LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಬಿಜೆಪಿಯವರು ಬೇಕಾದರೆ ಕೋರ್ಟ್‍ಗೆ ಹೋಗಲಿ: ಪರಂ

ಬೆಂಗಳೂರು: ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ಕ್ಲೀನ್ ಚಿಟ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿಯವರು ಬೇಕಾದ್ರೆ ಕೋರ್ಟ್‍ಗೆ ಹೋಗಲಿ. ಈ ಪ್ರಕರಣದಲ್ಲಿ ಈಗಾಗಲೇ ಲೋಕಾಯುಕ್ತರು ತನಿಖೆ ನಡೆಸಿ ವರದಿ ಕೊಟ್ಟಿದ್ದಾರೆ. ಸಿಬಿಐಗೆ ಕೊಡುವ ವಿಚಾರದಲ್ಲಿ ಈಗಾಗಲೇ ಕೋರ್ಟ್ ಆದೇಶ ನೀಡಿದೆ. ಬಿಜೆಪಿಯವರು ಲೋಕಾಯುಕ್ತ ಕ್ಲೀನ್ ಚಿಟ್ ನೀಡಿರುವುದನ್ನು ಪ್ರಶ್ನಿಸುತ್ತಿದ್ದಾರೆ. ಇವರಿಗೆ ಅನುಕೂಲ ಆದಾಗ ಎಲ್ಲವೂ ಸರಿ ಇರುತ್ತದೆ.

ಇಲ್ಲದಿದ್ದರೆ ಸರಿ ಇರೋದಿಲ್ಲ ಅಂದ್ರೆ ಹೇಗೆ? ಎಂದು ಪ್ರಶ್ನಿಸಿದ್ದಾರೆ.ಬಿಜೆಪಿಯವರು ಬೇಕಾದರೆ ಕೋರ್ಟ್ ಗೆ ಹೋಗಲಿ/ಲೋಕಾಯುಕ್ತ ಸ್ವತಂತ್ರ ಸಂಸ್ಥೆ. ಅವರದೇ ಆದ ತನಿಖೆ ನಡೆಯುತ್ತದೆ. ಸರ್ಕಾರದ ಅಡಿಯಲ್ಲಿ ಲೋಕಾಯುಕ್ತ ಕೆಲಸ ಮಾಡುವುದಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.ಎರಡು ದಿನಗಳ ಕಾಲ ದೆಹಲಿ ಪ್ರವಾಸದಲ್ಲಿದ್ದ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಬೆಂಗಳೂರಿಗೆ ವಾಪಸ್ ಆಗಿದ್ದು, ದೆಹಲಿ ಪ್ರವಾಸದ ವೇಳೆ ತಾವು ಯಾವುದೇ ರಾಜಕೀಯ ವಿಷಯದ ಬಗ್ಗೆ ಯಾರೊಂದಿಗೂ ಚರ್ಚೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಎಐಸಿಸಿ ನೂತನ ಕಚೇರಿ ಕಟ್ಟಡದ ಉದ್ಘಾಟನೆ ವೇಳೆ ತಾವು ಹೋಗಿರಲಿಲ್ಲ. ಇದೀಗ ಹೋಗಿ ನೋಡಿ ಬರುವ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ಕೇವಲ 15ನಿಮಿಷಗಳ ಕಾಲ ಅನೌಪಚಾರಿಕವಾಗಿ ಮಾತನಾಡಿದ್ದೇನೆ. ಡಿಕೆ ಮತ್ತು ಸಿಎಂ ಅವರ ಬಗ್ಗೆ ಯಾರೊಂದಿಗೂ ಚರ್ಚೆ ನಡೆಸಿಲ್ಲ. ಶೋಷಿತ ವರ್ಗಗಳ ಸಮಾವೇಶ ಸೇರಿದಂತೆ ಯಾವುದೇ ವಿಷಯಗಳ ಬಗ್ಗೆ ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.ಡಿಕೆಯಾಗಲೀ, ಕೆ.ಎನ್. ರಾಜಣ್ಣ ಅವರ ಬಗ್ಗೆ ಏನೂ ಕೇಳಬೇಡಿ ಎಂದು ಇದೇ ಸಂದರ್ಭದಲ್ಲಿ ಪತ್ರಕರ್ತರಿಗೆ ಮನವಿ ಮಾಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು