LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಪ್ರೋಟೋಕಾಲ್ ಉಲ್ಲಂಘಿಸಿದ ಸರ್ಕಾರ: ಕುಮಾರಸ್ವಾಮಿ ಬೇಸರ

ಮಂಡ್ಯ: ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಮತ್ತು ಕರ್ನಾಟಕ ಸರ್ಕಾರದ ನಡುವಿನ ಮುಸುಕಿನ ಗುದ್ದಾಟ ಮುಂದುವರೆದಿದೆ ಎಂಬ ಅನುಮಾನ ವ್ಯಕ್ತವಾಗಿದೆ. ಹೆಚ್​ಡಿ ಕುಮಾರಸ್ವಾಮಿ ರಾಜ್ಯ ಪ್ರವಾಸದ ವೇಳೆ ಸರ್ಕಾರ ಕೇಂದ್ರ ಸಚಿವರ ಪ್ರೋಟೋಕಾಲ್ ಪಾಲನೆ ಮಾಡದೆ ಎಡವಟ್ಟು ಮಾಡಿಕೊಂಡಿದೆ ಎನ್ನಲಾಗುತ್ತಿದೆ. ಹೆಚ್​ಡಿ ಕುಮಾರಸ್ವಾಮಿ ಎರಡು ದಿನ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಸರ್ಕಾರ ಹೆಚ್​ಡಿ ಕುಮಾರಸ್ವಾಮಿ ರಾಜ್ಯ ಪ್ರವಾಸಕ್ಕೆ ಸರ್ಕಾರ ಕಾರು ನೀಡದೆ ನಿರ್ಲಕ್ಷ್ಯ ತೋರಿದೆ ಎಂಬ ಆರೋಪ ಕೇಳಿಬಂದಿದೆ.ಇದರಿಂದ ಅಸಮಾಧಾನಗೊಂಡಿರುವ ಹೆಚ್​ಡಿ ಕುಮಾರಸ್ವಾಮಿ, ರಾಜ್ಯ ಸರ್ಕಾರದ ನಡೆ ವಿರುದ್ಧ ಆಕ್ರೋಶಗೊಂಡಿದ್ದಾರೆ. ಇದೀಗ, ಹೆಚ್​ಡಿ ಕುಮಾರಸ್ವಾಮಿ ಕೇಂದ್ರ ಸರ್ಕಾರದ ವಾಹನದಲ್ಲೇ ಮಂಡ್ಯ, ಮೈಸೂರು ಜಿಲ್ಲೆ ಪ್ರವಾಸ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರದ ನಡೆಗೆ ಮಂಡ್ಯದ ಕೆ.ಆರ್.ಪೇಟೆಯಲ್ಲಿ ಹೆಚ್​ಡಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

“ರಾಜ್ಯ ಸರ್ಕಾರ ನನಗೆ ಇಲ್ಲಿವರೆಗೂ ಕಾರು ಕೊಟ್ಟಿಲ್ಲ. ಹೀಗಾಗಿ, ನಮ್ಮ ಕೇಂದ್ರ ಸರ್ಕಾರದ ವಾಹನ ಬಳಕೆ ಮಾಡುತ್ತಿದ್ದೇನೆ. ಬೃಹತ್ ಕೈಗಾರಿಕಾ ಇಲಾಖೆಯ ವಾಹನ ತರಿಸಿಕೊಂಡಿದ್ದೇನೆ” ಎಂದು ಹೆಚ್​ಡಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ಹೆಚ್ ಡಿ ಕುಮಾರಸ್ವಾಮಿಯವರನ್ನು ನಿರ್ಲಕ್ಷ್ಯ ಮಾಡುತ್ತಿದೆ ಎಂಬ ವಿಚಾರವಾಗಿ ಮಾತನಾಡಿದ ಅವರು “ಆ ಬಗ್ಗೆ ನನಗೆ ಏನು ಗೊತ್ತಿಲ್ಲ. ಈ ಬಗ್ಗೆ ಅವರನ್ನೇ ಕೇಳಬೇಕು” ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST