LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಬಸವಣ್ಣ ಪಲಾಯನವಾದಿ ಎಂಬರ್ಥದಲ್ಲಿ ಹೇಳಿಕೆ ನೀಡಿರುವ ಯತ್ನಾಳ್ ವಿರುದ್ಧ ಆಕ್ರೋಶ ವ್ಯಕ್ತ

ಬೆಂಗಳೂರು: ಕ್ರಾಂತಿಕಾರಿ ಬಸವಣ್ಣ ಪಲಾಯನವಾದಿ ಎಂಬರ್ಥದಲ್ಲಿ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಯತ್ನಾಳ್ ಹೇಳಿಕೆಗೆ ಲಿಂಗಾಯತ ಮಠದ ಸ್ವಾಮೀಜಿಗಳು ಸೇರಿದಂತೆ ವಿವಿಧ ರಾಜಕಾರಣಿಗಳು ಕಿಡಿಕಾರಿದ್ದಾರೆ.

ಯತ್ನಾಳ್ ಹೇಳಿಕೆ ಖಂಡಿಸಿ ಟ್ವೀಟ್ ಮಾಡಿರುವ ಸಚಿವ ಪ್ರಿಯಾಂಕ್ ಖರ್ಗೆ , ಜಗಜ್ಯೋತಿ ಬಸವಣ್ಣನವರ ಬಗ್ಗೆ ಅತ್ಯಂತ ಅವಮಾನಕರವಾಗಿ, ಅತ್ಯಂತ ಹಗುರವಾಗಿ ಮಾತನಾಡಿರುವ ಬಿಜೆಪಿ ಶಾಸಕ ಯತ್ನಾಳ್ ಅವರು ಕ್ಷಮಿಸಲಾರದ ತಪ್ಪೆಸಗಿದ್ದಾರೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ನಾಯಕರು, ಅಲ್ಪಸಂಖ್ಯಾತರ ಬಗ್ಗೆ ಮನಸೋ ಇಚ್ಛೆ ಮಾತನಾಡುತ್ತಿದ್ದ ಬಿಜೆಪಿಯವರ ನಾಲಿಗೆಗಳು ಈಗ ಸಮಾಜ ಸುಧಾರಣೆಗೆ ಜೀವ ಸವೆಸಿದ ಮಹನೀಯರ ಬುಡಕ್ಕೂ ಚಾಚುವಷ್ಟು ಉದ್ದವಾಗಿವೆ. ಬಸವಣ್ಣನವರ ಹಾಗೆ ಹೊಳೆ ಹಾರಬೇಕು“ ಎನ್ನುವ ಮೂಲಕ ಬಸವಣ್ಣನವರನ್ನು ಪಲಾಯನವಾದಿ ಎಂಬರ್ಥದಲ್ಲಿ ಮಾತನಾಡಿದ ಯತ್ನಾಳ್ ಅವರನ್ನು ಈ ನಾಡಿನ ಪ್ರಜ್ಞಾವಂತ ಬಸವಾನುಯಾಯಿಗಳು ಗಟ್ಟಿ ಧ್ವನಿಯಲ್ಲಿ ಖಂಡಿಸಬೇಕಿದೆ. ತನ್ನ ಬಣ್ಣಿಸಬೇಡ, ಇದಿರು ಹಳಿಯಬೇಡ ಎಂದಿದ್ದ ಬಸವಣ್ಣನವರ ಹೆಸರನ್ನು ಯತ್ನಾಳ್ ಅವರು ತಮ್ಮ ದ್ವೇಷ ಭಾಷಣಕ್ಕೆ ಬಳಸಿದ್ದು ಮತ್ತೊಂದು ಘೋರ ಅಪರಾಧ ಎಂದಿದ್ದಾರೆ.

ಬಸವಣ್ಣನವರು ಹೊಳೆ ಹಾರಿಲ್ಲ, ಈ ಸಮಾಜಕ್ಕೆ ಜ್ಞಾನದ ಹೊಳೆ ಹರಿಸಿದ್ದಾರೆ, ಯತ್ನಾಳ್ ಅವರೇ, ನಿಮ್ಮ ಪ್ರಕಾರ ಬಸವಣ್ಣನವರು ಹೊಳೆ ಹಾರಿದ್ದಾರೆ ಎನ್ನುವುದಾದರೆ ಅವರನ್ನು ಹೊಳೆಗೆ ಹಾರುವಂತೆ ಮಾಡಿದವರು ಯಾರು? ಇಂದು ಯತ್ನಾಳ್ ಅವರು ಪ್ರತಿಪಾದಿಸುತ್ತಿರುವ ಸಿದ್ಧಾಂತವೇ ಅಂದು ಬಸವಾದಿ ಶರಣರನ್ನು ಹಿಂಸಿಸಿದ್ದಲ್ಲವೇ? ಕಲ್ಯಾಣದ ಶರಣರ ಹತ್ಯೆ ನಡೆಸಿದವರು ಯಾರು? ಶರಣರು “ಮರಣವೇ ಮಹಾನವಮಿ“ ಎಂದಿದ್ದೇಕೆ?

ವಚನ ಬಂಡಾರಕ್ಕೆ ಬೆಂಕಿ ಇಟ್ಟವರು ಯಾರು? ಅನುಭವ ಮಂಟಪಕ್ಕೆ ದಾಳಿ ಮಾಡಿದವರು ಯಾರು? ಮಡಿವಾಳ ಮಾಚಿದೇವರು ಕತ್ತಿ ಹಿಡಿದಿದ್ದೇಕೆ? ಯಾರಿಂದ ರಕ್ಷಣೆ ಪಡೆಯಲು? ಬಿಜೆಪಿಯವರಿಗೆ ಈ ವಿಚಾರಗಳ ಬಗ್ಗೆ ಚರ್ಚಿಸುವ ಶಕ್ತಿ ಇದೆಯೇ? ಎಂದು ಪ್ರಶ್ನಿಸಿದ್ದಾರೆ.

ಬಸವಣ್ಣನವರ ಅನುಭವ ಮಂಟಪದ ಪರಿಕಲ್ಪನೆಯಲ್ಲೇ ಇಂದು ನಾವು ಪ್ರಜಾಪ್ರಭುತ್ವವನ್ನು ಅಳವಡಿಸಿಕೊಂಡಿದ್ದೇವೆ. ಅವರ ತತ್ವಗಳ ಪ್ರೇರಣೆಯಲ್ಲೇ ನಮ್ಮ ಸಂವಿಧಾನವಿದೆ. ಧಮನಿತರಿಗೆ ಆತ್ಮಶಕ್ತಿ ನೀಡಿದ, ಶೋಷಿತರಿಗೆ ಘನತೆಯ ಬದುಕು ತಂದುಕೊಟ್ಟ, ಕಲ್ಯಾಣ ಕ್ರಾಂತಿಯ ಮೂಲಕ ಮೌಢ್ಯದಲ್ಲಿ ಜಡಗಟ್ಟಿದ್ದ ಸಮಾಜಕ್ಕೆ ಹೊಸ ಮಾರ್ಗ ತೋರಿದ ಬಸವಣ್ಣನವರು ಕೇವಲ “ಹೊಳೆ ಹಾರಿದವರಾಗಿ” ಕಂಡಿದ್ದು ಬಿಜೆಪಿಗರ ಅಜ್ಞಾನದ ದ್ಯೋತಕವಾಗಿದೆ.

ಬಸವಣ್ಣರನ್ನು ಅನುಸರಿಸುವ ಈ ನಾಡಿನ ಜನ ಬಿಜೆಪಿಗರ ಈ ನಡೆಯನ್ನು ಸಹಿಸಲು ಸಾಧ್ಯವಿಲ್ಲ. ಕೆಲ ದಿನಗಳ ಹಿಂದೆ ನಾಡಿನ ಜನ ವೇದಿಕೆಯಿಂದ ಕೆಳಗಿಳಿಸಿ ಓಡಿಸಿದ್ದರೂ ಬುದ್ದಿ ಕಲಿಯದ ಯತ್ನಾಳ್ ಅವರ ನಾಲಿಗೆಗೆ ಕಡಿವಾಣ ಹಾಕುವ ಶಕ್ತಿ ಕರ್ನಾಟಕದ ಜನರಿಗಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು