LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಪ್ರಶ್ನೆ ಪತ್ರಿಕೆ ಸೋರಿಕೆ: ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ವಿಶ್ವವಿದ್ಯಾಲಯದ ಕಾನೂನು ಪದವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಜಾಲ ಪತ್ತೆ ಸೈಬರ್ ಕ್ರೈಂ ಪೊಲಿಸರು ಜಗದೀಶ್ 35, ವರುಣ್ ಕುಮಾರ್ 20, ನಾಗರಾಜ್ 47, ರವರುಗಳನ್ನು ಬಂಧಿಸಿರುತ್ತಾರೆ.ನಗರ ಪೊಲೀಸ್ ಆಯುಕ್ತ ದಯಾನಂದ್ ರವರು ಸುದ್ದಿಗೋಷ್ಠಿಯಲ್ಲಿ ಜನವರಿ 23ರಂದು ನಿಗದಿಯಾಗಿದ್ದ ಪ್ರಶ್ನೆ ಪತ್ರಿಕೆಯ ಪ್ರಶ್ನೆಗಳನ್ನು ಸಾಮಾಜಿಕ ಜಾಲತಾಣಗಳಾದ ಟೆಲಿಗ್ರಾಂ ಮತ್ತು ವಾಟ್ಸಾಪ್ ಗ್ರೂಪ್ ಗಳಲ್ಲಿ ಹರಿಬಿಟ್ಟು ವಿದ್ಯಾರ್ಥಿಗಳ ಹಿತಾಸಕ್ತಿಗೆ ಉಂಟು ಮಾಡುತ್ತಿದ್ದ ಮೂರು ಜನ ಆರೋಪಿಗಳನ್ನು ಬಂಧಿಸಿರುತ್ತಾರೆ ಎಂದು ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.

ಎಸ್ ಜೆ ಎಂ ಕಾನೂನು ಮಹಾವಿದ್ಯಾಲಯ ಹಾಗೂ ಚೇರ್ಮನ್ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯಗಳ ಜಾಗೃತ ದಳ 2 ಅಧಿಕಾರಿ ಯವರು ನೀಡಿದ ದೂರಿನ ಮೇರೆಗೆ ಬಂಧಿಸಿರುತ್ತಾರೆ.ಸೈಬರ್ ಕ್ರೈಂ ಪೊಲೀಸರು ಮಾಹಿತಿ ಮತ್ತು ತಾಂತ್ರಿಕ ಸಹಾಯದಿಂದ ಮಾಹಿತಿಗಳನ್ನು ಸಂಗ್ರಹಿಸಿ ಟೆಲಿಗ್ರಾಂ ಗ್ರೂಪ್ ಮೂಲಕ ಎಲ್‍ಎಲ್ ಬಿ ಪರೀಕ್ಷೆಯ ಕಾಂಟ್ರಾಕ್ಟ್ ಲಾ ಒಂದು ಪ್ರಶ್ನೆ ಪತ್ರಿಕೆಯಲ್ಲಿನ ಪ್ರಶ್ನೆಗಳನ್ನು ಪರೀಕ್ಷಾರ್ಥಗಳಿಗೆ ಸೋರಿಕೆ ಮಾಡಿದ್ದ ವ್ಯಕ್ತಿಗಳನ್ನು ಬಂಧಿಸಿರುತ್ತಾರೆ. ಮತ್ತು ಬೆಂಗಳೂರು ನಗರದ ಪೊಲೀಸ್ ಆಯುಕ್ತರ ವ್ಯಾಪ್ತಿಯಲ್ಲಿ ಕಳೆದ ಐದು ವರ್ಷಗಳಲ್ಲಿ ಸುಳ್ಳು ದೂರು ದಾಖಲಿಸಿದ್ದ ಆರು ಪ್ರಕರಣಗಳಲ್ಲಿ ಸುಳ್ಳು ದೂರು ನೀಡಿದವರ ವಿರುದ್ಧ ಪ್ರಕರಣಗಳನ್ನು ಅಮೃತಳ್ಳಿ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದರು. ಈ ಸಂಬಂಧ ನಾಲ್ಕು ಪ್ರಕರಣಗಳಲ್ಲಿ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿತ್ತು.

ಎರಡು ಪ್ರಕರಣಗಳಲ್ಲಿ ವಿಚಾರಣೆ ಪೂರ್ಣಗೊಳಿಸಿ ಶಿಕ್ಷೆ ಗೊಳಿಸಲಾಗಿದೆ ಉಳಿದ ಎರಡು ಪ್ರಕರಣಗಳಲ್ಲಿ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದರು.ಅಮೃತಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣದಲ್ಲಿ ಆರೋಪಿಯು ನ್ಯಾಯಾಲಯದಲ್ಲಿ ತಪ್ಪೋಪ್ಪಿಕೊಂಡ ಕಾರಣ 13 ಮಾರ್ಚ್ 24ರಂದು ನ್ಯಾಯಾಲಯವು ಆರೋಪಿಗೆ 100 ರೂಪಾಯಿ ದಂಡ ವಿಧಿಸಿ ದಂಡ ಕಟ್ಟಲು ತಪ್ಪಿದಲ್ಲಿ ಐದು ದಿನ ಸಾದಾ ಶಿಕ್ಷೆ ಘೋಷಿಸಲಾಗಿದೆ ಎಂದು ತಿಳಿಸಿದರು.ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟ ಹಾಗೆ ಆರೋಪಿಯು ನ್ಯಾಯಾಲಯದಲ್ಲಿ ತಪ್ಪು ಒಪ್ಪಿಕೊಂಡ ಕಾರಣ ನ್ಯಾಯಾಲಯವು 500 ರೂಪಾಯಿ ದಂಡ ವಿಧಿಸಿ ದಂಡ ಕಟ್ಟಲು ತಪ್ಪಿದ್ದಲ್ಲಿ ಐದು ದಿನ ಸಾದಾ ಶಿಕ್ಷೆ ವಿಧಿಸಲಾಗಿದೆ ಎಂದು ಘೋಷಿಸಿದೆ ಎಂದು ಆಯುಕ್ತರು ಸುದ್ದಿಗೋಷ್ಠಿಯಲ್ಲಿ ವಿವರಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು