LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಪ್ರಜ್ವಲ್ ನಿರೀಕ್ಷೆಯಲ್ಲಿ!? ಬೆಂಗಳೂರಿಗೆ ಬಂದ ಕೂಡಲೇ ಬಂಧನಕ್ಕೆ ಸಜ್ಜಾಗಿರುವ ಎಸ್‍ಐಟಿ ತಂಡ

ಬೆಂಗಳೂರು: ಅಶ್ಲೀಲ ವಿಡೀಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿದೇಶಕ್ಕೆ ಹಾರಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಲು ತುದಿಗಾಲಲ್ಲಿ ನಿಂತಿರುವ ವಿಶೇಷ ತನಿಖಾ ತಂಡ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀಡುಬಿಟ್ಟಿದೆ.

ಕಳೆದೆರಡು ದಿನಗಳಿಂದ ಪ್ರಜ್ವಲ್ ರೇವಣ್ಣ ದುಬೈನಲ್ಲಿದ್ದಾರೆ. ಇಂದು ಬರುತ್ತಾರೆ.. ನಾಳೆ ಬರುತ್ತಾರೆ ಎಂಬ ವ್ಯಾಪಕ ವದಂತಿಗಳ ನಡುವೆ ಎಸ್‍ಐಟಿ ತಂಡದ ಅಧಿಕಾರಿಗಳು ಮತ್ತು ಸಿಬ್ಬಂದಿ ವಿಮಾನ ನಿಲ್ದಾಣದ ಸುತ್ತ ಹದ್ದಿನ ಕಣ್ಣಿಟ್ಟು ಕಾಯುತ್ತಿದ್ದಾರೆ.ಪ್ರಜ್ವಲ್ ಸ್ವದೇಶಕ್ಕೆ ಬಂದ ಕೂಡಲೇ ಕಂಡಲ್ಲಿ ಅವರನ್ನು ಬಂಧಿಸಲು ಬ್ಲೂಕಾರ್ನರ್ ನೋಟಿಸ್ ಹೊರಡಿಸಲಾಗಿದೆ. ಮಂಗಳೂರು ವಿಮಾನ ನಿಲ್ದಾಣದಿಂದ ಬರಲಿದ್ದಾರೆ ಎಂಬ ಸುದ್ದಿಯೂ ಹರಡಿತ್ತು.

ಇಂದು ಸಹ ಪ್ರಜ್ವಲ್ ಬೆಂಗಳೂರಿಗೆ ಬರುವ ಸಂಭವ ಕಡಿಮೆ ಎಂದು ಹೇಳಲಾಗುತ್ತಿದೆ. ಆತ ಬಂದರೆ ಬಂಧಿಸಲು ಎಸ್‍ಐಟಿ ಪಡೆ ಸರ್ವಸನ್ನದ್ಧವಾಗಿ ಸಜ್ಜಾಗಿದೆ.
ವಿದೇಶಗಳಿಂದ ಬರುವ ವಿಮಾನ ಪ್ರಯಾಣಿಕರ ಬಗ್ಗೆ ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ದುಬೈ ಮತ್ತು ಮಸ್ಕತ್ ಮತ್ತಿತರ ದೇಶಗಳಿಂದ ಬರುವ ಪ್ರಯಾಣಿಕರ ಪಟ್ಟಿಯನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಏತನ್ಮಧ್ಯೆ, ಇದೇ ಪ್ರಕರಣ ಮತ್ತು ಮಹಿಳೆಯೊಬ್ಬರನ್ನು ಅಪಹರಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್ ತಂದೆ ಮತ್ತು ಶಾಸಕ ಹೆಚ್ ಡಿ ರೇವಣ್ಣರನ್ನು ಎಸ್‍ಐಟಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು