LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಬಿಗ್‍ಬಾಸ್ ಕನ್ನಡ ಸೀಸನ್ 11, ಸೆ. 29ರ ಸಂಜೆ 6ಗಂಟೆಗೆ ಗ್ರ್ಯಾಂಡ್ ಓಪನಿಂಗ್ ಕಿಚ್ಚ ಸುದೀಪ್ ಶೋನ ಸೂತ್ರಧಾರ

ಕಲರ್ಸ್ ಕನ್ನಡದಲ್ಲಿ ಪ್ರಸಾರ ಕಾಣಲಿರುವ ಬಿಗ್ ಬಾಸ್ ಕನ್ನಡ ಸೀಸನ್ 11ರ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಕಳೆದ ಸೀಸನ್ 10ರ ಬಹುದೊಡ್ಡ ಯಶಸ್ಸಿನ ಬಳಿಕ ದೊಡ್ಡ ಜವಾಬ್ದಾರಿಯೊಂದಿಗೆ ಕಲರ್ಸ್ ಕನ್ನಡ ಮತ್ತೊಂದು ಸೀಸನ್ ಜತೆಗೆ ಆಗಮಿಸುತ್ತಿದೆ. ಈಗಾಗಲೇ  ಪ್ರೋಮೋಗಳ ಮೂಲಕವೇ ಗಮನ ಸೆಳೆದಿರುವ ಸೀಸನ್ 11, ಇನ್ನೇನು ಶೀಘ್ರದಲ್ಲಿಯೇ ಆರಂಭವಾಗಲಿದೆ.

ಈ ಸಲದ ವಿಶೇಷತೆಗಳ ಬಗ್ಗೆ ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಕಿಚ್ಚ ಸುದೀಪ್, ಅಲೋಕ್ ಜೈನ್ ಸೀನಿಯರ್ ಎಕ್ಸಿಕ್ಯೂಟಿವ್ ವೈಸ್ ಪ್ರೆಸಿಡೆಂಟ್, ವಯಾಕಾಮ್ 18, ದೀಪಕ್ ಧಾರ್ ಸಂಸ್ಥಾಪಕರು ಮತ್ತು ಗ್ರೂಪ್ ಸಿಇಓ ಬಾನಿಜೆ ಏಷ್ಯಾ ಮಾತ್ತು ಎಂಡೆಮೋಲ್ ಶೈನ್ ಇಂಡಿಯಾ ಹಾಗೂ ಕಲರ್ಸ್ ಕನ್ನಡ ಹೆಡ್ ಪ್ರಶಾಂತ್ ನಾಯಕ್, ಉಪಸ್ಥಿತರಿದ್ದರು. ಸುದ್ದಿಗೋಷ್ಠಿಗೂ ಮೊದಲು ಈ ಸಲದ ಹ್ಯಾಷ್‍ಟ್ಯಾಗ್‍ಗಳಾದ #BBK11 #BiggBossKannada11 #ColorsKannada #HosaAdhyayaಅನಾವರಣ ಮಾಡಲಾಯಿತು.

ಕಲರ್ಸ್ ಕನ್ನಡದ ಹೆಡ್ ಪ್ರಶಾಂತ್ ನಾಯಕ್ ಮಾತನಾಡಿ, ಬಿಗ್ ಬಾಸ್ ಎಂಬುದು ಒಂದು ತಂಡದ ಪರಿಶ್ರಮ. ಈ ವರ್ಷ ಚೆನ್ನಾಗಾಯಿತು, ಕಳೆದ ವರ್ಷ ಚೆನ್ನಾಗಾಯಿತು ಅಂತಲ್ಲ. ಪ್ರತಿ ವರ್ಷವೂ ತಂಡದ ಶ್ರಮ ಅಷ್ಟೇ ಪ್ರಮಾಣದಲ್ಲಿರುತ್ತದೆ. ಪ್ರತಿ ವರ್ಷವೂ ಹಾರ್ಟ್ ಅಂಡ್ ಸೋಲ್ ಶ್ರಮ ಹಾಕುತ್ತಿದ್ದೇವೆ. ಅದರಲ್ಲೂ ಕಳೆದ ವರ್ಷದ ಸೀಸನ್ ದೊಡ್ಡ ಮಟ್ಟದಲ್ಲಿ ಹಿಟ್ ಆದ ಕೂಡಲೇ, ಅದರ ಭಾರ ಸಹಜವಾಗಿ ನಮಗೆ ಗೊತ್ತಿದ್ದೋ, ಗೊತ್ತಿಲದೆಯೋ ನಮ್ಮ ಮೇಲೆ ಬಂದು ಬಿದ್ದಿರುತ್ತದೆ. ಈ ಸಲ ಅದಕ್ಕಿಂತ ಜಾಸ್ತಿ ಇದೆ. ಅದನ್ನು ಫುಲ್ ಫಿಲ್ ಮಾಡೋಕೆ ನಮ್ಮ ತಂಡ ಅದೇ ನಿಟ್ಟಿನಲ್ಲಿ ಕೆಲಸ ಮಾಡಲಿದೆ" ಎಂದಿದ್ದಾರೆ.
ಕಿಚ್ಚ ಸುದೀಪ್ ಶೋನ ಸೂತ್ರಧಾರ: ಸುದೀಪ್ ಸರ್ ಬಗ್ಗೆ ಹೇಳಲೇಬೇಕು. ಒಂದು ಶೋವನ್ನು ನಾವು ಡಿಸೈನ್ ಮಾಡಬಹುದು.

ಅದನ್ನು ಒಂದು ತಂಡವಾಗಿ ನಿರ್ವಹಿಸಬಹುದು. ಆದರೆ, ಅದನ್ನು ಮುನ್ನಡೆಸುವುದು ನಮ್ಮ ಸುದೀಪ್ ಸರ್. ಈ ಶೋನ ಸೂತ್ರಧಾರ ಅವರು ಎಂದರು ಪ್ರಶಾಂತ್ ನಾಯಕ್.ಶನಿವಾರವೇ ಸ್ಪರ್ಧಿಗಳ ಹೆಸರು ರಿವೀಲ್: ಸ್ವರ್ಗ ಮತ್ತು ನರಕ ಎಂಬ ಹೊಸ ಕಾನ್ಸೆಪ್ಟ್ ಮೂಲಕ ಈ ಸಲದ ಬಿಗ್ ಬಾಸ್ ಆಗಮಿಸುತ್ತಿದೆ. ಎಲ್ಲರನ್ನು ರಂಜಿಸಲು ಹೆಲ್ ಹೆವೆನ್ ಪರಿಕಲ್ಪನೆಯನ್ನು ಪರಿಚಯಿಸುತ್ತಿದ್ದೇವೆ. ಇದರ ಜತೆಗೆ ಭಾನುವಾರ ಶೋ ಲಾಂಚ್ ಇರುತ್ತೆ. ಆದರೆ, ಅದಕ್ಕೂ ಮೊದಲೇ ಶನಿವಾರ "ರಾಜಾರಾಣಿ" ರಿಯಾಲಿಟಿ ಶೋನ ಫಿನಾಲೆಯಲ್ಲಿ ಬಿಗ್‍ಬಾಸ್ ಸೀಸನ್ 11ರ ಆಯ್ದ ಕೆಲವರನ್ನು ವೀಕ್ಷಕರಿಗೆ ಪರಿಚಯಿಸಲಿದ್ದೇವೆ. ಹಾಗೆ ರಿವೀಲ್ ಮಾಡಿದ ಹೆಸರುಗಳಲ್ಲಿ, ಯಾರು ಬಿಗ್‍ಬಾಸ್ ಮನೆ ಪ್ರವೇಶಿಸಬೇಕು, ಯಾರು ಬೇಡ ಎಂಬುದನ್ನು ವೀಕ್ಷಕರೇ ವೋಟಿಂಗ್ ಮೂಲಕ ನಿರ್ಧರಿಸುವ ಅವಕಾಶ ನೀಡಲಿದ್ದೇವೆ. ಅಲ್ಲಿ ಪಾಸ್ ಆದವರು, ಮಾರನೇ ದಿನದ ಗ್ರ್ಯಾಂಡ್ ಓಪನಿಂಗ್‍ನಲ್ಲಿ ಎಂಟ್ರಿಯಾಗಲಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು