LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಪ್ರೊ ಕಬಡ್ಡಿ: ಮಕಾಡೆ ಮಲಗಿದ ಗುಜರಾತ್, ತಂಡದ ಕಳಪೆ ಪ್ರದರ್ಶನಕ್ಕೆ ಕಾರಣವೇನು?

ಪ್ರೊ ಕಬಡ್ಡಿ ಲೀಗ್‌ನ ೧೧ನೇ ಋತುವಿ ನಲ್ಲಿ ಇಲ್ಲಿಯವರೆಗೆ ಸಾಕಷ್ಟು ಅದ್ಭುತ ಪ್ರದರ್ಶನ ನೀಡಿದ ಹಲವು ತಂಡಗ ಳಿವೆ. ಕೆಲವು ತಂಡಗಳು ನಿರಂತರವಾಗಿ ಪಂದ್ಯಗಳನ್ನು ಗೆಲ್ಲುತ್ತಿವೆ. ಆದರೆ ಕೆಲವು ತಂಡಗಳು ಪದೇ ಪದೇ ಪಂದ್ಯಗಳನ್ನು ಸೋಲುತ್ತಿವೆ. ಈ ಋತುವಿನಲ್ಲಿ ಇದುವರೆಗೆ ಉತ್ತಮ ಪ್ರದರ್ಶನ ತೋರದ ತಂಡಗಳಲ್ಲಿ ಬೆಂಗಳೂರು ಬುಲ್ಸ್ ಜೊತೆ ಗುಜರಾತ್ ಜೈಂಟ್ಸ್ ತಂಡ ಕೂಡ ಒಂದಾಗಿದೆ.
ಪಿಕೆಎಲ್ ೧೧ನೇ ಆವೃತ್ತಿಯಲ್ಲಿ ಗುಜರಾತ್ ಜೈಂಟ್ಸ್ ಒಟ್ಟು ೬ ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಅವರು ಕೇವಲ ಒಂದು ಪಂದ್ಯವನ್ನು ಗೆದ್ದಿದ್ದಾರಷ್ಟೆ. ಉಳಿದ ೫ ಪಂದ್ಯಗಳಲ್ಲಿ ತಂಡ ಸೋಲು ಕಂಡಿದೆ. ಗುಜರಾತ್ ಜೈಂಟ್ಸ್ ತಂಡ ಪಾಯಿಂಟ್ ಪಟ್ಟಿಯಲ್ಲಿ ಅತ್ಯಂತ ಕೆಳ ಸ್ಥಾನದಲ್ಲಿದೆ. ಈ ಋತುವಿನಲ್ಲಿ ಗುಜರಾತ್ ಜೈಂಟ್ಸ್ ಸೋಲಿಗೆ ಪ್ರಮುಖ ಕಾರಣಗಳೇನು ಎಂಬುದನ್ನು ನೋಡುವುದಾದರೆ? ಪ್ರೊ ಕಬಡ್ಡಿ ಲೀಗ್ ೨೦೨೪ ರಲ್ಲಿ ನಾಯಕನಿಂದಲೇ ಕಳಪೆ ಪ್ರದರ್ಶನ ಗುಜರಾತ್ ಜೈಂಟ್ಸ್ ತಂಡವು ಸೀಸನ್ ಆರಂಭಕ್ಕೂ ಮುನ್ನ ನೀರಜ್ ಕುಮಾರ್ ಅವರನ್ನು ನಾಯಕರನ್ನಾಗಿ ನೇಮಿಸಿತ್ತು. ನೀರಜ್ ಮೊದಲು ಪಾಟ್ನಾ ಪೈರೇಟ್ಸ್ ತಂಡದ ಭಾಗವಾಗಿದ್ದರು. ಆದರೆ ಈ ಬಾರಿ ಅವರನ್ನು ಗುಜರಾತ್ ಖರೀದಿಸಿತು.
ರೈಡರ್ಸ್ ಫ್ಲಾಪ್ ಪ್ರದರ್ಶನ ಪ್ರೊ ಕಬಡ್ಡಿ ಲೀಗ್ ಕಳೆದ ಋತುವಿನಲ್ಲಿ ಗುಜರಾತ್ ಜೈಂಟ್ಸ್ ಪರ ಅದ್ಭುತ ಪ್ರದರ್ಶನ ನೀಡಿದ ರೈಡರ್ಸ್ ಈ ಬಾರಿ ವಿಶೇಷವಾಗಿ ಏನನ್ನೂ ಮಾಡಲು ಸಾಧ್ಯವಾಗುತ್ತಿಲ್ಲ. ಪ್ರತೀಕ್ ದಹಿಯಾ ಇದುವರೆಗೆ ೬ ಪಂದ್ಯಗಳಲ್ಲಿ ೧೬ ಅಂಕಗಳನ್ನು ಗಳಿಸಿದ್ದಾರೆ. ಅದೇ ರಾಕೇಶ್ ಸಂಗ್ರೋಯಾ ೫ ಪಂದ್ಯಗಳಲ್ಲಿ ಕೇವಲ ೧೫ ಅಂಕಗಳನ್ನು ಗಳಿಸಲು ಸಾಧ್ಯವಾಯಿತಷ್ಟೆ. ಇದರಿಂದ ನೀವು ರೈಡರ್‌ಗಳ ಫ್ಲಾಪ್ ಕಾರ್ಯಕ್ಷಮತೆಯ ಕಲ್ಪನೆಯನ್ನು ಪಡೆಯಬಹುದು. ರೈಡರ್‌ಗಳು ಪಂದ್ಯದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸುತ್ತಾರೆ. ಆದರೆ, ರೈಡರ್ಸ್ ವೈಫಲ್ಯದಿಂದ ತಂಡವು ಪಂದ್ಯವನ್ನು ಗೆಲ್ಲಲು ಸಾಧ್ಯವಾಗುತ್ತಿಲ್ಲ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು