LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಪ್ರತಿಭಟನೆ ಹತ್ತಿಕ್ಕುವ ಕೆಲಸ: ವಿಜಯೇಂದ್ರ

ಬೆಂಗಳೂರು: ರಾಜ್ಯ ಸರ್ಕಾರದ ಸೂಚನೆ ಮೇರೆಗೆ ಪ್ರತಿಭಟನೆ ಹತ್ತಿಕ್ಕುವ ಕೆಲಸ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.ಇಂದು ಮೈಸೂರು ಮುಡಾ ಹಗರಣ ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲು ಮುಖಂಡರು ಕಾರ್ಯಕರ್ತರೊಂದಿಗೆ ಮೈಸೂಗಿಗೆ ತೆರಳುತ್ತಿದ್ದ ವೇಳೆ ತಮ್ಮನ್ನು ತಡೆದ ಪೊಲೀಸರಕ್ರಮವನ್ನು ವಿರೋಧಿಸಿ ಮಾತನಾಡಿದ ಅವರು, ಈ ಸರ್ಕಾರ ಮಾಡುತ್ತಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಗುಡುಗಿದರು.ಮುಡಾದಿಂದ 4 ಸಾವಿರ ಕೋಟಿ ರೂ. ಅಧಿಕ ಪ್ರಮಾಣದ ಭ್ರಷ್ಟಾಚಾರವಾಗಿದೆ.

ನಾವು ಮುಡಾ ಎದುರಿಗೆ ಪ್ರತಿಭಟನೆ ಮಾಡಬೇಕಿತ್ತು. ಸಿಎಂ ಸಿದ್ಧರಾಮಯ್ಯರ ನೇತೃತ್ವದಲ್ಲಿ ಪೊಲೀಸರು ಇದನ್ನು ಹತ್ತಿಕ್ಕುವ ಕೆಲಸ ಮಾಡಿದ್ದಾರೆ. ನೀವು ಪ್ರಮಾಣಿಕರಾಗಿದರೆ, ಜಿಲ್ಲಾಧಿಕಾರಿಗಳು ವರದಿ ಕೊಟ್ಟ ಬಳಿಕ ಕ್ರಮ ಏಕೆ ಆಗಲಿಲ್ಲ?ಇದು ಸರಿಯಿದ್ದರೆ, ಸಿಬಿಐ ತನಿಖೆಗೆ ಕೊಡಿ. ಅದನ್ನು ಬಿಟ್ಟು ನಮ್ಮ ಹೋರಾಟ ಹತ್ತಿಕ್ಕುವ ಕೆಲಸ ಮಾಡಿದ್ದಾರೆ. ನಮ್ಮ ಕಾರ್ಯಕರ್ತರಿಗೆ ತಿಂಡಿಯನ್ನು ಒದ್ದು ಎಸೆದಿದ್ದಾರೆ. ಬೆಳಿಗ್ಗೆ 7 ಘಂಟೆಗೆ ಬಂಧಿಸುವ ಕೆಲಸ ಮಾಡಿದ್ದಾರೆ. ಈ ಸರ್ಕಾರದ ಪಾಪದ ಕೊಡ ತುಂಬಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿ.ನಾಗೇಂದ್ರರನ್ನು ಇಡಿ ಅಧಿಕಾರಿಗಳು ಆರೆಸ್ಟ್ ಮಾಡಿದ್ದಾರೆ. ವಾಲ್ಮೀಕಿ ನಗಮದ ಹಗರಣ, ದಲಿತರ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣವನ್ನು ದೋಚಿದ್ದಾರೆ.
ರಾಹುಲ್‍ಗಾಂಧಿಗೆ ಹಣ ಕಳುಹಿಸುತ್ತಿದ್ದಾರೆ. ಬಡವರಿಗೆ, ದಲಿತರಿಗೆ ಮೀಸಲಿಟ್ಟ ನಿವೇಶನವನ್ನು ನಿಮ್ಮ ಕುಟುಂಬ ಪಡೆದಿದೆ. ಕಾಂಗ್ರೆಸ್ ಪುಡಾರಿಗಳಿಗೆ ಹಂಚಿಕೆ ಮಾಡಲಾಗಿದೆ. ರಾಜೀನಾಮೆ ಕೊಡಿ ನಿಮ್ಮ ಸಿಎಂ ಸ್ಥಾನಕ್ಕೆ ಎಂದು ಒತ್ತಾಯಿಸಿದ್ದಾರೆ.ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವ ಮುನ್ನಾ ಪ್ರಕರಣವನ್ನು ಸಿಬಿಐಗೆ ಕೊಡಿ ಎಂದು ಆಗ್ರಹಪಡಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು