LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಪ್ರತಿ ವಿದ್ಯಾರ್ಥಿಯಲ್ಲೂ ಒಂದಲ್ಲ ಒಂದು ವಿಶೇಷ ಪ್ರತಿಭೆ ಇದ್ದೇ ಇರುತ್ತದೆ

ದೊಡ್ಡಬಳ್ಳಾಪುರ: ಪ್ರತಿಯೊಬ್ಬ ವ್ಯಕ್ತಿಯ ಸಮಗ್ರ ಬೆಳವಣಿಗೆಗೆ ಮತ್ತು ಜೀವನದಲ್ಲಿ ಯಶಸ್ಸಿಗೆ ಶಿಕ್ಷಣ ಬಹಳ ಮುಖ್ಯ ಪಾತ್ರ ವಹಿಸುತ್ತದೆ ಎಂದು ವೈದ್ಯೆ ಡಾ. ಕೆ.ಎಂ.ವೇದಾಮಣಿ ತಿಳಿಸಿದರು.
ಅವರು ದೊಡ್ಡಬಳ್ಳಾಪುರ ನಗರದ ಮಾಂಗಲ್ಯ ಕಲ್ಯಾಣ ಮಂಟಪದಲ್ಲಿ ಸಹ್ಯಾದ್ರಿ ಮತ್ತು ಜ್ಞಾನಗಂಗಾ ವಿದ್ಯಾಸಂಸ್ಥೆಯ ಶಾಲಾ ವಾರ್ಷಿಕೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಶಿಕ್ಷಣದ ಮಹತ್ವವನ್ನು ಅರಿತವರುವಿದ್ಯಾರ್ಥಿಗಳಿಗೆ ಶಿಸ್ತು ಅವರಲ್ಲಿ ಸಕಾರಾತ್ಮಕ ಬೆಳವಣಿಗೆ ಸಹಕಾರಿ ಆಗುತ್ತದೆ. ಮಕ್ಕಳನ್ನು ಸುಶಿಕ್ಷಿತಗೊಳಿಸುವಲ್ಲಿ ಪೋಷಕರ ಪಾತ್ರ ಮಹತ್ವದಾಗಿರುತ್ತದೆ. ವಿದ್ಯಾರ್ಥಿಗಳಿಗೆ ವಿದ್ಯೆಯೊಂದಿಗೆ ವಿನಯವು ಬಹುಮುಖ್ಯವಾಗಿರುತ್ತದೆ. ಮಾನವೀಯ ಮೌಲ್ಯಗಳೊಂದಿಗೆ ಆರೋಗ್ಯಕರ ಜೀವನಶೈಲಿದಿಂದ ಸುಶಿಕ್ಷಿತ ಸಮಾಜ ನಿರ್ಮಾಣವಾಗುತ್ತದೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಕನ್ನಡ ಭಾಷಾ ವಿಷಯ ಪರೀಕ್ಷಕರಾದ ಪದ್ಮಾವತಿ ಮಾತನಾಡಿ, ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಉತ್ತಮಗೊಳಿಸಲು 20 ಅಂಶಗಳ ಕಾರ್ಯಕ್ರಮವನ್ನು ರೂಪಿಸಿದೆ. ಉತ್ತಮ ಫಲಿತಾಂಶ ಮತ್ತು ಗುಣಮಟ್ಟದ ಶಿಕ್ಷಣ ಶಿಕ್ಷಕರ ಗುರಿಯಾಗಿದೆ. ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿ ಸೇರಿದಂತೆ ವಿವಿಧ ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯ ಭಾಗವಹಿಸಬೇಕು.

ಪ್ರತಿ ವಿದ್ಯಾರ್ಥಿಯಲ್ಲೂ ಒಂದಲ್ಲ ಒಂದು ಪ್ರತಿಭೆ ಇದ್ದೆ ಇರುತ್ತದೆ. ಪ್ರತಿಭೆಯು ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ವಿಕಸನಗೊಳಿಸುತ್ತದೆ ಎಂದರು.ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಪತ್ರಕರ್ತ ಡಿ.ಶ್ರೀಕಾಂತ್, ನಿವೃತ್ತ ಮುಖ್ಯಶಿಕ್ಷಕ ಹನುಮೇಗೌಡ, ಜ್ಞಾನಗಂಗಾ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಆರ್.ವಿಜಯಕುಮಾರ್ ಮತ್ತು ವಿದ್ಯಾಸಂಸ್ಥೆಯ ಪದಾಧಿಕಾರಿಗಳು, ಮುಖ್ಯಶಿಕ್ಷಕರುಗಳಾದ ರವಿಕುಮಾರ್, ಜಗದೀಶ್ ಮತ್ತು ಶಿಕ್ಷಕರು, ಪ್ರತಿಭಾ ಪುರಸ್ಕೃತ ವಿದ್ಯಾರ್ಥಿಗಳಾದ ಎನ್.ಅಭಿಷೇಕ್, ಎಚ್.ಎಸ್.ಅಮೂಲ್ಯ, ಟಿ.ಎಚ್.ಸೃಜನ್ ಮುಂತಾದವರು ಭಾಗವಹಿಸಿದ್ದರು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು