LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಬಾಣಂತಿಯರ ಸಾವು ಪ್ರಕರಣ ಸರ್ಕಾರದ ವಿರುದ್ಧ ಅಶೋಕ್ ವಾಗ್ದಾಳಿ

ಬೆಂಗಳೂರು: ಬಳ್ಳಾರಿಯ ಜಿಲ್ಲಾಸ್ಪತ್ರೆ ಹಾಗು ಬಿಮ್ಸ್ ಆಸ್ಪತ್ರೆಯಲ್ಲಿ ಕಳೆದ 10 ದಿನಗಳಲ್ಲಿ 5 ಬಾಣಂತಿ ಮಹಿಳೆಯರ ಸಾವಾಗಿದ್ದು, ಈ ಬಗ್ಗೆ ತಜ್ಞರ ತಂಡ ತನಿಖೆ ಮಾಡಿ ನೀಡಿರುವ ವರದಿಯನ್ನ ಕಾಂಗ್ರೆಸ್ ಸರ್ಕಾರ ಗೌಪ್ಯವಾಗಿ ಮುಚ್ಚಿಟ್ಟಿರುವುದು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ದೂರಿದ್ದಾರೆ.

ಈ ಸಂಬಂಧ ಅವರು ಟ್ವಿಟ್ ಮಾಡಿದ್ದು, ಈ ಸರಣಿ ಸಾವಿನ ಬೆನ್ನಲ್ಲೇ, ನವೆಂಬರ್ 16ನೆ ತಾರೀಖಿನಂದು ಖಾಸಗಿ ಕಂಪನಿಯೊಂದು ಸರಬರಾಜು ಮಾಡಿರುವ Ringer Lactate Infusion ಔಷದಿಯನ್ನ ಬಳಕೆ ಮಾಡದಂತೆ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ಸುತ್ತೋಲೆ ಹೊರಡಿಸಿದೆ.
ಬಳ್ಳಾರಿಯಲ್ಲಿ ಸಂಭವಿಸಿರುವ ಬಾಣಂತಿಯರ ಸಾವಿಗೂ ಈ ಸುತ್ತೋಲೆಗೂ ಏನಾದರೂ ಸಂಬಂಧವಿದೆಯೇ? ಈ ಕಳಪೆ ಗುಣಮಟ್ಟದ ಔಷಧಿ ಪೂರೈಕೆಗೆ, ಬಳಕೆಗೆ ಹೊಣೆ ಯಾರು? ಸರ್ಕಾರ ವರದಿಯನ್ನ ಮುಚ್ಚಿಡುವ ಮೂಲಕ ಯಾರನ್ನು ರಕ್ಷಿಸುತ್ತಿದೆ? ಎಂದು ಪ್ರಶ್ನಿಸಿದ್ದಾರೆ.

ಇಡೀ ಕರ್ನಾಟಕವೇ ಬೆಚ್ಚಿ ಬೀಳುವ ಇಂತಹ ಆಘಾತಕಾರಿ ಘಟನೆ ನಡೆದಿದ್ದರೂ ಸಿಎಂ ಸಿದ್ದರಾಮಯ್ಯ ಅವರಾಗಲಿ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರಾಗಲಿ ಇದರ ಬಗ್ಗೆ ಕ್ರಮ ಕೈಗೊಳ್ಳುವುದಿರಲಿ, ಕನಿಷ್ಠ ಪಕ್ಷ ಸಂತಾಪ ಕೂಡ ಸೂಚಿಸಿಲ್ಲ. ಇನ್ನು ಬಳ್ಳಾರಿ ಉಸ್ತುವಾರಿ ಸಚಿವ ಜಮೀರ್ ಅಹಮ್ಮದ್ ಅವರು ಈವರೆಗೂ ಜಿಲ್ಲೆಗೆ ಭೇಟಿ ನೀಡುವ ಗೋಜಿಗೂ ಹೋಗಿಲ್ಲ.

ಈ ಪ್ರಕರಣದ ನೈತಿಕೆ ಹೊಣೆ ಹೊತ್ತು ಆರೋಗ್ಯ ಸಚಿವ ದಿನೇಶ್‍ಗುಂಡೂರಾವ್ ಹಾಗು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ಕೂಡಲೇ ರಾಜೀನಾಮೆ ನೀಡಬೇಕು. ಈ ಘಟನೆಯ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರನ್ನ ಒತ್ತಾಯಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು