LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಪೊಲೀಸ್ ಫೈರಿಂಗ್, 'ಚಡ್ಡಿಗ್ಯಾಂಗ್' ದರೋಡೆಕೋರನ ಬಂಧನ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕುಖ್ಯಾತ ಚಡ್ಡಿಗ್ಯಾಂಗ್ ನ ಅಂತರರಾಜ್ಯ ದರೋಡೆಕೋರನೋರ್ವನನ್ನು ಪೊಲೀಸರು ಕಾಲಿಗೆ ಗುಂಡುಹಾರಿಸಿ ಬಂಧಿಸಿದ್ದಾರೆ.

ಹೌದು.. ಈ ಹಿಂದೆ ಹುಬ್ಬಳ್ಳಿ-ಧಾರವಾಡದ ನವಲೂರಿನಲ್ಲಿ ವಿಕಾಸ ಕುಮಾರ್ ಎಂಬುವವರ ಮನೆಯ ಬಾಗಿಲಿಗೆ ಸೈಜ್ ಕಲ್ಲಿನಿಂದ ಹೊಡೆದು ಮನೆಯೊಳಗೆ ನುಗ್ಗಿದ ಡಕಾಯಿತರ ತಂಡ ಕುಟುಂಬದ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡಿ ಪರಾರಿಯಾಗಿತ್ತು. ಮನೆಯಲ್ಲಿದ್ದ ದಂಪತಿಗಳ ಕೈಕಾಲು ಕಟ್ಟಿ, ಬಡಿಗೆಯಿಂದ ಮನಬಂದಂತೆ ಹಲ್ಲೆ ಮಾಡಿದ್ದಾರೆ.

ಅಷ್ಟೇ ಅಲ್ಲದೇ ಮನೆಯಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಈ ಪ್ರಕರಣದಲ್ಲಿ ಇದೀಗ ಮಹತ್ವದ ಕಾರ್ಯಾಚರಣೆ ನಡೆಸಿ ಓರ್ವ ನಟೋರಿಯಸ್ ದರೋಡೆಕೋರನನ್ನು ಬಂಧಿಸಿದ್ದಾರೆ. 4 ರಾಜ್ಯಗಳಲ್ಲಿ 50 ಪ್ರಕರಣಗಳಲ್ಲಿ ಬೇಕಾಗಿದ್ದ ಪ್ರಮುಖ ಆರೋಪಿ ಕಾಲಿಗೆ ಗುಂಡು ಹಾರಿಸಿ ಹುಬ್ಬಳ್ಳಿ-ಧಾರವಾಡ ಪೊಲೀಸರು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ

ರಾಯಾಪುರದ ಬಳಿ ಪೊಲೀಸರು ಎರಡು ಸುತ್ತು ಗುಂಡು ಹಾರಿಸಿ ಆರೋಪಿ ವೆಂಕಟೇಶ್ವರ ರಾವ್ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ಪಾಲಾ ವೆಂಕಟೇಶ್ವರ ರಾವ್ ಅಲಿಯಾಸ್ ಕಲ್ಯಾಣ್‌ಕುಮಾರ್ ಆಂಧ್ರ ಪ್ರದೇಶದ ಮೂಲದವನಾಗಿದ್ದು, ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಆತನ ಎರಡೂ ಕಾಲುಗಳಿಗೆ ಪಿಎಸ್ಐ ಪ್ರಮೋದ್ ಗುಂಡು ಹಾರಿಸಿದ್ದಾರೆ.

ಪೊಲೀಸರ ಮೇಲೆಯೂ ಹಲ್ಲೆಯಾಗಿದ್ದು, ಗಾಯಗೊಂಡವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಇನ್ನೂಳಿದವರ ಬಂಧನಕ್ಕೆ ಬಲೆ ಬಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು