LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಬಿಜೆಪಿಯಿಂದಲೇ ಸ್ಪರ್ಧೆಗೆ ಯೋಗೀಶ್ವರ್ ಪಟ್ಟು?

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್‍ಗಾಗಿ ಸಿಪಿ ಯೋಗೇಶ್ವರ್ ಪಟ್ಟು ಹಿಡಿದಿದ್ದಾರೆ. ಈ ವಿಚಾರವಾಗಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ದೆಹಲಿ ತೆರಳಿದ್ದ
ಅವರು ಇದೀಗ ಬೆಂಗಳೂರಿಗೆ ವಾಪಸಾಗಿದ್ದಾರೆ.

ಈ ಮಧ್ಯೆ, ಕುಮಾರಸ್ವಾಮಿ ನಿರ್ಧಾರದ ಮೇಲೆ ಸಿಪಿ ಯೋಗೇಶ್ವರ್ ಭವಿಷ್ಯ ನಿಂತಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.ಕುಮಾರಸ್ವಾಮಿ ಒಪ್ಪಿದ್ರೆ ಮಾತ್ರ ಯೋಗೇಶ್ವರ್ ಎನ್‍ಡಿಎಯಿಂದ ಸ್ಪರ್ಧೆ ಮಾಡಲಿದ್ದಾರೆ ಎಂದು ಬಿಜೆಪಿ ಮೂಲಗಳು ಹೇಳಿವೆ. ಈ ಮಧ್ಯೆ, ಬಿಜೆಪಿ ಚಿಹ್ನೆಯಿಂದಲೇ ಸ್ಪರ್ಧಿಸಲು ಯೋಗೇಶ್ವರ್ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.

ಜೆಡಿಎಸ್ ಚಿಹ್ನೆಯಲ್ಲಿ ಸ್ಪರ್ಧೆಗೆ ಧೈರ್ಯ ಮಾಡದ ಯೋಗೇಶ್ವರ್, ಟಿಕೆಟ್‍ಗಾಗಿ ದೆಹಲಿಯಲ್ಲಿ ಕಸರತ್ತು ನಡೆಸಿದ್ದಾರೆ. ಪ್ರಲ್ಹಾದ್ ಜೋಶಿ ಮೂಲಕ ಹೈಕಮಾಂಡ್ ನಾಯಕರ ಭೇಟಿಗೆ ಪ್ರಯತ್ನಪಟ್ಟಿದ್ದಾರೆ. ಅಷ್ಟೇ ಅಲ್ಲದೆ, ರಾಜ್ಯ ನಾಯಕರು ಟಿಕೆಟ್ ವಿಚಾರದಲ್ಲಿ ನನ್ನ ಬೆಂಬಲಕ್ಕೆ ನಿಲ್ಲಬೇಕು ಎಂದು ಮನವಿ ಮಾಡಿದ್ದಾರೆ.
ಆಗಸ್ಟ್ 16ರ ಬಳಿಕ ದೆಹಲಿಗೆ ಬರು ವುದಾಗಿ ಕೆಲ ನಾಯಕರು ಯೋಗೇಶ್ವರ್‍ಗೆ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಆಗಸ್ಟ್ 16ರ ಬಳಿಕ ದೆಹಲಿಗೆ ಬಂದು ಕುಮಾರಸ್ವಾಮಿ ಜತೆ ಚರ್ಚೆ ಮಾಡಲಿದ್ದೇವೆ.

ಆಗಸ್ಟ್ 18ರ ಬಳಿಕ ದೆಹಲಿಯಲ್ಲೇ ಕುಮಾರಸ್ವಾಮಿ ಜತೆ ಸಭೆ ನಿಗದಿ ಮಾಡುವುದಾಗಿ ಭರವಸೆ ನೀಡಿದ್ದಾರೆ. ಆಗಸ್ಟ್ 18ರ ಬಳಿಕ ದೆಹಲಿಗೆ ಬರುವಂತೆ ಯೋಗೇಶ್ವರ್‍ಗೆ ಹೈಕಮಾಂಡ್ ನಾಯಕರು ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.ಮಂಗಳವಾರವಷ್ಟೇ ಸಿಪಿ ಯೋಗೇಶ್ವರ್ ಕೆಲವು ಮಂದಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದರು. ಸದ್ಯ ಅವರು ದೆಹಲಿಯಿಂದ ಬೆಂಗಳೂರಿಗೆ ಮರಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು