LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಪ್ರತಿಯೊಬ್ಬರೂ ಶರಣ ನುಲಿಯ ಚಂದಯ್ಯನವರ ಕಾಯಕ ನಿಷ್ಠೆ ರೂಪಿಸಿಕೊಳ್ಳಬೇಕು

ಬೆಂಗಳೂರು ಗ್ರಾಮಾಂತರ ಜಿಲ್ಲೆ: ಹನ್ನೆರಡನೆಯ ಶತಮಾನದಲ್ಲಿ ಕಾಯಕಯೋಗಿ ಬಸವಣ್ಣನವರ ಸಮಕಾಲೀನ ‘ಶರಣ ನುಲಿಯ ಚಂದಯ್ಯ’ನವರು ತಮ್ಮ ಕಾಯಕ ನಿಷ್ಠೆಯಿಂದ ಸಮಾಜ ಪರಿವರ್ತನೆಗೆ ಶ್ರಮಿಸಿದವರು. ಅವರ ಕಾಯಕ ನಿಷ್ಠೆಯನ್ನು ನಾವು ಜೀವನದಲ್ಲಿ ರೂಢಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಅಮರೇಶ. ಹೆಚ್ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ನ್ಯಾಯಾಲಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ನುಲಿಯ ಚಂದಯ್ಯ’ನವರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡು ‘ನೂಲಿಯ ಚಂದಯ್ಯ’ನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬರೂ ತಮ್ಮ ಕೆಲಸದಲ್ಲಿ ನೂಲಿಯ ಚಂದಯ್ಯನವರ ಕಾಯಕ ನಿಷ್ಠೆಯನ್ನು ಅಳವಡಿಕೊಂಡು ಪಾಲನೆ ಮಾಡಬೇಕು. ಜತೆಗೆ ನಮ್ಮ ಮುಂದಿನ ಪೀಳಿಗೆಗೂ ಹನ್ನೆರಡನೆಯ ಶತಮಾನದ ಶರಣರ ಆದರ್ಶ-ಗುಣಗಳ ಬಗ್ಗೆ ತಿಳಿಸುವ ಮಹತ್ವದ ಜವಬ್ದಾರಿ ಮರೆಯಬಾರದು ಎಂದರು. ದೇವನಹಳ್ಳಿ ತಾಲ್ಲೂಕಿನ ಮಾಜಿ ಶಾಸಕರಾದ ಜಿ.ಚಂದ್ರಣ್ಣ ಅವರು ಮಾತನಾಡಿ ಶರಣ ನುಲಿಯ ಚಂದಯ್ಯನವರ 48 ವಚನಗಳು ದೊರೆತಿದ್ದು, ಅವರ ಎಲ್ಲ ವಚನಗಳು ಕಾಯಕ ಪರಿಕಲ್ಪನೆಯದಾಗಿವೆ. ನಾವುಗಳು ಚಂದಯ್ಯನವರ ಜೀವನ ಚರಿತ್ರೆ, ವಚನಗಳು ತಿಳಿದುಕೊಂಡು ಬದುಕಿನಲ್ಲಿ ರೂಡಿಸಿಕೊಳ್ಳಬೇಕಿದೆ ಎಂದರು.ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು , ಸಿಬ್ಬಂದಿಗಳು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು