LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಬಲವಂತವಾಗಿ ಸಾಲ ವಸೂಲಿ: ಯೂನಿಯನ್ ಬ್ಯಾಂಕ್ ವಿರುದ್ಧ ರೈತರ ಪ್ರತಿಭಟನೆ

ದೊಡ್ಡಬಳ್ಳಾಪುರ: ರೈತರಿಂದ ಬಲವಂತವಾಗಿ ಸಾಲ ವಸೂಲಿ ಹಾಗೂ ಕೃಷಿ ಜಮೀನು ಹರಾಜು ಹಾಕುವ ನೋಟಿಸ್ ನೀಡಿರುವುದನ್ನು ಖಂಡಿಸಿ ನಗರದ ಯೂನಿಯನ್ (ಕಾರ್ಪೊರೇಷನ್) ಬ್ಯಾಂಕ್ ಎದುರು ದೊಡ್ಡಬಳ್ಳಾಪುರ ತಾಲೂಕು ಹಸಿರು ಮನೆ ಬೆಳೆಗಾರರ ಕ್ಷೇಮಾಭಿವೃದ್ಧಿ ಸಂಘ (ರಿ) ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಹರೀಶ್ ಗೌಡ ಮಾತನಾಡಿ, ರಾಜ್ಯದಲ್ಲಿ ಭೀಕರ ಬರದಿಂದಾಗಿ ಸರಕಾರ ಬರಗಾಲ ಎಂದು ಘೋಷಣೆ ಮಾಡಿ ರೈತರ ಸಾಲವನ್ನು ಯಾವುದೇ ಬ್ಯಾಂಕ್‍ಗಳು ಬಲವಂತವಾಗಿ ಸದ್ಯದ ಮಟ್ಟಿಗೆ ವಸೂಲಾತಿ ಮಾಡಬಾರದು ಎಂದು ಆದೇಶಿಸಿದೆ. ಆದಾಗ್ಯೂ, ಬ್ಯಾಂಕ್‍ಗಳು ಬಲವಂತವಾಗಿ ಸಾಲ ವಸೂಲಾತಿ ನೆಪದಲ್ಲಿ ರೈತರನ್ನು ಅವಮಾನಿಸುತ್ತಿದೆ.

ಕೃಷಿ ಜಮೀನುಗಳನ್ನು ಹರಾಜು ಮಾಡುತ್ತೇವೆಂದು ನೋಟಿಸ್‍ಗಳನ್ನು ನೀಡುತ್ತಿದ್ದು, ಇದರಿಂದ ಮನನೊಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುವಂತೆ ಪ್ರೇರೇಪಿಸುತ್ತಿವೆ. ಆದ್ದರಿಂದ ಈ ಕೂಡಲೇ ಇದನ್ನು ಕೈ ಬಿಡಬೇಕೆಂದು ಒತ್ತಾಯಿಸಿದರು.ಈ ಪ್ರತಿಭಟನೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಹಸಿರು ಮನೆ ಬೆಳೆಗಾರರ ಕ್ಷೇಮಾಭಿವೃದ್ಧಿ ಸಂಘ (ರಿ)ದ ಅಧ್ಯಕ್ಷ ಚನ್ನರಾಮಯ್ಯ, ಪ್ರಧಾನ ಕಾರ್ಯದರ್ಶಿ ಶ್ಯಾಮಸುಂದರ್, ಮುಖಂಡರಾದ ಮುನಿಕೃಷ್ಣಪ್ಪ, ಶಿವಾನಂದರೆಡ್ಡಿ, ಸತೀಶ, ಕೃಷ್ಣಾರೆಡ್ಡಿ, ಹಣಬೆ ಕೀರ್ತಿ, ರವೀಂದ್ರ, ಪುರುಷೋತ್ತಮ, ತೂಬಗೆರೆ ವಾಸು ಮತ್ತಿತರರಿದ್ದರು.

ರೈತರ ಬೇಡಿಕೆಗಳು: 1. ಕರೋನಾ ರೋಗ, ನೋಟು ಅಮಾನ್ಯೀಕರಣ ಮತ್ತು ಬರಗಾಲದಿಂದ ರೈತರ ಬೆಳೆಗಳಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ, ಹಾಗಾಗಿ ರೈತರ ಕೃಷಿ ಸಾಲ ವಸೂಲಾತಿಯನ್ನು ಸದ್ಯಕ್ಕೆ ನಿಲ್ಲಿಸಬೇಕು. 2. ರೈತರ ಕೃಷಿ ಭೂಮಿಯನ್ನು ಡಿಆರ್‍ಟಿ ನ್ಯಾಯಾಲಯಕ್ಕೆ ಹಾಕುವುದನ್ನು ಬ್ಯಾಂಕ್‍ಗಳು ನಿಲ್ಲಿಸಬೇಕು. 3. ರೈತರಿಗೆ ಒಟಿಎಸ್ ಮೂಲಕ ಮರುಪಾವತಿ ಮಾಡಲು ಅವಕಾಶ ನೀಡಬೇಕು. 4. ಸಾಲ ಪಾವತಿಸಿದ ರೈತರಿಗೆ ಮತ್ತೆ ಸಾಲ ನೀಡಬೇಕು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು