LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಬಿಜೆಪಿಗೆ ಎಲ್ಲಾ ಹಳದಿ! ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ: ಗೃಹಸಚಿವ ಡಾ. ಪರಮೇಶ್ವರ್ ವಾಗ್ದಾಳಿ

ಬೆಂಗಳೂರು: ಬಿಜೆಪಿ ಎಲ್ಲವನ್ನೂ ರಾಜಕೀಯ ಮಾಡಲು ಹೋಗ್ತಿದೆ. ಅವರ ಕಣ್ಣಿಗೆ ಎಲ್ಲವೂ ಹಳದಿ ಬಣ್ಣ ಕಾಣುತ್ತದೆ, ಕಾಮಲೆ ಕಣ್ಣಿನಿಂದ ನೋಡ್ತಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದ ಕೇಸ್ ಹಿಂಪಡೆದಿರುವುದಕ್ಕೆ ಪ್ರತಿಭಟನೆಗೆ ಮುಂದಾಗಿರುವ ಬಿಜೆಪಿ ವಿರುದ್ಧ ಕಿಡಿ ಕಾರಿರುವ ಅವರು, ಕೆಂಪು, ಹಸಿರು, ನೀಲಿ ಬಣ್ಣ ಬಿಜೆಪಿಯವರ ಕಣ್ಣಿಗೆ ಕಾಣಲ್ಲ ಎಂದು ಗುಡುಗಿದ್ದಾರೆ.ಕೇಸ್ ಗಳನ್ನು ವಾಪಸ್ ಪಡೆಯಲು ಯಾರಾದರೂ ಸರ್ಕಾರಕ್ಕೆ ಮನವಿ ಮಾಡ್ತಾರೆ. ಆಗ ನಾವು ಅದರ ಪರಿಶೀಲನೆಗೆ ಸಂಪುಟ ಉಪಸಮಿತಿ ರಚನೆ ಮಾಡ್ತೇವೆ, ಸಂಬಂಧಿಸಿದ ಇಲಾಖೆಗೆ ಮಾಹಿತಿ ಕೇಳ್ತೇವೆ. ನಂತರ ಸಂಪುಟ ಉಪಸಮಿತಿ ಅದರ ಬಗ್ಗೆ ತೀರ್ಮಾನ ಮಾಡುತ್ತೆ.

ವಾಪಸ್ ತಗೋಬೇಕಾ `ಬೇಡವಾ' ಅಂತ ಉಪಸಮಿತಿ ನಿರ್ಧರಿಸುತ್ತೆಎಂದ ಅವರು, ಹುಬ್ಬಳ್ಳಿ ಕೇಸ್ ಗಳೂ ಅಷ್ಟೊಂದು ಜನರ ಮೇಲೆ ಹಾಕುವ ಅಗತ್ಯವಿಲ್ಲ ಅಂತ ಸಂಪುಟ ಉಪಸಮಿತಿ ಸದಸ್ಯರು ಅಭಿಪ್ರಾಯ ಪಟ್ಟಿದ್ದಾರೆ.ನಂತರ ಸಂಪುಟ ಸಭೆಯಲ್ಲಿ ಕೇಸ್ ಗಳನ್ನು ವಾಪಸ್ ಪಡೆಯುವ ನಿರ್ಧಾರ ಆಗಿದೆ. ಇದನ್ನು ಕೋರ್ಟಿಗೆ ಕಳಿಸ್ತೇವೆ, ಕೋರ್ಟ್ ಒಪ್ಪಿಕೊಂಡರೆ ಆ ಕೇಸ್ ಗಳು ವಾಪಸ್ ಆಗ್ತವೆ ಎಂದು ತಿಳಿಸಿದ ಅವರು, ಇದರಲ್ಲಿ ಬಿಜೆಪಿ ಇದನ್ನು ಬಿಜೆಪಿ ರಾಜಕೀಯ ಮಾಡ್ತಿದೆ. ಬಿಜೆಪಿ ಸರ್ಕಾರವಿದ್ದಾಗಲೂ ಹಲವು ಕೇಸ್ ಗಳನ್ನು ವಾಪಸ್ ಪಡೆದಿತ್ತು ಎಂದು ಹೇಳಿದರು.

ಯುಪಿಯಲ್ಲಿ ಅಲ್ಲಿನ ಸಿಎಂ ವಿರುದ್ಧವೇ ಹಲವು ಕೇಸ್ ಗಳಿದ್ವು, ಅದನ್ನೆಲ್ಲ ಅವರು ವಾಪಸ್ ಪಡ್ಕೊಂಡ್ರು. ಈಗ ಹುಬ್ಬಳ್ಳಿ ಕೇಸ್ ಗಳನ್ನು ವಾಪಸ್ ಪಡೆಯಲು ಕೋರ್ಟ್ ಒಪ್ಪುತ್ತೋ ಇಲ್ವೋ ಗೊತ್ತಿಲ್ಲ ನಿಯಮಾನುಸಾರ ಕೇಸ್ ಗಳನ್ನು ವಾಪಸ್ ಪಡೆಯಬಹುದು. ಹುಬ್ಬಳ್ಳಿ ಕೇಸ್ ಗಳಲ್ಲಿ ಒಟ್ಟು 56 ಕೇಸ್ ಗಳಲ್ಲಿ 43 ಕೇಸ್ ಗಳನ್ನು ವಾಪಸ್ ಪಡೆಯುವ ತೀರ್ಮಾನ ಆಗಿದೆ ಎಂದು ತಿಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು