LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಪ್ರತಿಭಟನಾ ಪರವಾನಗಿ ಆದೇಶ ಹಿಂಪಡೆಯುವಂತೆ ವಿವಿಧ ಸಂಘಟನೆಗಳ ಒತ್ತಾಯ

ಬೆಂಗಳೂರು: ಸ್ವಾತಂತ್ರ್ಯ ಉದ್ಯಾನ (ಫ್ರೀಡಂ ಪಾರ್ಕ್) ಹೊರತುಪಡಿಸಿ ನಗರದ ಬೇರೆ ಯಾವುದೇ ಭಾಗದಲ್ಲೂ ರಾಜಕೀಯ ಅಥವಾ ರಾಜಕಿಯೇತರ ಸಂಘಟನೆಗಳು ಮೆರವಣಿಗೆ, ಪ್ರತಿಭಟನೆ, ಬಹಿರಂಗ ಸಭೆ ನಡೆಸಲು ಅನುಮತಿ ನೀಡದಂತೆ ಜಾರಿಗೊಳಿಸಲಾಗಿರುವ ‘ಪ್ರತಿಭಟನೆ, ಪ್ರದರ್ಶನ ಮತ್ತು ಪ್ರತಿಭಟನಾ ಮೆರವಣಿಗೆಗಳ (ಬೆಂಗಳೂರು ನಗರ) ಪರವಾನಗಿ ಮತ್ತು ನಿಯಂತ್ರಣ ನಿಯಮʼ 2021 ನ್ನು ಹಿಂಪಡೆಯಬೇಕು ಎಂದು ವಿವಿಧ ಸಂಘಟನೆಗಳು ಸರ್ಕಾರವನ್ನು ಒತ್ತಾಯಿಸಿವೆ.

ಒಂದು ಕಾಲದಲ್ಲಿ ಬೆಂಗಳೂರಿನಾದ್ಯಂತ ಪ್ರಜಾಸತ್ತಾತ್ಮಕ ಭಿನ್ನಾಭಿಪ್ರಾಯದ ಅಭಿವ್ಯಕ್ತಿಯಾಗಿದ್ದ ಪ್ರತಿಭಟನೆಗಳು ಈಗ ಫ್ರೀಡಂ ಪಾರ್ಕ್‌ಗೆ ಮಾತ್ರ ಸಿಮೀತಗೊಳಿಸಲಾಗಿದೆ. ರಾಜ್ಯದೊಂದಿಗಿನ ಯಾವುದೇ ಮಾತುಕತೆಯನ್ನು ಪರಿಣಾಮಕಾರಿಯಾಗಿ ನಡೆಸದಂತೆ ಮೌನಗೊಳಿಸಿದೆ ಎಂದು ಜನಾಂದೋಲನದ ಪ್ರತಿನಿಧಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನವದೆಹಲಿಯ ಜಂತರ್ ಮಂತರ್ ಪ್ರತಿಭಟನೆಗೆ ಸ್ಮಶಾನವಾಗಿದೆ. ಅದೇ ರೀತಿ ಬೆಂಗಳೂರಿನ ಫ್ರೀಡಂ ಪಾರ್ಕ್‌ ಮಾಡಬಾರದು. ಪ್ರತಿಭಟನೆಗಳನ್ನು ನಿರ್ಬಂಧಿಸುವ ಬದಲು ಟ್ರಾಫಿಕ್ ಪರಿಹಾರಗಳು ಮತ್ತು ಉತ್ತಮ ಸಾರ್ವಜನಿಕ ಸಾರಿಗೆಗೆ ಆದ್ಯತೆ ನೀಡಬೇಕು ಎಂದು ಬರಹಗಾರ ಮತ್ತು ಚಿಂತಕ ಆಕರ್ ಪಟೇಲ್ ಅಧಿಕಾರಿಗಳನ್ನು ಒತ್ತಾಯಿಸಿದರು.

ನ್ಯಾಯಾಧೀಶರು ಕಾಮಪ್ರಚೋದಕ ಕಾಮೆಂಟ್ ಮಾಡಿದಾಗ, ನ್ಯಾಯಕ್ಕಾಗಿ ನಾವು ಎಲ್ಲಿಗೆ ಹೋಗುತ್ತೇವೆ? ಎಂದು ಪ್ರಶ್ನಿಸಿದ ಸಾಮಾಜಿಕ ಕಾರ್ಯಕರ್ತೆ ಅಕ್ಕೈ ಪದ್ಮಶಾಲಿ, ವ್ಯವಸ್ಥಿತ ದಬ್ಬಾಳಿಕೆಯನ್ನು ಪ್ರಶ್ನಿಸಲು ಸಾರ್ವಜನಿಕ ಪ್ರತಿಭಟನೆಯ ಅಗತ್ಯವಿದೆ ಎಂದು ಪ್ರತಿಪಾದಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು