೆ ಎಂದರು.

ಮೆಟ್ರೋ ಪ್ರಯಾಣ ದರ ಏರಿಕೆ ವಿಚಾರದಲ್ಲಿ ಮಾತ್ರವಲ್ಲ, ಬಿಜೆಪಿ ಎಲ್ಲ ವಿಚಾರಗಳಲ್ಲೂ ರಾಜಕೀಯ ಮಾಡುತ್ತಿದೆ. ಮೆಟ್ರೋ ಪ್ರಯಾಣ ದರ ಏರಿಕೆ ವಿಚಾರ ಕೇಂದ್ರ ವ್ಯಾಪ್ತಿಗೆ ಬರುತ್ತೆ. ದರ ಏರಿಕೆಗೆ ನೇಮಿಸಿರುವ ಮುಖ್ಯಸ್ಥರು ಅದನ್ನು ನಿರ್ಧಾರ ಮಾಡ್ತಾರೆ. ಮೆಟ್ರೋ ಪ್ರಯಾಣ ದರ ಇಳಿಕೆ ಮಾಡುವುದು ನಮ್ಮ ಕೈಯಲ್ಲಿ ಇಲ್ಲ ಎಂದರು.ಸಹಕಾರ ಸಚಿವ ಕೆ.ಎನ್.ರಾಜಣ್ಣ ದೆಹಲಿ ಪ್ರವಾಸ ವಿಚಾರವಾಗಿ ಮಾತನಾಡಿದ ಡಿಕೆ ಶಿವಕುಮಾರ್, ಅವರು ದೊಡ್ಡವರು, ನಾನು ದೊಡ್ಡವರ ಬಗ್ಗೆ ಮಾತನಾಡಲ್ಲ. ರಾಜಣ್ಣ ನಮ್ಮ ಪಕ್ಷದ ಹಿರಿಯ ನಾಯಕರು. ಕೆ.ಎನ್.ರಾಜಣ್ಣ ಬಗ್ಗೆ ನಾನೇನು ಪ್ರತಿಕ್ರಿಯೆ ಕೊಡಲಿ ಹೇಳಿ ಎಂದು ಪ್ರಶ್ನಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು