LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಬಸವ ಕಲ್ಯಾಣ ಮಠದಲ್ಲಿ ಪೀಠಾರೋಹಣ ಮಹೋತ್ಸವ

ವಿಜಯಪುರ ಹೋಬಳಿಯ ಚಂದೇನಹಳ್ಳಿ ಗೇಟ್ ನಲ್ಲಿರುವ ಬಸವ ಕಲ್ಯಾಣ ಮಠದಲ್ಲಿ ಪೀಠಾರೋಹಣ ಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಬಸವ ಕಲ್ಯಾಣಮಠದ ನೂತನವಾಗಿ ನಿರ್ಮಾಣಗೊಂಡಿರುವ ಸಭಾಭವನವನ್ನು ಸಿದ್ಧಗಂಗಾಮಠದ ಅಧ್ಯಕ್ಷ ಸಿದ್ಧಲಿಂಗ ಸ್ವಾಮಿಜೀ ಅವರು ಉದ್ಘಾಟನೆ ಮಾಡಿದರು. ಜಿಲ್ಲಾ ಉಸ್ತುವಾರಿ ಕೆ.ಎಚ್.ಮುನಿಯಪ್ಪ ಅವರು ಭೇಟಿ ನೀಡಿದ್ದರು.

ಗುರುಪೂರ್ಣಿಮೆ ಅಂಗವಾಗಿ ಮಠದ ಸ್ವಾಮೀಜಿಗಳಿಗೆ ಕಾಣಿಕೆಯನ್ನರ್ಪಿಸಿದರು. ಸ್ವಾಮೀಜಿಗಳಿಂದ ಮಠದ ಏಳಿಗೆಗಾಗಿ ಸರ್ಕಾರದಿಂದ ಆಗಬೇಕಾಗಿರುವ ಕಾರ್ಯದ ಕುರಿತು ಮನವಿ ಪತ್ರವನ್ನು ಸ್ವೀಕರಿಸಿದರು.ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಮಾತನಾಡಿ, ಗುರುವಿನ ಮಹತ್ವವನ್ನು ಅರಿತುಕೊಂಡು ನಾವೆಲ್ಲರೂ ಅವರ ಮಾರ್ಗದರ್ಶನದಲ್ಲಿ ಸಾಗಬೇಕು. ಅಜ್ಞಾನದ ಕತ್ತಲಿನಿಂದ ಜ್ಞಾನದ ಬೆಳಕಿಗೆ ನಡೆಸುವ ಗುರುವಾಗುತ್ತಾರೆ. ಡಾ.ಶಿವಕುಮಾರ ಸ್ವಾಮೀಜಿಗಳಿಂದ ಸ್ಥಾಪನೆಯಾಗಿರುವ ಸಿದ್ಧಗಂಗಾಮಠದ ಶಾಖಾ ಮಠದ ಏಳಿಗೆಗಾಗಿ ಎಲ್ಲಾ ರೀತಿಯ ಸಹಕಾರ ಕೊಡಲು ಸಿದ್ಧನಿದ್ದೇನೆ.

ತ್ರಿವಿಧ ದಾಸೋಹಿಗಳಾಗಿ ಶಿವಕುಮಾರಸ್ವಾಮೀಜಿಗಳು ಸ್ಥಾಪನೆ ಮಾಡಿರುವ ಮಠದಲ್ಲಿ ವಿದ್ಯಾಭ್ಯಾಸ ಮಾಡಿರುವವರು ದೇಶ, ವಿದೇಶಗಳಲ್ಲಿ ಇದ್ದಾರೆ. ಅತ್ಯುನ್ನತ ಹುದ್ದೆಗಳಲ್ಲಿದ್ದಾರೆ. ಅಂತಹ ಮಠ ನಮ್ಮ ರಾಜ್ಯದಲ್ಲಿ ಇರುವುದು ನಮ್ಮೆಲ್ಲರ ಹೆಮ್ಮೆಯಾಗಿದೆ. ಶಿವಕುಮಾರಸ್ವಾಮೀಜಿ ಅವರು ಯಾವ ಉದ್ದೇಶದಿಂದ ಬಸವ ಕಲ್ಯಾಣ ಮಠವನ್ನು ಸ್ಥಾಪನೆ ಮಾಡಿದ್ದಾರೋ ಅವರ ಉದ್ದೇಶಗಳನ್ನು ನೆರವೇರಿಸುವಂತಹ ಕಾರ್ಯವನ್ನು ನಾವೆಲ್ಲರೂ ಮಾಡಬೇಕಾಗಿದೆ.

ಅವರ ಹೆಸರು ಅಜರಾಮರವಾಗಿ ಬೆಳೆಯಬೇಕು ಎಂದ ಅವರು. ಮಠದ ಮುಂಭಾಗದಲ್ಲಿ ನಿರ್ಮಿಸಿರುವ ಸಭಾಭವನದ ಆವರಣದಲ್ಲಿ ಎರಡು ಕೊಠಡಿಗಳ ನಿರ್ಮಾಣ ಮಾಡಿಕೊಡಲಾಗುತ್ತದೆ. ಶ್ರಾವಣ ಮಾಸದಲ್ಲಿ ಕೆಲಸ ಆರಂಭಿಸಲಾಗುತ್ತದೆ ಎಂದರು.ಬಸವ ಕಲ್ಯಾಣ ಮಠದ ಅಧ್ಯಕ್ಷ ಮಹದೇವಸ್ವಾಮೀಜಿ ಮಾತನಾಡಿ, ಮಾನ ವನ ಜೀವನದಲ್ಲಿ ಗಳಿಸಿದ್ದೆಲ್ಲವೂ ತನಗೆ ಉಳಿಯುವುದಿಲ್ಲ.

ಪರರಿಗಾಗಿ ಮಾಡಿರುವ ಸತ್ಕಾರ್ಯಗಳೇ ನಮ್ಮ ಆಸ್ತಿಯಾಗುತ್ತದೆ. ಭಗವಂತನ ಪ್ರೇರಣೆಯಿಂದ ಉತ್ತಮ ಕಾರ್ಯಗಳಾಗಬೇಕು. ಮಠದಲ್ಲಿ ಹಲವಾರು ಸಾಮಾಜಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ಮಾಡಿಕೊಂಡು ಬರಲಾಗುತ್ತಿದೆ ಎಂದರು.ಮಠದ ಕಿರಿಯ ಸದಾನಂದ ಸ್ವಾಮೀಜಿ, ಕೆಪಿಸಿಸಿ ಕಾರ್ಯದರ್ಶಿ ವಿ.ಮಂಜುನಾಥ್, ಬಯಾಪ ನಿರ್ದೇಶಕ ವಿ.ರಾಮಚಂದ್ರಪ್ಪ, ಪುರಸಭೆ ಸದಸ್ಯರಾದ ಎಂ.ನಾರಾಯಣಸ್ವಾಮಿ, ಎ.ಆರ್.ಹನೀಪುಲ್ಲಾ, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಗೌಸ್ ಖಾನ್, ಟೌನ್ ಕಾಂಗ್ರೆಸ್ ಅಧ್ಯಕ್ಷ ವಿ.ಎಂ.ನಾಗರಾಜ್, ಮುಖಂಡರಾದ ಜಗಣ್ಣ, ಜೆ.ಎನ್.ಶ್ರೀನಿವಾಸ್, ಪುರ ನಂಜುಂಡಪ್ಪ, ಗ್ಯಾಸ್ ಶ್ರೀನಿವಾಸ್, ರಮೇಶ್, ನರಸಿಂಹಮೂರ್ತಿ, ಮಠದ ಭಕ್ತರು ಇದ್ದರು.ವಿಜಯಪುರ ಹೋಬಳಿ ಚಂದೇನಹಳ್ಳಿ ಗೇಟ್ ನಲ್ಲಿರುವ ಬಸವ ಕಲ್ಯಾಣ ಮಠದಲ್ಲಿ ಆಯೋಜಿಸಿದ್ದ ಗುರುಪೂರ್ಣಿಮೆ ಕಾರ್ಯಕ್ರಮ ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಅವರು ಮಹದೇವಸ್ವಾಮೀಜಿ ಅವರನ್ನು ಸನ್ಮಾನಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು