LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಬಿಜೆಪಿ ಕನಸು ನನಸಾಗಲ್ಲ: ಎಂ.ಬಿ.ಪಾಟೀಲ್

ಬೆಂಗಳೂರು: ಬಿಜೆಪಿ 3 ಸೀಟು ಗೆಲ್ಲುವ ಹಗಲುಗನಸು ಕಾಣುತ್ತಿದ್ದರು, ಇದೀಗ ಜನರು ಅವರಿಗೆ ಉತ್ತರ ಕೊಟ್ಟಿದ್ದಾರೆ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ 3 ಕ್ಷೇತ್ರದಲ್ಲಿ ಕಾಂಗ್ರೆಸ್‍ಗೆ ನ್ನಡೆಯಿದೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ 18 ಸಾವಿರ ಲೀಡ್ ಇದೆ. ಶಿಗ್ಗಾಂವಿ, ಸಂಡೂರಿನಲ್ಲಿಯೂ ಲೀಡ್ ಇದೆ. 3 ಕ್ಷೇತ್ರದಲ್ಲಿಯೂ ನಾವು ಗೆಲ್ಲುತ್ತೇವೆ. ಮೂರು ಸೀಟು ಗೆಲ್ಲುವ ಮೂಲಕ ಬಿಜೆಪಿ ಹಗಲುಗನಸು ಕಾಣುತ್ತಿದ್ದರು. ಜನರು ಇದೀಗ ಉತ್ತರ ಕೊಟ್ಟಿದ್ದಾರೆ ಎಂದು ಹೇಳಿದರು.

ಬೊಮ್ಮಾಯಿ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಬೊಮ್ಮಾಯಿ ವಿರುದ್ದ ಅಲ್ಪಸಂಖ್ಯಾತ ಅಭ್ಯರ್ಥಿ ಇದ್ದಾರೆ ಎಂದು ಹೇಳಿದ್ದರು. ಆದರೆ ಅದೇ ಅಲ್ಪಸಂಖ್ಯಾತ ಅಭ್ಯರ್ಥಿಯ ವಿರುದ್ಧ ಅಲ್ಲಾಡುತ್ತಿದ್ದಾರೆ. ನಮ್ಮ ಪಕ್ಷ ಎಲ್ಲಾ ಜಾತಿ ಧರ್ಮಗಳಿಗೆ ಅವಕಾಶ ಕೊಡುತ್ತದೆ. ಚನ್ನಪಟ್ಟಣದಲ್ಲಿ ಅಲ್ಪಸಂಖ್ಯಾತ ವೋಟ್ ನಮಗೆ ಸಹಕಾರ ಆಗಿದೆ. ಮೂರು ಕ್ಷೇತ್ರದಲ್ಲಿ 1 ಕ್ಷೇತ್ರ ಕೊಡುವ ಚರ್ಚೆ ಆಗಿತ್ತು. ಚನ್ನಪಟ್ಟಣ ಯೋಗೇಶ್ವರ್ ಬರುವುದು ಯಾರಿಗೂ ಗೊತ್ತಿಲ್ಲ. ಎಲ್ಲಾ ಲೆಕ್ಕಾಚಾರ ನೋಡಿ ಟಿಕೆಟ್ ಕೊಡಲಾಗಿದೆ ಎಂದು ತಿಳಿಸಿದರು.

ಚನ್ನಪಟ್ಟಣದಲ್ಲಿ ಯೋಗೇಶ್ವರ್ ಅನುಭವ, ಅವರ ವೋಟು ಹಾಗೂ ಕಾಂಗ್ರೆಸ್ ವೋಟ್‍ನಿಂದ ಗೆಲ್ಲುತ್ತಿದ್ದಾರೆ. ಜೆಡಿಎಸ್ ಅವರು ಪದೇ ಪದೇ ಅವರು ಕುಟುಂಬಕ್ಕೆ ಟಿಕಟ್ ಕೊಡುತ್ತಿರುವುದು ವಿರೋಧ ಆಗಿರಬಹುದು. ದೇವೇಗೌಡರು ಸರ್ಕಾರ ಕಿತ್ತು ಒಗೆಯುತ್ತೇನೆ ಎಂದಿದ್ದರು. ಆದರೆ ಸರ್ಕಾರವನ್ನ ಯಾರಿಂದಲೂ ಕಿತ್ತು ಒಗೆಯಲು ಸಾಧ್ಯವಿಲ್ಲ. ಜನರು ಅದನ್ನ ನಿರ್ಧಾರ ಮಾಡುತ್ತಾರೆ. ತಮ್ಮದೇ ಕುಟುಂಬದ ಅಭ್ಯರ್ಥಿ ಹಾಕಿರುವುದರಿಂದ ಜನ ನೋಡಿ ಮತ ಹಾಕಿದ್ದಾರೆ. ನಮ್ಮ ಪಕ್ಷದ ನಾಯಕರು ಒಟ್ಟಾಗಿ ಉತ್ತಮವಾಗಿ ಕೆಲಸ ಮಾಡಿದ್ದಾರೆ ಎಂದರು.

ಮಹಾರಾಷ್ಟ್ರ ಚುನಾವಣೆಯಲ್ಲಿ ಹಿನ್ನಡೆಯಾಗಿದೆ. ಸಂಪೂರ್ಣ ಫಲಿತಾಂಶ ಘೋಷಣೆ ಆದ ಮೇಲೆ ಎಲ್ಲಿ ಏನು ಆಗಿದೆ ಎಂದು ತಿಳಿಯಬೇಕು. ಮಹಾರಾಷ್ಟ್ರದ ಫಲಿತಾಂಶ ನಿರೀಕ್ಷೆ ಮಾಡಿರಲಿಲ್ಲ. ಒನ್ ಸೈಡ್ ಆಗುತ್ತಿದೆ. ಫಲಿತಾಂಶ ಬರಲಿ. ಆಮೇಲೆ ನೋಡೋಣ. ನಾವು ಗ್ಯಾರಂಟಿ ಚುನಾವಣೆ ಕಾರ್ಡ್ ತಡವಾಗಿ ಹಂಚಿದ್ದೇವೆ. ಇದು ನಮಗೆ ಹಿನ್ನಡೆ ಆಗಿರಬಹುದು. ಮಹಾರಾಷ್ಟ್ರದ ಎಫೆಕ್ಟ್ ನಮ್ಮ ರಾಜ್ಯದಲ್ಲಿ ಆಗುವುದಿಲ್ಲ. ನಮ್ಮಲ್ಲಿ ಯಾವ ಏಕನಾಥ ಶಿಂಧೆ, ಅಜಿತ್ ಪವರ್ ಇಲ್ಲ. ನಮ್ಮ ಸರ್ಕಾರಕ್ಕೆ ಯಾವುದೇ ಎಫೆಕ್ಟ್ ಇಲ್ಲ. ಉಪಚುನಾವಣೆ ಫಲಿತಾಂಶ ರಾಜ್ಯ ರಾಜಕೀಯದಲ್ಲಿ ಪ್ರಮುಖ ಆಗುತ್ತದೆ ಎಂದು ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು