LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಪ್ರಾಣಿದಯಾ ಸಂಘ ಈಗ ಎಲ್ಲಿದೆ? ನಾಯಿ, ಬೆಕ್ಕಿನ ಜೀವಕ್ಕೆ ಕೊಡೆ ಬೆಲೆ ಗೋಮಾತೆಗಿಲ್ವ: BiggBoss ಖ್ಯಾತಿಯ ಚೈತ್ರಾ ಕುಂದಾಪುರ ಆಕ್ರೋಶ!

ಬೆಂಗಳೂರು: ಬೆಂಗಳೂರಿನಲ್ಲಿ ಹಸುಗಳ ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಮಾಜಿ ಸ್ಪರ್ಧಿ ಚೈತ್ರಾ ಕುಂದಾಪುರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಯಿ, ಬೆಕ್ಕಿನ ಜೀವಕ್ಕೆ ಹಾನಿಯಾದಾಗ ಪ್ರಾಣಿದಯಾ ಸಂಘದವರು ಬೊಬ್ಬೆ ಹೊಡೆದುಕೊಂಡು ಬರುತ್ತಾರೆ. ಆದರೆ ನಾವು ಪೂಜಿಸುವ, ಅದರ ಹಾಲನ್ನು ಕುಡಿಯುವ ಗೋಮಾತೆಗೆ ತೊಂದರೆಯಾದಾಗ ಯಾಕೆ ಮಾತನಾಡಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ಹಸುಗಳ ಮೇಲೆ ನಡೆದಂತ ಕೌರ್ಯ, ನಾಳೆ ಮನುಷ್ಯರ ಮೇಲೂ ನಡೆಯಬಹುದು. ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ಕಠಿಣ ಕ್ರಮ ತೆಗೆದುಕೊಳ್ಳಬೇಕು. ನಾವು ಗೋವುಗಳನ್ನು ಹಸು ಅಂತ ನೋಡಲ್ಲ ಮಾತೆ ಎಂದು ಪೂಜಿಸುತ್ತೇವೆ. ಕುಡಿದ ಮತ್ತಿನಲ್ಲಿ ಆರೋಪಿ ಈ ಕೃತ್ಯ ಎಸಗಿದ್ದಾನೆ ಎಂದು ಹೇಳುತ್ತಿದ್ದಾರೆ. ಆದರೆ ಇದು ಬೇಕೆಂದೇ ಉದ್ದೇಶಪೂರ್ವಕವಾಗಿ ಮಾಡಿರುವಂತ ವಿಕೃತಿ ಕೆಲಸ. ಆರೋಪಿ ವಿರುದ್ಧ BNS ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದರ ಜೊತೆಗೆ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡಿರುವ ಪ್ರಕರಣವನ್ನು ದಾಖಲಿಸಬೇಕು ಎಂದು ಚೈತ್ರಾ ಹೇಳಿದ್ದಾರೆ.

ಹಸುಗಳ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಟನ್ ಪೇಟೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಶೇಕ್ ನಸ್ರು (30) ಎಂದು ಗುರ್ತಿಸಲಾಗಿದೆ. ಈತ ಬಿಹಾರ ರಾಜ್ಯದ ಚಂಪಾರನ್ ಜಿಲ್ಲೆ ಮೂಲದವನಾಗಿದ್ದು, ಘಟನೆ ನಡೆದ ಸ್ಥಳದಿಂದ 50 ಮೀಟರ್ ದೂರದಲ್ಲಿರುವ ಪ್ಲಾಸ್ಟಿಕ್ ಹಾಗೂ ಬಟ್ಟೆ ಹೊಲೆಯುವ ಅಂಗಡಿಯಲ್ಲಿ ಸಹಾಯಕನಾಗಿ ಈತ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಆರೋಪಿಯನ್ನು ಬಂಧನಕ್ಕೊಳಪಡಿಸಿರುವ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಆರೋಪಿಯನ್ನು ಜನವರಿ 24ರವರೆಗೆ ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು