LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಬಿಜೆಪಿ ಸಿದ್ಧಾಂತಕ್ಕೆ ವಿರುದ್ಧವಾಗಿರುವುದರಿಂದ ನನ್ನನ್ನು ಗುರಿಯಾಗಿಸಲಾಗುತ್ತಿದೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: 26 ವರ್ಷದ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಡುತ್ತಿರುವ ಆರೋಪಗಳನ್ನು ಸಚಿವ ಪ್ರಿಯಾಂಕ್ ಖರ್ಗೆ ಅವರು ಮಂಗಳವಾರ ತಳ್ಳಿಹಾಕಿದ್ದಾರೆ ಮತ್ತು ಅದರ ಸಿದ್ಧಾಂತಕ್ಕೆ ವಿರುದ್ಧವಾಗಿರುವುದರಿಂದ ಬಿಜೆಪಿ ತನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಹೇಳಿದ್ದಾರೆ.

ಸುದ್ದಿಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ಅವರು, ಆತ್ಮಹತ್ಯೆಗೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ. ಸಂಬಂಧವಿದೆ ಎಂಬುದನ್ನು ಸಾಬೀತುಪಡಿಸುವಲ್ಲಿ ಬಿಜೆಪಿ ವಿಫಲವಾಗಿದೆ ಎಂದರು.

'ಬಿಜೆಪಿಯು ಎಲ್ಲವನ್ನೂ ಮಾಡಬಹುದು. ಆದರೆ, ಈ ಆತ್ಮಹತ್ಯೆಯು ಸರ್ಕಾರಕ್ಕೂ ಮತ್ತು ನನಗೂ ಹೇಗೆ ಸಂಬಂಧಿಸಿದೆ ಎಂಬುದನ್ನು ಕರ್ನಾಟಕದ ಜನರ ಮುಂದಿಡುವಲ್ಲಿ ಅವರಿಗೆ ಇನ್ನೂ ಸಾಧ್ಯವಾಗುತ್ತಿಲ್ಲ. ಈ ವಿಚಾರದ ಮೂಲಕ ಅವರು ತಮ್ಮ ನಾಯಕತ್ವವನ್ನು ಸ್ಥಾಪಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಬಿಜೆಪಿ ಈಗ ಒಂದು ಬಣ-ಪ್ರೇರಿತ ಪಕ್ಷವಾಗಿದೆ. ಕರ್ನಾಟಕದಲ್ಲಿ ನಾಯಕತ್ವದ ಕಿತ್ತಾಟ ನಡೆಯುತ್ತಲೇ ಇದೆ. ಅವರು ಎಂದಿನಂತೆ ಈ ಸಾವನ್ನು ರಾಜಕೀಯ ಮಾಡುತ್ತಿದ್ದಾರೆ' ಎಂದು ದೂರಿದರು.

'ಬಿಜೆಪಿಯವರು ನನ್ನನ್ನು ಗುರಿಯಾಗಿಸುತ್ತಿದ್ದಾರೆ. ಏಕೆಂದರೆ, ನಾನು ಅವರ ಸಿದ್ಧಾಂತಕ್ಕೆ ವಿರುದ್ಧವಾಗಿದ್ದೇನೆ. ನಾನು ಆರ್‌ಎಸ್‌ಎಸ್ ಮತ್ತು ಮನುಸ್ಮೃತಿಯ ವಿರುದ್ಧ ಇದ್ದೇನೆ ಮತ್ತು ನಾನು ಅದರ ಬಗ್ಗೆ ದನಿಯೆತ್ತಿದ್ದೇನೆ. ಅಲ್ಲದೆ, ನಾವು ಬಾಬಾಸಾಹೇಬ್ ಅಂಬೇಡ್ಕರ್ ಅವರ ಆದರ್ಶಗಳನ್ನು ಮತ್ತು ಸಂವಿಧಾನವನ್ನು ಅನುಸರಿಸುತ್ತೇವೆ. ಆದ್ದರಿಂದ ಅವರು ಸಹಜವಾಗಿ ಇಂತಹ ವಿಚಾರಗಳಲ್ಲಿ ಸಿಲುಕಿಸಲು ಪ್ರಯತ್ನಿಸುತ್ತಾರೆ. ಸಂತ್ರಸ್ತರಲ್ಲಿ ಯಾರಿಗಾದರೂ ನ್ಯಾಯ ದೊರಕಿಸಿಕೊಡಲು ಬಿಜೆಪಿಗೆ ನಿಜವಾಗಿಯೂ ಆಸಕ್ತಿ ಇದ್ದರೆ, ಮೊದಲು ವಿಜಯೇಂದ್ರ ತನ್ನ ತಂದೆಯ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣದಲ್ಲಿ ತಾವು ರಾಜೀನಾಮೆ ನೀಡಲಿ' ಎಂದು ಸವಾಲೆಸೆದರು.

ಬೀದರ್ ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಮತ್ತು ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ಕರ್ನಾಟಕ ಬಿಜೆಪಿ ಮುಖ್ಯಸ್ಥ ಬಿವೈ ವಿಜಯೇಂದ್ರ ಹೇಳಿಕೆ ನೀಡಿದ ನಂತರ ಸಚಿವರು ತಿರುಗೇಟು ನೀಡಿದ್ದಾರೆ.

ಪ್ರಿಯಾಂಕ್ ಖರ್ಗೆ ಅವರ ಆಪ್ತ ರಾಜು ಕಾಪನೂರ ಅವರ ಕಿರುಕುಳ ಮತ್ತು ಬೆದರಿಕೆಯಿಂದ ಬೀದರ್‌ನ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಚಿನ್ ಈ ಬಗ್ಗೆ ಡೆತ್‌ನೋಟ್‌ನಲ್ಲಿ ವಿಸ್ತೃತವಾಗಿ ಹೇಳಿದ್ದಾರೆ ಎಂದು ವಿಜಯೇಂದ್ರ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು