LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಫೆಂಗಲ್ ಭೀತಿ: ತಮಿಳುನಾಡಿನಲ್ಲಿ ರೆಡ್ ಅಲರ್ಟ್

ನವದೆಹಲಿ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ `ಫೆಂಗಲ್' ಚಂಡಮಾರುತ ಇಂದು ತಮಿಳುನಾಡು ಹಾಗೂ ಪುದುಚೇರಿಯ ಕರಾವಳಿಗೆ ಅಪ್ಪಳಿಸಲಿದೆ. ಹೀಗಾಗಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಮಿಳುನಾಡಿನ ಹಲವು ಭಾಗಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.

ಇಂದು ಮಧ್ಯಾಹ್ನ ಪುದುಚೇರಿ ಕರಾವಳಿಗೆ `ಫೆಂಗಲ್' ತಲುಪಬಹುದು. ಇದರ ಪರಿಣಾಮದಿಂದಾಗಿ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಮತ್ತು ಗಾಳಿಯ ವೇಗ ಗಂಟೆಗೆ 90 ಕಿಲೋಮೀಟರ್ ವರೆಗೆ ಇರಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ಈ ಅವಧಿಯಲ್ಲಿ ಸಮುದ್ರದಲ್ಲಿ ಭಾರಿ ಅಲೆಗಳು ಏಳಬಹುದು. ತಮಿಳುನಾಡು, ದಕ್ಷಿಣ ಆಂಧ್ರಪ್ರದೇಶ, ಕೇರಳ ಮತ್ತುಕರ್ನಾಟಕದ ಒಳನಾಡಿನ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಇದ್ದು, ಐಎಂಡಿ ರೆಡ್ ಅಲರ್ಟ್ ಘೋಷಿಸಿದೆ.ಪುದುಚೇರಿ ಬಳಿಯ ಕಾರೈಕಲ್ ಮತ್ತು ಮಹಾಬಲಿಪುರಂ ನಡುವಿನ ಕ್ರಾಸಿಂಗ್ ಪಾಯಿಂಟ್‍ನಲ್ಲಿರುವ ಬಹುತೇಕ ಕರಾವಳಿ ಜಿಲ್ಲೆಗಳ ಮೇಲೆ ಫೆಂಗಲ್ ಸೈಕ್ಲೋನ್‍ನ ಪರಿಣಾಮ ಹೆಚ್ಚಾಗಿರಲಿದೆ ಎಂದು ಚೆನ್ನೈನ ಪ್ರಾದೇಶಿಕ ಹವಾಮಾನ ಕೇಂದ್ರದ ನಿರ್ದೇಶಕ ಡಾ. ಎಸ್ ಬಾಲಚಂದ್ರನ್ ತಿಳಿಸಿದ್ದಾರೆ.

ತಮಿಳುನಾಡು ಕರಾವಳಿಯಲ್ಲಿ ಜೋರಾದ ಗಾಳಿ ಸಹಿತ ಭಾರೀ ಮಳೆಯಾಗಲಿದೆ. ಗಾಳಿಯ ವೇಗ ಗಂಟೆಗೆ 60-70 ಕಿ.ಮೀ ನಿಂದ 90 ಕಿ.ಮೀ. ವರೆಗೆ ಇರಲಿದೆ. ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ಭಾರೀ ಮಳೆಯಾಗಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು