LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಫಲಿತಾಂಶ ಒಪ್ಪಿಕೊಳ್ಳುವುದಿಲ್ಲ ಬಿಜೆಪಿ ಬಣ್ಣ ಬಯಲಾಗಿದೆ: ಸಂಜಯ್ ರಾವತ್

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಮತ ಎಣಿಕೆ ಮುಂದುವರಿದಿದ್ದು, ಬಿಜೆಪಿ ನೇತೃತ್ವದ ಮಹಾಯುತಿಯು ಅಧಿಕಾರ ಹಿಡಿಯಲು ಬೇಕಾಗಿರುವ ಮ್ಯಾಜಿಕ್ ಸಂಖ್ಯೆಯನ್ನು ದಾಟಿದೆ.ಇದರೊಂದಿಗೆ ಮಹಾ ವಿಕಾಸ ಅಘಾಡಿ ಮೈತ್ರಿಯು ತೀವ್ರ ಹಿನ್ನಡೆ ಅನುಭವಿಸಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವುತ್, 'ಫಲಿತಾಂಶವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ' ಎಂದು ಹೇಳಿದ್ದಾರೆ.
'ಇದನ್ನು ಜನಾದೇಶ ಎಂದು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಬಿಜೆಪಿಯ ಬಣ್ಣ ಬಯಲಾಗಿದ್ದು, ಎರಡು ದಿನಗಳ ಹಿಂದೆಯಷ್ಟೇ ಉದ್ಯಮಿ ಗೌತಮ್ ಅದಾನಿ ವಿರುದ್ಧ ಬಂಧನ ವಾರೆಂಟ್ ಜಾರಿಯಾಗಿದೆ. ಇದರಿಂದ ಗಮನ ಬೇರೆಡೆ ಸೆಳೆಯಲು ಯತ್ನಿಸಲಾಗುತ್ತಿದೆ. ಬಹಳ ಹಿಂದೆಯೇ ಈ ತಂತ್ರ ರೂಪಿಸಲಾಗಿತ್ತು' ಎಂದು ಅವರು ಆರೋಪಿಸಿದ್ದಾರೆ.

288 ಸದಸ್ಯಬಲದ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಹುಮತಕ್ಕೆ ಬೇಕಿರುವ ಮ್ಯಾಜಿಕ್ ಸಂಖ್ಯೆ 145 ಆಗಿದೆ.ಬೆಳಿಗ್ಗೆ 11 ಗಂಟೆಯ ಟ್ರೆಂಡ್ ವೇಳೆಗೆ ಮಹಾಯುತಿ 220, ಮಹಾ ವಿಕಾಸ ಅಘಾಡಿ 55 ಮತ್ತು ಇತರರು 13 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.ನಮ್ಮ ಮಹಾ ವಿಕಾಸ್ ಅಘಾಡಿ (ಎಂವಿಎ) ಒಕ್ಕೂಟಕ್ಕೆ 75 ಸ್ಥಾನಗಳನ್ನೂ ನೀಡಲಾಗದ ಈ ಫಲಿತಾಂಶ ಸಂದೇಹಾಸ್ಪದ. 56 ಸ್ಥಾನಗಳಲ್ಲಿ ಏಕನಾಥ ಶಿಂದೆ ಗುಂಪು, 40 ಸ್ಥಾನಗಳಲ್ಲಿ ಅಜಿತ್ ಪವಾರ್ ಬಣ, 125 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸುವುದು ಸಾಧ್ಯವೇ ಇಲ್ಲ.

ಒಂದು ಪಕ್ಷವು ಮಹಾರಾಷ್ಟ್ರದಲ್ಲಿ 200 ಸ್ಥಾನಗಳನ್ನು ದಾಟುವುದೇ ಸಾಧ್ಯವಿಲ್ಲ. ಹೀಗಿರುವಾಗ ನಾವು ಈ ಫಲಿತಾಂಶವನ್ನು ಒಪ್ಪುವುದಿಲ್ಲ. ಮಹಾರಾಷ್ಟ್ರದ ಪ್ರಜೆಗಳು ಅಪ್ರಾಮಾಣಿಕರಲ್ಲ, ಆದರೆ ಬಿಜೆಪಿ ನೇತೃತ್ವದ ಮಹಾಯುತಿ ಪ್ರಾಮಾಣಿಕವಾಗಿ ಗೆಲುವು ಸಾಧಿಸಿಲ್ಲ ಎಂದು ರಾವುತ್ ವಾಗ್ದಾಳಿ ನಡೆಸಿದ್ದಾರೆ.
ಇದು ಜನಾದೇಶವಲ್ಲ, ಈ ಫಲಿತಾಂಶವನ್ನು ಗೌತಮ್ ಅದಾನಿ ತಂಡವೇ ರೂಪಿಸಿದೆ ಎಂದು ರಾವುತ್ ಕಿಡಿಕಾರಿದ್ದಾರೆ. ಅವರು (ಅದಾನಿ) ನಮ್ಮ ಕ್ಷೇತ್ರಗಳನ್ನು ಕಸಿದುಕೊಂಡಿದ್ದಾರೆ. ಇದು ಜನಾದೇಶವಲ್ಲ. ಜನರೂ ಈ ಫಲಿತಾಂಶವನ್ನು ಒಪ್ಪುವುದಿಲ್ಲ. ಇದು ಜನರ ನಿರ್ಣಯವಲ್ಲ.

ಫಲಿತಾಂಶ ಪೂರ್ತಿ ಹೊರಬರಲಿ, ನಾವು ಆಮೇಲೆ ಮಾತನಾಡುತ್ತೇವೆ. ಪ್ರತಿಯೊಂದು ಕ್ಷೇತ್ರದಲ್ಲಿಯೂ ಹಣ ಲೆಕ್ಕ ಮಾಡುವ ಯಂತ್ರ ಸ್ಥಾಪಿಸಲಾಗಿದೆ ಎಂದು ರಾವುತ್ ದೂರಿದ್ದಾರೆ.ಮತ್ತೆ ಬ್ಯಾಲೆಟ್ ಪೇಪರ್ ಮೂಲಕವೇ ಚುನಾವಣೆ ಆಗಬೇಕು. ಮಹಾರಾಷ್ಟ್ರದ ಫಲಿತಾಂಶವು ಜನಾಭಿಪ್ರಾಯದ ಮತಗಳಲ್ಲವೇ ಅಲ್ಲ. ಈ ಫಲಿತಾಂಶವನ್ನು ಒಪ್ಪಲು ಸಾಧ್ಯವೇ ಇಲ್ಲ ಎಂದವರು 'ಎಕ್ಸ್' ಖಾತೆಯಲ್ಲಿಯೂ ಬರೆದುಕೊಂಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು