LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಫುಟ್ಬಾಲ್ ಟೂರ್ನಿ ವೇಳೆ ಮೈದಾನಕ್ಕೆ ಸಿಡಿಲು ಬಡಿದು ಒಬ್ಬ ಆಟಗಾರ ಸಾವು, 5 ಮಂದಿಗೆ ಗಾಯ

ಲಿಮಾ: ಪೆರು ದೇಶದ ಸ್ಥಳೀಯ ಫುಟ್ಬಾಲ್‌ ಟೂರ್ನಿ ವೇಳೆ ಮೈದಾನಕ್ಕೆ ಸಿಡಿಲು ಬಡಿದ ಕಾರಣ ಓರ್ವ ಆಟಗಾರ ಸ್ಥಳದಲ್ಲೇ ಮೃತಪಟ್ಟಿದ್ದು, ಇತರ ಐವರು ತೀವ್ರ ಗಾಯಗೊಂಡಿರುವ ಆಘಾತಕಾರಿ ಘಟನೆ ವರದಿಯಾಗಿದೆ.

ಪೆರುವಿನ ಹುವಾನ್ಕಾಯೊದ ಚಿಲ್ಕಾದಲ್ಲಿನ ಕೊಟೊ ಕೊಟೊ ಕ್ರೀಡಾಂಗಣಗದಲ್ಲಿ ಈ ಘಟನೆ ನಡೆದಿದ್ದು, ಸಿಡಿಲು ಬಡಿಯುತ್ತಲೇ ಮೈದಾನದಲ್ಲಿದ್ದ 5 ಮಂದಿ ಆಟಗಾರರು ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ.

ಈ ಪೈಕಿ 39 ವರ್ಷದ ಜೋಸ್‌ ಹ್ಯುಗೊ ಡೆ ಲಾ ಕ್ರೂಜ್ ಮೆಸಾ ಸಾವನ್ನಪ್ಪಿದ್ದು, ದುರದೃಷ್ಟವಶಾತ್ ಆಸ್ಪತ್ರೆಗೆ ಕರೆದೊಯ್ಯುವಾಗ ಪ್ರಾಣ ಬಿಟ್ಟಿದ್ದಾರೆ ಎನ್ನಲಾಗಿದೆ. ಅಂತೆಯೇ ಘಟನೆಯಲ್ಲಿ ಐದು ಮಂದಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಆಟಗಾರರು ಮೈದಾನದಲ್ಲಿದ್ದಾಗ ಸಿಡಿಲು ಬಡಿದಿದ್ದು, ಜೋಸ್‌ ಸೇರಿ ಹಲವು ಆಟಗಾರರು ಕುಸಿದು ಬಿದ್ದಿದ್ದಾರೆ. ಗಾಯಗೊಂಡ ಆಟಗಾರರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಡಿಲು ಬಡಿದು ಆಟಗಾರರು ಕುಸಿದು ಬೀಳುವ ವಿಡಿಯೋಗಳು ಸಾಮಾಜಿಕ ತಾಣಗಳಲ್ಲಿ ವೈರಲ್‌ ಆಗಿದೆ.

ಸಿಡಿಲಿನ ಶಾಕಕ್ಕೆ ತೀವ್ರ ಗಾಯಗೊಂಡರವನ್ನು ಎರಿಕ್ ಎಸ್ಟಿವಿನ್, ಜೋಸೆಫ್ ಗುಸ್ಟಾವೊ ಹಾಗೂ ಕ್ರಿಸ್ಟಿಯಾನ್ ಸೀಸರ್ ಎಂದು ಗುರುತಿಸಲಾಗಿದೆ. ಈ ಎಲ್ಲರನ್ನು ಅಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರ ನಿಗಾದಲ್ಲಿದ್ದಾರೆ. ಇನ್ನು ಸ್ಥಳೀಯ ವರದಿಯ ಪ್ರಕಾರ ಗೋಲ್ ಕೀಪರ್ ಜಾನ್ ಚೊಚ್ಚಾ ಲಾಕ್ಟ ಅವರ ಪರಿಸ್ಥಿತಿ ಗಂಭೀರವಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ವರದಿಯಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು