LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಬಿಜೆಪಿ ಮಾದರಿಯಲ್ಲಿ ಕಾಂಗ್ರೆಸ್ ಸರಕಾರ ಸ್ಪಂದಿಸಲಿ: ವಿಜಯೇಂದ್ರ

ಬೆಂಗಳೂರು: ನೆರೆಪೀಡಿತರು ಮತ್ತು ಮನೆ ಕಳಕೊಂಡವರಿಗೆ ಹಿಂದಿನ ಬಿಜೆಪಿ ಸರಕಾರ ಸ್ಪಂದಿಸಿದ ಮಾದರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರವು ಹೆಚ್ಚು ಪರಿಹಾರ ಕೊಟ್ಟು ಸ್ಪಂದಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.

ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಅಂಕೋಲಾ ತಾಲ್ಲೂಕಿನ ಉಳುವಾರೆ, ಶಿರೂರು ಮತ್ತಿತರ ಕಡೆ ಆದ ಮಳೆ ಹಾನಿ, ಅನಾಹುತದಿಂದ ಬಡವರು ಮನೆ ಕಳೆದುಕೊಂಡಿದ್ದಾರೆ. ಅದನ್ನು ನಾನು ವೀಕ್ಷಿಸಿ ಬಂದಿದ್ದೇನೆ. ಹಿಂದೆ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ರಾಜ್ಯ ಸರಕಾರವು ಎನ್‍ಡಿಆರ್‍ಎಫ್ ನಿಯಮದ ಪ್ರಕಾರ ಮನೆ ಕಳೆದುಕೊಂಡ ಬಡವರಿಗೆ ಸುಮಾರು 1 ಲಕ್ಷ ಕೊಡಬೇಕಿತ್ತು. ಅದು ಸಾಕಾಗುವುದಿಲ್ಲ ಎಂದು 5 ಲಕ್ಷ ನೀಡುವ ನಿರ್ಧಾರವನ್ನು ಯಡಿಯೂರಪ್ಪ ಅವರು ಕೈಗೊಂಡಿದ್ದರು ಎಂದರು.

ಗೋಡೆ ಕುಸಿದ ಮನೆಗೆ ಎನ್‍ಡಿಆರ್‍ಎಫ್ ನಿಯಮದ ಪ್ರಕಾರ 40 ಸಾವಿರ ಕೊಡುತ್ತಿದ್ದರು. ಅದನ್ನು ಒಂದು ಲಕ್ಷಕ್ಕೆ ಹೆಚ್ಚಿಸುವ ನಿರ್ಧಾರವನ್ನು ಯಡಿಯೂರಪ್ಪ ಅವರು ಕೈಗೊಂಡಿದ್ದರು.ರಾಜ್ಯಾದ್ಯಂತ ಬಡವರು ಅತಿವೃಷ್ಟಿಯಿಂದ ಮನೆಗಳನ್ನು ಕಳಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿಗಳು ಇದೇ ಮಾದರಿಯಲ್ಲಿ ಪರಿಹಾರ ಕೊಡಬೇಕು. ತಕ್ಷಣ ಈ ಸಮಸ್ಯೆಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.

ಶಿರೂರು ಗುಡ್ಡ ಕುಸಿತದಲ್ಲಿ ಲಕ್ಷ್ಮಣ ನಾಯ್ಕ ಎಂಬುವರು ಮೃತರಾಗಿದ್ದು, ಕುಟುಂಬದ ಮೂವರು ಮಹಿಳೆಯರು ನಿರ್ಗತಿಕರಾಗಿದ್ದಾರೆ. ಆದರೆ, ಅವರ ಮನೆಗೆ ಶಾಸಕರು, ಸಚಿವರು ಭೇಟಿ ಕೊಟ್ಟಿಲ್ಲ ಎಂದು ಆಕ್ಷೇಪಿಸಿದರು. ಕಾನೂನು ಏನೇ ಇದ್ದರೂ ಪರಿಹಾರ ನೀಡಬೇಕಿತ್ತು ಎಂದ ಅವರು, ನಿನ್ನೆ ಅವರ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿ ಧೈರ್ಯ ತುಂಬಿದ್ದೇನೆ. ಬಡವರ ಈ ಕುಟುಂಬಕ್ಕೆ ರಾಜ್ಯ ಸರಕಾರ ಕೂಡಲೇ ಸ್ಪಂದಿಸಬೇಕು; ಪರಿಹಾರ ಕೊಡಬೇಕಿದೆ ಎಂದು ಒತ್ತಾಯಿಸಿದರು.

ನರೇಂದ್ರ ಮೋದಿಜೀ ಅವರ ನಾಯಕತ್ವದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಾಳೆ 7ನೇ ಬಜೆಟ್ ಅನ್ನು ಮಂಡಿಸುತ್ತಾರೆ. ಸಾಕಷ್ಟು ನಿರೀಕ್ಷೆ ಜೊತೆಗೆ ಸವಾಲು ಅವರ ಮುಂದಿದೆ ಎಂದು ಪ್ರಶ್ನೆಗೆ ಉತ್ತರಿಸಿದರು. ಭಾರತವನ್ನು ಜಗತ್ತಿನ ಅಗ್ರಗಣ್ಯ ರಾಷ್ಟ್ರಗಳ ಸಾಲಿಗೆ ಒಯ್ಯಲು ಪೂರಕ ಉತ್ತಮ ಬಜೆಟ್ ಮಂಡಿಸಲಿದ್ದಾರೆ ಎಂದು ನುಡಿದರು.ಯುವಕರು, ರೈತರು, ಮಧ್ಯಮ ವರ್ಗಕ್ಕೆ ನೆರವಾಗುವ ಹಾಗೂ ಅಭಿವೃದ್ಧಿಗೆ ಪೂರಕವಾದ ಬಜೆಟ್ ಅನ್ನು ಅವರು ಮಂಡಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು. ರಾಜ್ಯಕ್ಕೆ ಸಾಕಷ್ಟು ಕೊಡುಗೆಗಳನ್ನು ನಿರೀಕ್ಷಿಸಲಾಗಿದೆ ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು