LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

`ಫಾರೆಸ್ಟ್' ಪೋಸ್ಟರ್ ಬಿಡುಗಡೆ

ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ ಅಡ್ವೆಂಚರ್ಸ್ ಕಾಮಿಡಿ ಕಥಾಹಂದರ ಒಳಗೊಂಡಿರುವ, ಮಲ್ಟಿ ಸ್ಟಾರರ್ ಸಿನಿಮಾ "ಫಾರೆಸ್ಟ್". ಶೀರ್ಷಿಕೆ, ತಾರಾಗಣ, ಕನ್ಸೆಪ್ಟ್, ಟೀಸರ್ ಹಾಗೂ ಹಾಡುಗಳ ಮೂಲಕ ಈಗಾಗಲೇ ಜನರ ಮನಸ್ಸಿಗೆ ಹತ್ತಿರವಾಗಿರುವ ಬಹು ನಿರೀಕ್ಷಿತ "ಫಾರೆಸ್ಟ್" ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. 2025 ರ ಜನವರಿ 24 ರಂದು ಈ ಚಿತ್ರ ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ.

ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಮಾಡಿದೆ.ಸಮಾಜಕ್ಕೆ ಸದಭಿರುಚಿ ಚಿತ್ರಗಳನ್ನು ನೀಡುವ ಹಂಬಲ ಹೊಂದಿರುವ ಎನ್ ಎಂ ಕಾಂತರಾಜ್ ಅವರು ಎನ್ ಎಂ ಕೆ ಸಿನಿಮಾಸ್ ಬ್ಯಾನರ್ ನಲ್ಲಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಚಿತ್ರವನ್ನು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆ ಮಾಡುವ ಸಿದ್ದತೆ ನಡೆಸುತ್ತಿದ್ದಾರೆ.

ಕಾಡಿನಲ್ಲೇ ನಡೆಯುವ ಅಡ್ವೆಂಚರಸ್ ಕಾಮಿಡಿ ಕಥೆಯನ್ನು ನಿರ್ದೇಶಕ ಚಂದ್ರಮೋಹನ್ ಈ ಚಿತ್ರದ ಮೂಲಕ ವಿಭಿನ್ನವಾಗಿ ಹೇಳುವ ಪ್ರಯತ್ನ ಮಾಡಿದ್ದಾರೆ. ತಮ್ಮ ಅಭಿನಯದ ಮೂಲಕ ಜನಮನಸೂರೆಗೊಂಡಿರವ ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್ ಹಾಗೂ ರಂಗಾಯಣ ರಘು ಅವರಂಥ ಸ್ಟಾರ್ ಕಲಾವಿದರು ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ಮಲ್ಟಿ ಸ್ಟಾರರ್ ಚಿತ್ರ ಇದಾಗಿದೆ.

ಸತ್ಯ ಶೌರ್ಯ ಸಾಗರ್ ಹಾಗೂ ಚಂದ್ರಮೋಹನ್ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ರಚಿಸಿದ್ದಾರೆ. ಸತ್ಯಶೌರ್ಯ ಸಾಗರ್ ಅವರೆ ಸಂಭಾಷಣೆಯನ್ನೂ ಬರೆದಿದ್ದಾರೆ. ಧರ್ಮವಿಶ್ ಸಂಗೀತ ನಿರ್ದೇಶನ, ಆನಂದ್‍ರಾಜಾ ವಿಕ್ರಮ್ ಅವರ ಹಿನ್ನೆಲೆ ಸಂಗೀತ, ರವಿಕುಮಾರ್ ಅವರ ಛಾಯಾಗ್ರಹಣ, ಅರ್ಜುನ್ ಕಿಟ್ಟು ಅವರ ಸಂಕಲನ, ಅಮರ್ ಅವರ ಕಲಾ ನಿರ್ದೇಶನ ಹಾಗೂ ಡಾ||ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್, ರಂಗಾಯಣ ರಘು, ಶರಣ್ಯ ಶೆಟ್ಟಿ, ಅರ್ಚನಾ ಕೊಟ್ಟಿಗೆ, ಅವಿನಾಶ್, ಪ್ರಕಾಶ್ ತುಮ್ಮಿನಾಡು, ದೀಪಕ್ ರೈ ಪಾಣಂಜೆ, ಸೂರಜ್ ಪಾಪ್ಸ್, ಸುನೀಲ್‍ಕುಮಾರ್ ಮುಂತಾದ ಹಿರಿಯ ಹಾಗೂ ಕಿರಿಯ ಕಲಾವಿದರು "ಫಾರೆಸ್ಟ್" ಚಿತ್ರದಲ್ಲಿ ಅಭಿನಯಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು