LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಬನಶಂಕರಿಯಲ್ಲಿ ಪ್ರತ್ಯಕ್ಷವಾದ ಚಿರತೆ :ಆತಂಕದಲ್ಲಿ ಸ್ಥಳೀಯರು

ಬೆಂಗಳೂರು: ಕಾಡಂಚಿನ ಗ್ರಾಮಗಳಲ್ಲಿ ಚಿರತೆಗಳ ಹಾವಳಿ ಸಾಮಾನ್ಯ. ಆದರೆ, ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಚಿರತೆಗಳ ಓಡಾಟ ಕಂಡು ಬಂದಿದ್ದು, ಈ ಬೆಳವಣಿಗೆ ಜನರಲ್ಲಿ ಆತಂಕ ಸೃಷ್ಟಿಸಿದೆ.

ಬೆಂಗಳೂರಿನ ತುರಹಳ್ಳಿ ಫಾರೆಸ್ಟ್ ಪಕ್ಕದ ಬನಶಂಕರಿ 6ನೇ ಹಂತದ ಫಸ್ಟ್‌ ಬ್ಲಾಕ್‌ನಲ್ಲಿ ತಾಯಿ ಮತ್ತು ಮರಿ ಚಿರತೆ ಪ್ರತ್ಯಕ್ಷವಾಗಿದೆ. ಈ ಚಿರತೆಗಳು 3 ತಿಂಗಳಲ್ಲಿ 10ಕ್ಕೂ ಹೆಚ್ಚು ನಾಯಿ, ಮೇಕೆ, ಕುರಿಯನ್ನು ಕೊಂದಿದ್ದು, ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ.

ಬನಶಂಕರಿಯ ನಿವಾಸಿ ಪ್ರಕಾಶ್ ಆರ್‌ಎಂ ಎಂಬುವವರು ಮಾತನಾಡಿ, ನೆರೆಮನೆಯವರು ಚಿರತೆ ಓಡಾಡುತ್ತಿರುವುದನ್ನು ನೋಡಿದ್ದಾರೆ. ಅವರು ಹೇಳಿದಾಗ ಮೊದಲಿಗೆ ನಾನು ನಂಬಲಿಲ್ಲ. ಆದರೆ ಅಪಾರ್ಟ್‌ಮೆಂಟ್‌ನ ಸಿಸಿಟಿವಿ ದೃಶ್ಯಾವಳಿಗಳನ್ನು ನೋಡಿದ ನಂತರ, ನಿಜವೆಂಬುದು ತಿಳಿಯಿತು. ಇದೀಗ ಸೂರ್ಯ ಮುಳುಗುತ್ತಿದ್ದಂತೆ ಹೊರಗೆ ಹೋಗಲು ಭಯ ಶುರುವಾಗಿದೆ ಎಂದು ಹೇಳಿದ್ದಾರೆ.

ಬನಶಂಕರಿ 6ನೇ ಹಂತದ ನಿವಾಸಿ ಕಲ್ಯಾಣ ಸಂಘದ ಅಧ್ಯಕ್ಷ ಟಿ.ಎಸ್. ಮಹೇಶ ಅವರು ಮಾತನಾಡಿ, ಬನಶಂಕರಿ 6ನೇ ಹಂತ ತುರಹಳ್ಳಿ ಅರಣ್ಯದ ಪಕ್ಕದಲ್ಲಿರುವುದರಿಂದ ಚಿರತೆಗಳು ಆಗಾಗ್ಗೆ ವಸತಿ ಪ್ರದೇಶಕ್ಕೆ ಬಂದು, ನಂತರ ಕಾಡಿಗೆ ಹಿಂತಿರುಗುತ್ತವೆ. ಚಿರತೆ ಕಾಣಿಸಿಕೊಂಡ ಬಗ್ಗೆ ನಾವು ಕಗ್ಗಲಿಪುರ ಅರಣ್ಯ ವಿಭಾಗಕ್ಕೆ ದೂರು ನೀಡಿದ್ದೇವೆಂದು ತಿಳಿಸಿದರು.

ಅರಣ್ಯ ಸಹಾಯಕ ಸಂರಕ್ಷಣಾಧಿಕಾರಿ ರವೀಂದ್ರ ಅವರು ಮಾತನಾಡಿ, ಚಿರತೆ ತನ್ನ ಮರಿಗಳೊಂದಿಗೆ ಕಾಣಿಸಿಕೊಂಡಿರುವ ಯಾವುದೇ ಫೋಟೋ ಅಥವಾ ಸಿಸಿಟಿವಿ ದೃಶ್ಯಾವಳಿಗಳು ಲಭ್ಯವಾಗಿಲ್ಲ. ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಅಪಾರ್ಟ್ಮೆಂಟ್ ಕಿಟಿಯಿಂದ ನೋಡಿದಾಗ ತುರಹಳ್ಳಿ ಅರಣ್ಯದ ಬಂಡೆಯ ಮೇಲೆ ಚಿರತೆ ಕುಳಿತಿರುವುದು ಕಂಡು ಬಂದಿತ್ತು. 15 ದಿನಗಳ ಹಿಂದೆ ಈ ಚಿರತೆ ಕಂಡು ಬಂದಿತ್ತು. ಅದು ಗಂಡು ಚಿರತೆಯಾಗಿತ್ತು ಎಂದು ಹೇಳಿದ್ದಾರೆ.

ಚಿರತೆ ತನ್ನ ಮರಿಗಳೊಂದಿಗೆ ಓಡಾಡತ್ತಿರುವಾಗ ನಾಗರೀಕರು ಭಯಭೀತರಾಗಬಾರದು ಹಾಗೂ ಅವುಗಳಿಗೆ ತೊಂದರೆ ನೀಡಬಾರದು, ಅವು ತಾವಾಗಿಯೇ ಅರಣ್ಯಕ್ಕೆ ಮರಳುತ್ತವೆ ಎಂದು ಮತ್ತೊಬ್ಬ ಅರಣ್ಯಾಧಿಕಾರಿ ಹೇಳಿದ್ದಾರೆ.

ಚಿರತೆ ಮರಿಗಳು ಕಂಡು ಬಂದಾಗ ಜನರು ಅವುಗಳನ್ನು ಎತ್ತಿಕೊಳ್ಳುವುದು, ಮುಟ್ಟುವುದು ಮಾಡಬಾರದು ಎಂದು ಸ್ಥಳೀಯರಲ್ಲಿ ಮನವಿ ಮಾಡಿಕೊಳ್ಳುತ್ತಿದ್ದೇವೆ, ಚಿರತೆಗಳ ಹೆಜ್ಜೆ ಗುರುತುಗಳು ಹಾಗೂ ಇತರೆ ಚಿಹ್ನೆಗಳನ್ನು ಹಿಡಿದು ಅವುಗಳ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದೇವೆಂದು ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು