LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chamarajanagara

ಫೆ.15ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ

ಚಾಮರಾಜನಗರ: ಸಚಿವ ಸಂಪುಟ ಸಭೆಯನ್ನು ಫೆಬ್ರವರಿ 15ರಂದು ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಪಶುಸಂಗೋಪನೆ, ರೇಷ್ಮೇ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಹೇಳಿದರು.ನಗರದ ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿಂದು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಚಿವ ಸಂಪುಟ ಸಂಬಂಧ ಪೂರ್ವಭಾವಿ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಜಿಲ್ಲಾ ಉಸ್ತುವಾರಿ ಸಚಿವರು ಈ ವಿಷಯ ತಿಳಿಸಿದರು.

ಈ ಮೊದಲು ಫೆಬ್ರವರಿ 13ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಸಲು ದಿನಾಂಕ ನಿಗದಿ ಮಾಡಲಾಗಿತ್ತು. ಆದರೆ 13, 14ರಂದು ಬೆಂಗಳೂರಿನಲ್ಲಿ ಗ್ಲೋಬಲ್ ಇನ್ವೆಸ್ಟರ್ ಮೀಟ್ ಇರುವುದರಿಂದ ಸಚಿವ ಸಂಪುಟ ಸಭೆಯನ್ನು ಫೆಬ್ರವರಿ 15ಕ್ಕೆ ನಿಗದಿ ಮಾಡಲಾಗಿದೆ ಎಂದರು.ಸಚಿವ ಸಂಪುಟ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇಂದು ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಲಾಗಿದೆ. ಇಲಾಖಾವಾರು ಅಧಿಕಾರಿಗಳು ಅಭಿವೃದ್ದಿ ಕೆಲಸಗಳ ಸಂಬಂಧ ಮಾಹಿತಿ ವಿವರಗಳನ್ನು ನೀಡಿದ್ದಾರೆ.

ಈ ಕುರಿತು ಸಾಧಕ ಬಾಧಕಗಳ ಬಗ್ಗೆ ಚರ್ಚಿಸಿ ಪರಿಹಾರ ಕಲ್ಪಿಸಬೇಕಿದೆ. ಮುಖ್ಯಮಂತ್ರಿಗಳ ಗಮನಕ್ಕೆ ತಂದು ಅಭಿವೃದ್ದಿ ಸಂಬಂಧ ಏನೇನೂ ಸಾಧ್ಯವೋ ಅವೆಲ್ಲವನ್ನೂ ಮಾಡಲಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು.ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಎ.ಆರ್. ಕೃಷ್ಣಮೂರ್ತಿ, ಎಂ.ಆರ್. ಮಂಜುನಾಥ್, ವಿಧಾನಪರಿಷತ್ ಸದಸ್ಯರಾದ ಡಾ. ಡಿ. ತಿಮ್ಮಯ್ಯ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಪುಷ್ಪ ಅಮರನಾಥ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ಕಾವೇರಿ ಜಲಾನಯನ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಪಿ. ಮರಿಸ್ವಾಮಿ, ಚೂಡಾ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ಮುನ್ನಾ, ನಗರಸಭೆ ಅಧ್ಯಕ್ಷರಾದ ಎಸ್. ಸುರೇಶ್, ಇನ್ನಿತರರು ಸುದ್ದಿಗೋಷ್ಠಿಯಲ್ಲಿ ಇದ್ದರು. ಇದಕ್ಕೂ ಮೊದಲು ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರೈತ ಮುಖಂಡರ ಅಹವಾಲುಗಳನ್ನು ಆಲಿಸಿ ಚರ್ಚೆ ನಡೆಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು