LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Kolar

ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲ-ಜೆಡಿಎಸ್


ಕೋಲಾರ: ಕೋಲಾರ ಜಿಲ್ಲೆಯಲ್ಲಿ ತಲೆದೋರಿರುವ ಭೀಕರ ಬರ ಪರಿಸ್ಥಿತಿಯನ್ನು ರಾಜ್ಯ ಸರ್ಕಾರ ನಿರ್ಲಕ್ಷಿಸುತ್ತಿರುವುದನ್ನು ಖಂಡಿಸಿ, ಜೆಡಿಎಸ್ ವತಿಯಿಂದ ನಗರದ ಮೆಕ್ಕೆ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು. ಜೆಡಿಎಸ್ ಮುಖಂಡ ಸಿ.ಎಂ.ಆರ್. ಶ್ರೀನಾಥ್ ಮತ್ತು ಸಂಸದ ಎಂ. ಮಲ್ಲೇಶ್ ಬಾಬು ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ, ರಾಜ್ಯ ಸರ್ಕಾರ ಕೂಡಲೇ ಬರ ಪರಿಹಾರಕ್ಕೆ ವಿಶೇಷÀ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಲಾಯಿತು.
ಪ್ರತಿಭಟನೆಯಲ್ಲಿ ಮಾತನಾಡಿದ ಸಂಸದ ಎಂ. ಮಲ್ಲೇಶ್ ಬಾಬು, ಬರಪೀಡಿತ ಜಿಲ್ಲೆ ಎಂದೇ ಕರೆಯಲ್ಪಡುವ ಕೋಲಾರದಲ್ಲಿ ಈ ಬಾರಿ ತೀವ್ರ ನೀರಿನ ಕೊರತೆ ಮತ್ತು ಜಾನುವಾರುಗಳಿಗೆ ಮೇವಿನ ಸಂಕಷ್ಟ ಎದುರಾಗಿದೆ. ರಾಜ್ಯ ಸರ್ಕಾರ ಬರ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.  ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಕಾಲದಲ್ಲಿ ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲಾಗಿತ್ತು. ಕೇಂದ್ರದ ನೆರವಿಗೆ ಕಾಯದೆ ಕುಮಾರಸ್ವಾಮಿ ರೈತರ ಇಪ್ಪತ್ತು ಸಾವಿರ ಕೋಟಿ ರೂಪಾಯಿ ಸಾಲ ಮನ್ನ ಮಾಡಿದ್ದರು. ಪ್ರಸಕ್ತ ರಾಜ್ಯ ಸರ್ಕಾರ ಕೇಂದ್ರ ಕಡೆ ಬೊಟ್ಟು ಮಾಡಿ ತೋರಿಸುತ್ತಿದೆ. ಕೇಂದ್ರಕ್ಕೆ ಸರಿಯಾದ ಮಾಹಿತಿ ರಾಜ್ಯ ಸರ್ಕಾರ ಸಲ್ಲಿಸಿಲ್ಲ. ಬರಪರಿಸ್ಥಿತಿಯಿಂದಾಗಿ ಸಾಲಮನ್ನ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ. ಆದರೆ ಈಗಿನ ಸರ್ಕಾರ ರೈತರಿಗೆ ನಯಾಪೈಸೆ ಪರಿಹಾರ ನೀಡಿಲ್ಲ. ಇನ್ನೊಂದು ವಾರದೊಳಗೆ ಸೂಕ್ತ ಪರಿಹಾರ ಬಿಡುಗಡೆ ಮಾಡದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.ಜೆಡಿಎಸ್ ಮುಖಂಡ ಸಿ.ಎಂ.ಆರ್. ಶ್ರೀನಾಥ್ ಮಾತನಾಡಿ, ಜಿಲ್ಲೆಯಲ್ಲಿ ವಾಡಿಕೆ ಮಳೆಗಿಂತ ಶೇ.80ರಷ್ಟು ಮಳೆ ಕೊರತೆಯಾಗಿದೆ. ಹತ್ತು ವರ್ಷಗಳ ಬಳಿಕ ಭೀಕರ ಬರಗಾಲ ಎದುರಾಗಿದೆ. ಅಂತರ್ಜಲ ಮಟ್ಟ ಕುಸಿದಿದ್ದು, ರೈತರ ಪಂಪ್‌ಸೆಟ್‌ಗಳಿಗೆ ನೀಡುತ್ತಿದ್ದ ವಿದ್ಯುತ್ ಪೂರೈಕೆಯನ್ನು 7 ಗಂಟೆಯಿAದ ಕೇವಲ 2 ಗಂಟೆಗೆ ಸೀಮಿತಗೊಳಿಸಿರುವುದರಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು. ರೈತರ ರಕ್ಷಣೆಗಾಗಿ ಕನಿಷ್ಠ 600 ಕೋಟಿ ರೂಪಾಯಿ ಪರಿಹಾರ ನೀಡಬೇಕು. ಇಲ್ಲವಾದರೆ ರೈತರು ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು. ಸರ್ಕಾರ ಕೂಡಲೇ ಸ್ಪಂದಿಸದಿದ್ದರೆ ಬೆಂಗಳೂರಿಗೆ ತೆರಳಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ 'ಬೆಂಗಳೂರು ಚಲೋ' ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ತಹಶೀಲ್ದಾರ್ ಶ್ರೀನಿವಾಸ್ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷ ಬನಕನಹಳ್ಳಿ ನಟರಾಜ್, ವಕ್ಕಲೇರಿ ರಾಮು, ವಡಗೂರು ರಾಮು, ಲೋಕೇಶ್ ಮರಿಯಪ್ಪ, ಬಾಬು ಮೌನಿ ಸೇರಿದಂತೆ ನೂರಾರು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST