LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಪ್ರಕರಣ ತನಿಖಾ ಹಂತದಲ್ಲಿದೆ ಮೋಷನ್ ಪೋಸ್ಟರ್ ಬಿಡುಗಡೆ

ಕನ್ನಡ ಚಿತ್ರರಂಗಕ್ಕೆ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಹೊಸಬರ ತಂಡಗಳು ಬರುತ್ತಿವೆ. ಅದರಲ್ಲೂ ರಂಗಭೂಮಿಯಲ್ಲಿ ಕೆಲಸ ಮಾಡಿ ಅನುಭವ ಗಳಿಸಿರುವ ಒಂದಿಷ್ಟು ಯುವಕರು, ಕನ್ನಡ ಚಿತ್ರರಂಗಕ್ಕೆ ಹೊಸ ಆಲೋಚನೆಗಳನ್ನು ಇಟ್ಟುಕೊಂಡು ಬರುತ್ತಿದ್ದಾರೆ. ಅಂತವರ ಸಾಲಿಗೆ ಈಗ ಪ್ರಕರಣ ತನಿಖಾ ಹಂತದಲ್ಲಿದೆ ಚಿತ್ರ ಸೇರಿಕೊಳ್ಳಲಿದೆ.

ಪ್ರಕರಣ ತನಿಖಾ ಹಂತದಲ್ಲಿದೆ? ಚಿತ್ರವನ್ನು ಕರದಾಯಾಮ ಸ್ಟುಡಿಯೋಸ್ ಸಂಸ್ಥೆಯಡಿ ಚಿಂತನ್ ಕಂಬಣ್ಣ ನಿರ್ಮಿಸಿದರೆ, ಸುಂದರ್ ಎಸ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಬುಧವಾರ ಸಂಜೆ Karadaayaama Studios ಯೂಟ್ಯೂಬ್ ಚಾನಲ್‍ನಲ್ಲಿ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಆಗಿದೆ. ಚಿತ್ರದ ಹೆಸರೇ ಹೇಳುವಂತೆ ಇದೊಂದು ಕ್ರೈಮ್ ಜಾನರ್ ಕುರಿತಾದ ಚಿತ್ರ. ತನಿಖೆಯೊಂದರ ಸುತ್ತ ಸುತ್ತವಂತಹ ಚಿತ್ರ. ಡ್ರಗ್ಸ್ ಮಾಫಿಯಾ ಹಿನ್ನೆಲೆಯಲ್ಲಿ ಸಾಗುವ ಕಥೆ ಸಾಕಷ್ಟು ತಿರುವುಗಳನ್ನು ಪಡೆಯುತ್ತಾ ಹೋಗುತ್ತವೆ. ಮುಂದೆ ಏನೆಲ್ಲಾ ಆಗುತ್ತದೆ ಎಂಬುದನ್ನು ಚಿತ್ರದಲ್ಲೇ ನೋಡಬೇಕು.

ಒಂದಿಷ್ಟು ರಂಗಭೂಮಿ ಗೆಳೆಯರು ಸೇರಿ ಮಾಡಿದ ಚಿತ್ರವಿದು. ಬೇರೆ ಬೇರೆ ರಂಗತಂಡಗಳಲ್ಲಿ ಸಕ್ರಿಯರಾಗಿದ್ದ ಒಂದಿಷ್ಟು ಗೆಳೆಯರು ಒಟ್ಟಿಗೆ ಸೇರಿ ಈ ಚಿತ್ರವನ್ನು ಮಾಡಿದ್ದಾರೆ. ರಂಗಭೂಮಿಯಲ್ಲಿ ಅನುಭವಿಗಳಾದರೂ ಚಿತ್ರರಂಗಕ್ಕೆ ಎಲ್ಲರೂ ಹೊಸಬರೇ. ಮಹಿನ್ ಕುಬೇರ್, ಮುತ್ತುರಾಜ್ ಟಿ, ನಟ ಗಗನ್, ಚಿಂತನ್ ಕಂಬಣ್ಣ ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಬೆಂಗಳೂರು ಮತ್ತು ಕನಕಪುರದಲ್ಲಿ ಚಿತ್ರೀಕರಣವಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು