LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಬಂಡೆ ಮಹಾಕಾಳಿ ಸನ್ನಿಧಿಯಲ್ಲಿ `S/o ಮುತ್ತಣ್ಣ'ನಿಗೆ ಕುಂಬಳಕಾಯಿ

ದೇವರಾಜ್ ಕಿರಿಯ ಮಗ ಪ್ರಣಂ ದೇವರಾಜ್ ನಟನೆಯ ಸಿನಿಮಾ ಸನ್ ಆಪ್ ಮುತ್ತಣ್ಣ. ಈ ಚಿತ್ರಕ್ಕೆ ಕುಂಬಳಕಾಯಿ ಪ್ರಾಪ್ತಿಯಾಗಿದೆ. ಸಿನಿಮಾ ಸೆಟ್ಟೇರಿದ ಜಾಗದಲ್ಲಿ ಕುಂಬಳಕಾಯಿ ಒಡೆಯಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿತ್ತು. ಅದರಂತೆ ಬೆಂಗಳೂರಿನ ಬಂಡೆ ಮಾಕಾಳಮ್ಮ ದೇವಸ್ಥಾನದಲ್ಲಿ ಕೊನೆಯ ಹಂತದ ಶೂಟಿಂಗ್ ಮಾಡಿ ಕುಂಬಳಕಾಯಿ ಒಡೆಯಲಾಗಿದೆ. ಈ ಸಂದರ್ಭದಲ್ಲಿ ಇಡೀ ಚಿತ್ರತಂಡ ಭಾಗಿ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದೆ.

ನಾಯಕ ಪ್ರಣಂ ದೇವರಾಜ್ ಮಾತನಾಡಿ, ಇವತ್ತು ಖುಷಿಯೂ ಇದೆ. ಬೇಜಾರು ಇದೆ. ಖುಷಿ ಏನಕ್ಕೆ ಅಂದರೆ ನನ್ನ ಸಿನಿಮಾದ ಶೂಟಿಂಗ್ ಮುಕ್ತಾಯಗೊಂಡಿದೆ. ಬೇಜಾರು ಏನಕ್ಕೆ ಅಂದರೆ ನಾಳೆಯಿಂದ ಇವರು ಯಾರು ಸಿಗಲ್ಲ ಅಂತಾ. ಈ ಜರ್ನಿ ಖುಷಿ ಜೊತೆಗೆ ಎಮೋಷನಲ್ ಆಗಿಯೂ ಇತ್ತು. ಟೆನ್ಷನ್ ಕೂಡ ಇತ್ತು. ಸಿನಿಮಾ ತುಂಬಾ ಚೆನ್ನಾಗಿ ಬಂದಿದೆ. ಅಪ್ಪ ಮಗನ ಬಾಂಧವ್ಯದ ಕಥೆ ಇದು.

ನಮ್ಮ ಅಪ್ಪ ಮಗನ ಬಾಂಧವ್ಯ ಹೇಗಿದೆ ಅಂತಾ ಗೊತ್ತಿದೆ, ರಘು ಸರ್ ಸೆಟ್ ನಲ್ಲಿ ನನಗೆ ತಂದೆ ತರ ಇದ್ದರು. ಇವರಿಂದ ಸಾಕಷ್ಟು ಕಲಿತ್ತಿದ್ದೇನೆ. ಖುಷಿ ಅದ್ಭುತ ನಟಿ. ಸಾಕಷ್ಟು ಜನ ಕಲಾವಿದರು ಚಿತ್ರದಲ್ಲಿದ್ದಾರೆ. ಪುರಾತನ ಫಿಲ್ಮ ಈ ರೀತಿ ಅವಕಾಶ ಕೊಟ್ಟಿರುವುದಕ್ಕೆ ಧನ್ಯವಾದ ಎಂದರು.ನಾಯಕಿ ಖುಷಿ ರವಿ ಮಾತನಾಡಿ, ಶೂಟ್ ಮುಗಿಸಿ, ದೃಷ್ಟಿ ತೆಗೆದು ಕುಂಬಳಕಾಯಿ ಹೊಡೆಯೋದನ್ನು ನೋಡಿದ್ದೇವೆ. ಆದರೆ ಪುರಾತನ ಫಿಲ್ಮಂಸ್ ಅದ್ಧೂರಿಯಾಗಿ ಶೂಟಿಂಗ್ ಮುಗಿಸಿದೆ. 49 ದಿನ ಜರ್ನಿಯಲ್ಲಿಯೂ ಯಾವುದೇ ರೀತಿ ಕೊರತೆ ಇಲ್ಲದ ರೀತಿ ನೋಡಿಕೊಂಡಿದ್ದಾರೆ.

ಹರೀಶ್ ಸರ್ ಗೆ ಧನ್ಯವಾದ. ನಿರ್ದೇಶಕ ಶ್ರೀಕಾಂತ್ ಸರ್ ತುಂಬಾ ಕ್ಲಾರಿಟಿ ಇದೆ. ಈ ಜನರೇಷನ್ ಗೆ ಅಪ್ಪ-ಮಗ, ಅಪ್ಪ-ಮಗಳು, ಸ್ನೇಹ ಎಲ್ಲಾ ಎಮೋಷನ್ ಸಿನಿಮಾದಲ್ಲಿ ತೋರಿಸಿದ್ದಾರೆ. ಸಾಂಗ್ ಸಚಿನ್ ಬಸ್ರೂರ್ ಅದ್ಭುತವಾಗಿ ಕಂಪೋಸ್ ಮಾಡಿದ್ದಾರೆ. ಧನು ಮಾಸ್ಟರ್ ಅದ್ಭುತವಾಗಿ ನನ್ನ ಕೈಯಿಂದ ಡ್ಯಾನ್ಸ್ ಮಾಡಿಸಿದ್ದಾರೆ. ಕೃಷ್ಣಣ್ಣ ನಮ್ಮನ್ನು ತುಂಬಾ ಚೆನ್ನಾಗಿ ಕ್ಯಾಪ್ಟರ್ ಮಾಡಿದ್ದಾರೆ ಎಂದರು.

ನಿರ್ದೇಶಕ ಶ್ರೀಕಾಂತ್ ಮಾತನಾಡಿ, ಬಂಡಿ ಮಹಾಕಾಳಿ ದೇಗುಲದಲ್ಲಿ ಸಿನಿಮಾ ಶುರು ಮಾಡಿದ್ದೇವು. ನಿರ್ಮಾಪಕರು ಇಲ್ಲಿಯೇ ಕುಂಬಳಕಾಯಿ ಒಡೆಯಬೇಕು ಎಂಬ ಆಸೆ ವ್ಯಕ್ತಪಡಿಸಿದ್ದರು. ಅದಕ್ಕಾಗಿ ಇಲ್ಲಿಯೇ ಕುಂಬಳಕಾಯಿ ಒಡೆದಿದ್ದೇವೆ. 49 ದಿನ ಶೂಟಿಂಗ್ ನಡೆಸಲಾಗಿದೆ. ವಾರಣಾಸಿ, ಬೆಂಗಳೂರಿನಲ್ಲಿ ನಡೆಸಲಾಗಿದೆ ಎಂದರು.

`S/o ಮುತ್ತಣ್ಣ ಸಿನಿಮಾವನ್ನು ಶ್ರೀಕಾಂತ್ ಹುಣ್ಸೂರ್ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಮೂಲಕ ಶ್ರೀಕಾಂತ್, ಈ ಸಿನಿಮಾದ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ. ಪ್ರಣಂ ದೇವರಾಜ್ ನಾಯಕನಾಗಿ ನಟಿಸಿದ್ದು, ಖುಷಿ ರವಿ ನಾಯಕಿಯಾಗಿ ಸಾಥ್ ಕೊಟ್ಟಿದ್ದಾರೆ. ಇನ್ನು ಸಿನಿಮಾದಲ್ಲಿ ಹಲವು ಹಿರಿಯ ನಟರು ನಟಿಸುತ್ತಿದ್ದಾರೆ. ರಂಗಾಯಣ ರಘು, ಸುಚೇಂದ್ರ ಪ್ರಸಾದ್, ಗಿರಿ ಶಿವಣ್ಣ, ತಬಲ ನಾಣಿ, ಶ್ರೀನಿವಾಸ್ ಪ್ರಭು, ಸುಧಾ ಬೆಳವಾಡಿ, ಅರುಣ್ ಚಕ್ರವರ್ತಿ ಸಿನಿಮಾದ ಕೆಲವು ಪ್ರಮುಖ ಪಾತ್ರಗಳಗೆ ಬಣ್ಣ ಹಚ್ಚುತ್ತಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು