LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಫೆ.7ಕ್ಕೆ ಅಧಿಪತ್ರ ರಿಲೀಸ್... ಬಿಗ್ ಬಾಸ್ ರೂಪೇಶ್ ಶೆಟ್ಟಿ ನಟನೆ

ಸ್ಯಾಂಡಲ್‍ವುಡ್‍ನ ಭರವಸೆ ನಟ ರೂಪೇಶ್ ಶೆಟ್ಟಿ ಅಭಿನಯದ ಅಧಿಪತ್ರ ಸಿನಿಮಾ ತೆರೆಗೆ ಬರಲು ರೆಡಿಯಾಗಿದೆ. ಫೆಬ್ರವರಿ 7ಕ್ಕೆ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಟೀಸರ್ ಮೂಲಕ ಕುತೂಹಲ ಹೆಚ್ಚಿಸಿರುವ ಅಧಿಪತ್ರದಲ್ಲಿ ಕರಾವಳಿ ಭಾಗದ ಕಥೆಯನ್ನು ಕಟ್ಟಿಕೊಡಲಾಗಿದೆ.

ಕರಾವಳಿ ಭಾಗದ ವಿಶೇಷ ಆಚರಣೆಗಳಾದ ಆಟಿ ಕಳಂಜಾ, ಯಕ್ಷಗಾನ, ಹುಲಿ ಕುಣಿತ ಜೊತೆಗೆ ಅಧಿಪತ್ರ ಚಿತ್ರದಲ್ಲಿ ಹೊಸ ರೀತಿಯ ಕಥೆಯನ್ನೆ ಹೆಣೆಯಲಾಗಿದೆ. ಚಯನ್ ಶೆಟ್ಟಿ ಒಂದ್ ಒಳ್ಳೆ ಗಟ್ಟಿಕಥೆಯ ಜೊತೆಗೆ ಅದ್ಭುತ ಮೇಕಿಂಗ್ ಕೂಡ ಮಾಡಿದ್ದಾರೆ ಅದನ್ನ ಕರಾವಳಿ ಭಾಗದಲ್ಲಿಯೇ ಚಿತ್ರೀಕರಣ ಮಾಡಿದ್ದಾರೆ.ಈಗಾಗಲೇ ಚಿತ್ರದ ಡಬ್ಬಿಂಗ್ ಹಾಗೂ ಓಟಿಟಿ ಹಕ್ಕುಗಳಿಗೆ ಬೇಡಿಕೆ ಬಂದಿದೆ.

ಅಧಿಪತ್ರ ಚಿತ್ರದಲ್ಲಿ ರೂಪೇಶ್ ಶೆಟ್ಟಿಗೆ ನಿರೂಪಕಿ ಜಾಹ್ನವಿ ಜೋಡಿ ಆಗಿದ್ದಾರೆ. ಸಿನಿಮಾದಲ್ಲಿ ನುರಿತ ಕಲಾವಿದರೇ ಇದ್ದಾರೆ. ಎಂ.ಕೆ.ಮಠ ಅಭಿನಯಿಸಿದ್ದಾರೆ. ಕಾಂತಾರ ಚಿತ್ರ ಖ್ಯಾತಿಯ ಪ್ರಕಾಶ್ ತುಮಿನಾಡು, ರಘು ಪಾಂಡೇಶ್ವರ್, ದೀಪಕ್ ರೈ, ಕಾರ್ತಿಕ್ ಭಟ್, ಅನಿಲ್ ಉಪ್ಪಾಲ್, ಪ್ರಶಾಂತ್ ಅವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

`ಅಧಿಪತ್ರ' ಸಿನಿಮಾವು ಸಸ್ಪೆನ್ಸ್-ಥ್ರಿಲ್ಲರ್ ಶೈಲಿಯಲ್ಲಿ ಮೂಡಿಬಂದಿದೆ. `ಕೆ.ಆರ್. ಸಿನಿ ಕಂಬೈನ್ಸ್' ಬ್ಯಾನರ್ ಮೂಲಕ ದಿವ್ಯಾ ನಾರಾಯಣ್, ಕುಲದೀಪ್ ರಾಘವ್ ಲಕ್ಷ್ಮೇ ಗೌಡ ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ ಹಾಗೂ ಬೆಳಕು ಫಿಲಂಸ್ ಅಡಿಯಲ್ಲಿ ಕಾರ್ತಿಕ್ ಶೆಟ್ಟಿ ಮತ್ತು ಸತೀಶ್ ಶೆಟ್ಟಿ ಶ್ವೇತಾ ರವಿಚಂದ್ರ ಶೆಟ್ಟಿ ಕೂಡ ಸಹ-ನಿರ್ಮಾಪಕರಾಗಿದ್ದಾರೆ. ಅಧಿಪತ್ರ ಚಿತ್ರದ ಪೋಸ್ಟ್  ಪ್ರೊಡಕ್ಷನ್ ಕೆಲಸ ಮುಗಿದಿದ್ದು ಇದೆ 27 ಕೆ ಚಿತ್ರದ ಮೊದಲ ಹಾಡು ಲಹರಿ ಮ್ಯೂಸಿಕ್ ನಲ್ಲಿ ರಿಲೀಸ್ ಆಗಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು