LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಬಸ್ ದರ ಏರಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ

ಬೆಂಗಳೂರು: ನಾಡಪ್ರಭು ಕೆಂಪೇಗೌಡ ಬಸ್ ನಿಲ್ದಾಣ (ಮೆಜೆಸ್ಟಿಕ್)ದಲ್ಲಿ ಶುಕ್ರವಾರ ಪ್ರತಿಪಕ್ಷ ಬಿಜೆಪಿ ನಾಯಕರ ದಂಡು ಧಾವಿಸಿತು. ಸಾರಿಗೆ ನಿಗಮಗಳ ಬಸ್ ಪ್ರಯಾಣ ಶೇಕಡ 15ರಷ್ಟು ಹೆಚ್ಚಳ ಖಂಡಿಸಿ, ಪುರುಷ ಪ್ರಯಾಣಿಕರಿಗೆ ಗುಲಾಬಿ ಹೂ ನೀಡುವ ಮೂಲಕ ಬಿಜೆಪಿ ನಾಯಕರು ವಿಶಿಷ್ಟವಾಗಿ ಪ್ರತಿಭಟಿಸಿದರು.

ಕಾಂಗ್ರೆಸ್ ಸರ್ಕಾರ ಗುರುವಾರ ಎಲ್ಲಾ ವರ್ಗಗಳ ಸರ್ಕಾರಿ ಬಸ್ ಪ್ರಯಾಣ ದರವನ್ನು ಶೇಕಡಾ 15 ರಷ್ಟು ಹೆಚ್ಚಿಸಲು ನಿರ್ಧರಿಸಿದ್ದು. ಭಾನುವಾರದಿಂದಲೇ ನೂತನ ದರ ಜಾರಿಗೆ ಬರಲಿದೆ. ಇದರಿಂದ ಮಾಸಿಕವಾಗಿ 74.85 ಕೋಟಿ ಮತ್ತು ವಾರ್ಷಿಕ ರೂ 784 ಕೋಟಿ ಆದಾಯ ನಿರೀಕ್ಷಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.

ಮೆಜೆಸ್ಟಿಕ್‌ನಲ್ಲಿರುವ ಕೆಂಪೇಗೌಡ ಬಸ್‌ ನಿಲ್ದಾಣದಲ್ಲಿ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ ನೇತೃತ್ವದಲ್ಲಿ ಧರಣಿ ನಡೆಸಿದರು. ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಗುಲಾಬಿ ಹೂ ಕೊಟ್ಟ ನಾಯಕರು ತಮ್ಮ ಪ್ರತಿಭಟನೆಯ ಉದ್ದೇಶ ಮನವರಿಕೆ ಮಾಡಿಕೊಟ್ಟರು.

ವಿಧಾನ ಮಂಡಲದ ಉಭಯ ಸದನಗಳ ಪ್ರತಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ನೇರವಾಗಿ ಪುರುಷ ಪ್ರಯಾಣಿಕರ ಬಳಿಗೆ ತೆರಳಿ ಗುಲಾಬಿ ಹೂ ನೀಡಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡದ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಬೆಲೆ ಏರಿಕೆಯಿಂದ ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ‘ಶಕ್ತಿ’ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿದ ಸರ್ಕಾರ, ಬಸ್ ದರ ಏರಿಸಿ ಪುರುಷ ಪ್ರಯಾಣಿಕರಿಗೆ ಬರೆ ಹಾಕಿದೆ. ಇದಕ್ಕಾಗಿ ಸರ್ಕಾರವಂತೂ ಕ್ಷಮೆ ಕೇಳುವುದಿಲ್ಲ. ಪ್ರತಿಪಕ್ಷವಾಗಿ ಪುರುಷ ಪ್ರಯಾಣಿಕರಿಗೆ ಗುಲಾಬಿ ಹೂ ನೀಡಿ ಕ್ಷಮೆ ಕೇಳುತ್ತಿದ್ದೇವೆ ಎಂದು ಹೇಳಿದರು.

ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣದಲ್ಲಿ ಬಿಜೆಪಿ ನಾಯಕರು ಪ್ರವೇಶಿಸುತ್ತಿದ್ದ ವೇಳೆ ಪೊಲೀಸರು ತಡೆದರು. ಇದರಿಂದ ಆಕ್ರೋಶಗೊಂಡ ವಿಪಕ್ಷ ನಾಯಕ ಆರ್. ಅಶೋಕ್​​ ವಶಕ್ಕೆ ಪಡೆದರೆ ಕೋರ್ಟ್ ಗೆ ಹೋಗುವೆ. ನಾವು ಪ್ರತಿಭಟನೆ ಮಾಡಲು ಬಂದಿಲ್ಲ. ಪ್ರಯಾಣಿಕರಿಗೆ ಹೂವು ಕೊಡಲು ಬಂದಿದ್ದೆನೆ. ಹೊಡಿಯುತ್ತೀಯಾ, ಹೊಡಿ, ಹೊಡಿ, ಏಯ್​ ನಾನು ವಿರೋಧ ಪಕ್ಷದ ನಾಯಕ, ನನ್ನನ್ನು ಮುಟ್ಟಿದರೆ ಹುಷಾರ್​​. ಜನ್ಮದಲ್ಲಿ ನೆನಪಿನಲ್ಲಿಟ್ಟುಕೊಳ್ಳಬೇಕು ಹಾಗೆ ಮಾಡುವೆ ಎಂದು ಕಿಡಿಕಾರಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು