LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬರಪೀಡಿತ ತಾಲ್ಲೂಕು ಪಟ್ಟಿಯಿಂದ ಜಗಳೂರು ತಾಲ್ಲೂಕು ಕೈಬಿಟ್ಟ ಹಿನ್ನೆಲೆ

ಜಗಳೂರು ಬಂದ್ ಬಿಜೆಪಿ ನಾಯಕರ ಕರೆ 


ದಾವಣಗೆರೆ: ಬರ ಪೀಡಿತ ತಾಲ್ಲೂಕು ಪಟ್ಟಿಯಿಂದ ಜಗಳೂರು ತಾಲ್ಲೂಕು ಕೈ ಬಿಟ್ಟ ಹಿನ್ನೆಲೆ ಇಂದು ಜಗಳೂರು ಬಂದ್‌ಗೆ ಬಿಜೆಪಿ ನಾಯಕರು ಕರೆ ನೀಡಿದ್ದಾರೆ.
ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ನಿಟ್ಟಿನಲ್ಲಿ ಜಗಳೂರು ಬಂದ್‌ಗೆ ಕರೆ ನೀಡಲಾಗಿದೆ. ಬೆಳಗ್ಗೆ 6 ಗಂಟೆಯಿAದ ಸಂಜೆ 6 ಗಂಟೆವರೆಗೂ ಬಂದ್‌ಗೆ ಕರೆ ನೀಡಲಾಗಿದೆ. ಬಿಜೆಪಿ ಮಾಜಿ ಶಾಸಕರುಗಳಾದ ಎಸ್ ವಿ ರಾಮಚಂದ್ರಪ್ಪ, ಹೆಚ್‌ಪಿ ರಾಜೇಶ್ ನೇತೃತ್ವದಲ್ಲಿ ಬಂದ್ ನಡೆಯುತ್ತಿದೆ. ಜಗಳೂರು ಬಂದ್‌ಗೆ ರೈತ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು ಸಾಥ್ ನೀಡಿವೆ. ಎರಡೂ ಪಟ್ಟಿಗಳಲ್ಲಿ ಜಗಳೂರು ತಾಲೂಕನ್ನು ಸೇರಿಸದೆ ನಿರ್ಲಕ್ಷ್ಯ  ವಹಿಸಿದ್ದಾರೆ. ಅಧಿಕಾರಿಗಳ, ಕ್ಷೇತ್ರದ ಕಾಂಗ್ರೆಸ್ ಶಾಸಕರು ಹಾಗೂ ಉಸ್ತುವಾರಿ ಸಚಿವರ ನಡುವೆ ನಿರ್ಲಕ್ಷ್ಯ ವೇ ಕಾರಣ ಎಂದು ಆರೋಪಿಸಲಾಗಿದೆ.
ಇನ್ನು ಬಂದ್ ಹಿನ್ನೆಲೆ ಜಗಳೂರು ಪಟ್ಟಣದ ಎಲ್ಲಾ ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ. ವ್ಯಾಪಾರಸ್ಥರು ಸ್ವಯಂಪ್ರೇರಿತವಾಗಿ ಅಂಗಡಿಗಳನ್ನು ಬಂದ್ ಮಾಡಿದ್ದು, ಕೇವಲ ಎಮರ್ಜೆನ್ಸಿ ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ರಸ್ತೆಗಳಿಗೆ ಮರದ ದಿಮ್ಮಿಗಳನ್ನು ಇಟ್ಟು ಪ್ರತಿಭಟನೆ ನಡೆಸಿ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ ರಸ್ತೆ ಮಧ್ಯೆ ಟೈರ್ ಸುಟ್ಟು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಪೊಲೀಸರು ಬೆಂಕಿಯನ್ನು ನಂದಿಸಿದ್ದಾರೆ. ಈ ವೇಳೆ ಪೊಲೀಸರ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ.
ಪ್ರತಿಭಟನೆ ತೀವ್ರ ಸ್ವರೂಪ ಪಡೆದ ಹಿನ್ನೆಲೆ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆಯಲು 
ಪೋಲೀಸರು ಮುಂದಾಗಿದ್ದಾರೆ. ಈ ವೇಳೆ ನೂಕಾಟ ತಳ್ಳಾಟ ನಡೆದಿದ್ದು, ಪ್ರತಿಭಟನಾಕಾರ ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST