LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಬಂತು ಬಂತು `ಕೋರ' ಚಿತ್ರದ ಟ್ರೇಲರ್

ರತ್ನಮ್ಮ ಮೂವೀಸ್ ಲಾಂಛನದಲ್ಲಿ ಪಿ.ಮೂರ್ತಿ ನಿರ್ಮಿಸಿರುವ, ಒರಟ ಶ್ರೀ ನಿರ್ದೇಶನದ ಹಾಗೂ ರಿಯಾಲಿಟಿ ಶೋ ಮೂಲಕ ನಾಡಿನ ಜನರ ಗಮನ ಸೆಳೆದಿದ್ದ ಸುನಾಮಿ ಕಿಟ್ಟಿ ನಾಯಕನಾಗಿ ನಟಿಸಿರುವ "ಕೋರ" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಫೆಬ್ರವರಿ 7 ರಂದು ಪ್ಯಾನ್ ಇಂಡಿಯಾ ಚಿತ್ರವಾಗಿ ತೆರೆ ಕಾಣುತ್ತಿರುವ ಈ ಚಿತ್ರದ ಕನ್ನಡ ಟ್ರೇಲರ್ ಅನ್ನು ಮಹರ್ಷಿ ಆನಂದ ಗುರೂಜಿ ಹಾಗೂ ಪಾಲನಹಳ್ಳಿ ಗುರೂಜಿ ಅವರು ಬಿಡುಗಡೆ ಮಾಡಿದರು.

ತಮಿಳು ಟ್ರೇಲರ್, ನಿರ್ದೇಶಕರಾದ ಆರ್ ಚಂದ್ರು ಹಾಗೂ ಬಹದ್ದೂರ್ ಚೇತನ್ ಕುಮಾರ್ ಅವರಿಂದ ಅನಾವರಣವಾಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು, ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘ ಅಧ್ಯಕ್ಷ ಉಮೇಶ್ ಬಣಕಾರ್, ನಟ ಕಾಕ್ರೋಜ್ ಸುಧೀ, ಒರಟ ಪ್ರಶಾಂತ್, ನಿರ್ಮಾಪಕ ಸಂಜಯ್ ಗೌಡ, ತುಕಾಲಿ ಸಂತೋಷ್ ಸೇರಿದಂತೆ ಸಾಕಷ್ಟು ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ಕೊರಗಜ್ಜನ ಆಶೀರ್ವಾದದಿಂದ ಆರಂಭವಾದ ಚಿತ್ರ "ಕೋರ" ಎಂದು ಮಾತನಾಡಿದ ನಿರ್ಮಾಪಕ ಪಿ.ಮೂರ್ತಿ, ಇದೊಂದು ನಮ್ಮ ನೆಲದ ಕಥೆ. ಆದಿವಾಸಿ ಬುಡಕಟ್ಟು ಜನಾಂಗ ಹಾಗೂ ರಾಕ್ಷಸನೊಬ್ಬನ ಕುರಿತಾದ ಕಥೆಯೂ ಹೌದು. ಹೆಚ್ಚಿನ ಭಾಗದ ಚಿತ್ರೀಕರಣ ಕಾಡಿನಲ್ಲೇ ನಡೆದಿದೆ. ಸಕಲೇಶಪುರ, ಶೃಂಗೇರಿ, ಉಡುಪಿ, ಮಂಗಳೂರು ಮುಂತಾದ ಕಡೆ ಚಿತ್ರೀಕರಣವಾಗಿದೆ. ನಿರ್ದೇಶಕ ಒರಟ ಶ್ರೀ ಒಂದೊಳ್ಳೆ ಕಥೆ ಮಾಡಿದ್ದಾರೆ.

ಸುನಾಮಿ ಕಿಟ್ಟಿ ಚೆನ್ನಾಗಿ ನಟಿಸಿದ್ದಾರೆ. ನಾನು ಕೂಡ ಕಠೋರ ಎಂಬ ಪಾತ್ರದಲ್ಲಿ ಅಭಿನಯಿಸಿದ್ದೇನೆ. ಎಲ್ಲಾ ಕಲಾವಿದರ ಹಾಗೂ ತಂತ್ರಜ್ಞರ ಸಹಕಾರದಿಂದ ಉತ್ತಮವಾಗಿ ಮೂಡಿಬಂದಿರುವ ಈ ಚಿತ್ರ ಫೆಬ್ರವರಿ 7 ರಂದು ಕನ್ನಡ, ತಮಿಳು ಹಾಗೂ ತೆಲುಗಿನಲ್ಲಿ ಬಿಡುಗಡೆ ಯಾಗಲಿದೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ  ಪ್ರೋತ್ಸಾಹವಿರಲಿ ಎಂದರು. ನನ್ನನ್ನು ನಾಯಕನನ್ನಾಗಿ ಮಾಡಿದ ಪಿ.ಮೂರ್ತಿ ಅವರಿಗೆ ಹಾಗೂ ನನಗೆ ಅಭಿನಯ ಹೇಳಿಕೊಟ್ಟು ಚಿತ್ರದಲ್ಲಿ ನಟಿಸಲು ಸಿದ್ದತೆ ಮಾಡಿಸಿದ ನಿರ್ದೇಶಕರಾಗಿ ಶ್ರೀ ಅವರಿಗೆ ಧನ್ಯವಾದ. ನಮ್ಮ ತಂಡದ ಶ್ರಮದಿಂದ "ಕೋರ" ಒಂದೊಳ್ಳೆ ಚಿತ್ರವಾಗಿ ನಿಮ್ಮ ಮುಂದೆ ಬರುತ್ತಿದೆ ನೋಡಿ ಹಾರೈಸಿ ಎಂದು ನಾಯಕ ಸುನಾಮಿ ಕಿಟ್ಟಿ ಹೇಳಿದರು.

ಸಹ ನಿರ್ಮಾಪಕ ಚೆಲುವರಾಜು, ನಾಯಕಿ ಚರಿಷ್ಮಾ, ನಟರಾದ ಎಂ.ಕೆ.ಮಠ, ಮುನಿ, ನೀನಾಸಂ ಅಶ್ವಥ್, ಯತಿ ರಾಜ್, ನಟಿ ಸೌಜನ್ಯ, ಸಂಗೀತ ನಿರ್ದೇಶಕ ಹೇಮಂತ್ ಕುಮಾರ್, ಛಾಯಾಗ್ರಾಹಕ ಸೆಲ್ವಂ, ಸಾಹಿತಿ ರೇವಣ್ಣ ನಾಯಕ್, ಸಂಕಲನಕಾರ ಕೆ.ಗಿರೀಶ್ ಕುಮಾರ್ ಹಾಗೂ ತಮಿಳು ವಿತರಕರಾದ ಶಾನ್ ಹಾಗೂ ತೆಲುಗು ವಿತರಕ ಬಾಲಾಜಿ "ಕೋರ" ಚಿತ್ರದ ಕುರಿತು ಮಾತನಾಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು